ಮನ್​ ಕಿ ಬಾತ್​​ನಲ್ಲಿ ಬೆಳಗಾವಿ ರೈತನ ಸಾಧನೆ ಪ್ರಸ್ತಾಪ: ಹಾಡಿಹೊಗಳಿದ ಪ್ರಧಾನಿ ಮೋದಿ

ಮನ್​ ಕಿ ಬಾತ್​​ನಲ್ಲಿ ಬೆಳಗಾವಿ ರೈತನ ಸಾಧನೆ ಪ್ರಸ್ತಾಪ: ಹಾಡಿಹೊಗಳಿದ ಪ್ರಧಾನಿ ಮೋದಿ


ಮನ್ ಕಿ ಬಾತ್‌ನಲ್ಲಿ ಬೆಳಗಾವಿ ರೈತನ ಸಾಧನೆಯ ಪ್ರಸ್ತಾಪ: ಹಾಡಿಹೊಗಳಿದ ಪ್ರಧಾನಿ ಮೋದಿ

ಬೆಳಗಾವಿ, ಮಾರ್ಚ್ 29: ಬೆಳಗಾವಿ ತಾಲೂಕಿನ ಬೋಡಕ್ಯಾನಟ್ಟಿ ಗ್ರಾಮದ ರೈತ ಶಿವಲಿಂಗಪ್ಪ ಸಾತಪ್ಪ ಹುದ್ದಾರ ಮೀನು ಸಾಕಾಣಿಕೆಯಲ್ಲಿ (ಮೀನು ಸಾಕಣೆ) ಯಶಸ್ಸು ಕಂಡಿದ್ದಾರೆ. ಅವರ ಸಾಧನೆ ಕುರಿತು ಪ್ರಧಾನಿ ನರೇಂದ್ರ ಮೋದಿ (ನರೇಂದ್ರ ಮೋದಿ) ಅವರು ಇಂದು ಮನ್ ಕಿ ಬಾತ್ ನಲ್ಲಿ ಉಲ್ಲೇಖಿಸಿದ್ದಾರೆ. ಆ ಮೂಲಕ ದೇಶಾದ್ಯಂತ ಕನ್ನಡಿಗನ ಹೆಸರು ಮೊಳಗಿದೆ. ಆದಾಯ ಗಳಿಸುತ್ತಿರುವ ಶಿವಲಿಂಗಪ್ಪ ಸಾತಪ್ಪ ಹುದ್ದಾರ ಅವರ ಕಥೆ ನಿಜಕ್ಕೂ ರೋಚಕವಾಗಿದೆ. ಸದ್ಯ ಹುದ್ದಾರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ.

30 ಲಕ್ಷಕ್ಕೂ ಅಧಿಕ ಖರ್ಚು: ಮೂರು ವರ್ಷದಿಂದ ಮೀನು ಸಾಗಾಣಿಕೆ

ಬೋಡಕ್ಯಾನಟ್ಟಿ ಎಂಬ ಪುಟ್ಟ ಗ್ರಾಮದಲ್ಲಿ ಶಿವಲಿಂಗಪ್ಪ ಅವರು ತಮ್ಮ ಪುತ್ರ ರಾಜು ನೆರವಿನಿಂದ ಒಂದು ಮಳಿಗೆಯಲ್ಲಿ ಕೃಷಿ ಹೊಂಡದಲ್ಲಿ ಬಯೋಪ್ಲಾಕ್ ತಂತ್ರಜ್ಞಾನವನ್ನು ಬಳಸಿ ಕುಚ್ಚು(ಮರಲ್) ಮೀನು ಸಾಕಾಣಿಕೆ ಮಾಡುತ್ತಿದ್ದಾರೆ. ಮೀನುಗಾರಿಕೆಗೆ 30 ಲಕ್ಷಕ್ಕೂ ಅಧಿಕ ಖರ್ಚು ಮಾಡಿ ಆರಂಭಿಸಿರುವ ಶಿವಲಿಂಗಪ್ಪ, ಕಳೆದ ಮೂರು ವರ್ಷದಿಂದ ಮೀನು ಸಾಗಾಣಿಕೆ ಮಾಡುತ್ತಿದ್ದಾರೆ.

ಒಂದು ಜಮೀನಿನಲ್ಲಿ ನಾಲ್ಕು ಕೃಷಿ ಹೊಂಡ ನಿರ್ಮಿಸಿ 15 ಸಾವಿರ ಮೀನುಗಳನ್ನ ಸಾಗಾಣಿಕೆ ಮಾಡಲಾಗಿದೆ. ಆಂಧ್ರಪ್ರದೇಶದ ವಿಜಯವಾಡದಿಂದ ಮೀನು ಮರಿಗಳನ್ನ ತರುತ್ತಾರೆ. ಏಳರಿಂದ ಎಂಟು ತಿಂಗಳವರೆಗೆ ಒಂದು ಬ್ಯಾಚ್ ರೆಡಿಯಾಗುತ್ತೆ. ಮೀನು ಬೇಕಾದವರು ಇವರ ಕೃಷಿ ಹೊಂಡಕ್ಕೆ ಬಂದು ಹೋಗುತ್ತಾರೆ. ಪ್ರತಿ 15 ದಿನಕ್ಕೊಮ್ಮೆ ಕೃಷಿ ಹೊಂಡದ ನೀರು ಬದಲಾಗುತ್ತದೆ. ಮೊದಲ ಬ್ಯಾಚ್‌ನಲ್ಲಿ 25 ಲಕ್ಷ, ಎರಡನೇ ಬ್ಯಾಚ್‌ನಲ್ಲಿ 22 ಲಕ್ಷ ಹೀಗೆ ಲಕ್ಷ ಲಕ್ಷ ಆದಾಯ ಗಳಿಸುತ್ತಿದೆ.

