ಬೆಳಗಾವಿ, ಡಿಸೆಂಬರ್ 18: ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಬೈರ್ನಟ್ಟಿ(30) ಸಾವನ್ನಪ್ಪಿರುವ ಬೈಕ್ ಸವಾರ. ಮೃತ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಹೊರಟ್ಟಿದ್ದರು. ಅತ್ತ ರಾಜೇಂದ್ರ ಪ್ರಸಾದ್ ಕಾರು ಯಲ್ಲಮ್ಮನ ದರ್ಶನ ಪಡೆದು ವಾಪಸಾಗುವಾಗ ಅಪಘಾತ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ದುರ್ಮರಣ. ರಾಜೇಂದ್ರ ಪ್ರಸಾದ್ ಹಾಗೂ ಕಾರು ಚಾಲಕನಿಗೆ ಗಾಯಗಳಾಗಿ, ಧಾರವಾಡ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.