ಇದನ್ನೂ ಓದಿ: ಏ 1ರಂದು ಶಿವಕುಮಾರ ಸ್ವಾಮೀಜಿ ಜನ್ಮದಿನ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನಲೆಯಲ್ಲಿ ಬದಲಾವಣೆ

ಇನ್ನು ಈ ವಿಚಾರ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿದ್ದು ವಿಶೇಷ. ಅಷ್ಟೇ ಅಲ್ಲದೆ ಇಂದು ಮನ್ ಕಿ ಬಾತ್‌ನಲ್ಲಿ ಶಿವಲಿಂಗಪ್ಪ ಹುದ್ದಾರ ಅವರ ಯಶಸ್ವಿ ಮೀನುಗಾರಿಕೆ ಬಗ್ಗೆ ದೇಶಕ್ಕೆ ಪರಿಚಯಿಸಿದರು. ಈ ರೀತಿ ಎಲ್ಲಾ ರೈತರು ವಿಭಿನ್ನವಾಗಿ ಪ್ರಯತ್ನಿಸಿದರೆ ದೇಶ ಆರ್ಥಿಕವಾಗಿ ದೃಢವಾಗುತ್ತದೆ. ದೇಶದ ಆರ್ಥಿಕ ಶಕ್ತಿಗೂ ದೊಡ್ಡ ಕೊಡುಗೆ ನೀಡಬಹುದು ಎಂದು ಕರೆ ನೀಡಿದರು.

ಹಲವಾರು ರೂ ಗಳಿಸಿದಾಗಲೂ ಇಷ್ಟು ಖುಷಿಯಾಗಿರಲಿಲ್ಲ: ಶಿವಲಿಂಗಪ್ಪ ಹುದ್ದಾರ

ಪ್ರಧಾನಿ ಮೋದಿಯವರು ತಮ್ಮ ಹೆಸರು ಉಲ್ಲೇಖ ಮಾಡಿದ ವಿಚಾರ ಶಿವಲಿಂಗಪ್ಪ ಹುದ್ದಾರ ಅವರ ಸಂತಸಕ್ಕೆ ಪಾರವೇ ಇರಲ್ಲ. ದೇಶದ ಪ್ರಧಾನಿ ಮೋದಿ ತಮ್ಮ ಬಗ್ಗೆ ಮಾತನಾಡಿದ್ದು ಹೆಮ್ಮೆ ತಂದಿದೆ ಅಂತಾ ಸಂತಸ ಹಂಚಿಕೊಂಡಿದ್ದಾರೆ. ನಾವು ಲಕ್ಷ ಲಕ್ಷ ಆದಾಯ ಗಳಿಸಿದಾಗಲೂ ಇಷ್ಟು ಖುಷಿ ಆಗಲಿಲ್ಲ. ನಾನು, ನನ್ನ ಮಕ್ಕಳಾದ ರಾಜು ಮತ್ತು ಸಾತೇಶ ಪಟ್ಟ ಪರಿಶ್ರಮಕ್ಕೆ ಇಂದು ಫಲ ಸಿಕ್ಕಿತು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ ರಾಜು ಹುದ್ದಾರ

ಶಿವಲಿಂಗಪ್ಪ ಪುತ್ರ ರಾಜು ಮಾತನಾಡಿದ್ದು, ಮನ್ ಕಿ ಬಾತ್ ನಲ್ಲಿ ಮೋದಿ ಅವರು ನಮ್ಮ ಬಗ್ಗೆ ಮಾತನಾಡಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ. ಇದನ್ನು ನಾವು ನಿರೀಕ್ಷಿಸಿರಲಿಲ್ಲ. ಆದರೆ, ನಮ್ಮ ಮೀನು ಸಾಕಾಣಿಕೆ ಸಾಧನೆ ಪ್ರಧಾನಮಂತ್ರಿಗಳವರೆಗೂ ಮುಟ್ಟಿದ್ದು ನಮಗೆ ಇನ್ನಿಲ್ಲದ ಸಂತಸ ತಂದಿದೆ. ಬಹಳಷ್ಟು ಜನರು ಫೋನ್ ಮಾಡಿ ಶುಭಾಶಯ ಕೋರುತ್ತಿದ್ದಾರೆ. ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಅಂತಾ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *