Headlines

ಬೆಳಗಾವಿ: ಬಸವ ತತ್ವದ ಕೆಲ ಸ್ವಾಮೀಜಿಗಳನ್ನು ತಾಲಿಬಾನಿಗಳಿಗೆ ಹೋಲಿಸಿದ ಕಾಡಸಿದ್ದೇಶ್ವರ ಸ್ವಾಮೀಜಿ

ಬೆಳಗಾವಿ: ಬಸವ ತತ್ವದ ಕೆಲ ಸ್ವಾಮೀಜಿಗಳನ್ನು ತಾಲಿಬಾನಿಗಳಿಗೆ ಹೋಲಿಸಿದ ಕಾಡಸಿದ್ದೇಶ್ವರ ಸ್ವಾಮೀಜಿ


ಬೆಳಗಾವಿ, ಡಿಸೆಂಬರ್ 1: ‘ನಮ್ಮಂತ ಬಟ್ಟೆ ಹಾಕಿಕೊಂಡು ಬಸವ ತಾಲಿಬಾನಿಗಳು ನಿಮ್ಮನ್ನು ಟೀಕೆ’ ಎಂದು ಬಸವ ತತ್ವದ ಕೆಲವು ಸ್ವಾಮೀಜಿಗಳನ್ನು ಉದ್ದೇಶಿಸಿ ಕೊಲ್ಹಾಪುರದ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಹನುಮ ಮಾಲಾ ದೀಕ್ಷಾ ಕಾರ್ಯಕ್ರಮದಲ್ಲಿ ಹನುಮ ಮಾಲಾಧಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಹನುಮ ಮಾಲೆ ಹಾಕಿಕೊಳ್ಳುವವರು ಯಾವಾಗಲೂ ಯಾರಿಗೂ ಕೆಟ್ಟದ್ದು ಮಾಡುವವರಲ್ಲ. ಯಾರನ್ನೂ ತಪ್ಪು ದಾರಿಗೆ ಕರೆದುಕೊಂಡು ಹೋಗುವುದಿಲ್ಲ ಎಂದರು.

ನಮ್ಮ ಹುಡುಗಿಯರನ್ನು ಎತ್ತಿಕೊಂಡು ಹೋಗ್ತಿದ್ದಾರೆ. ಅಂಥವರನ್ನು ಆರತಿ ಬೆಳಗಿ ನಿಮ್ಮ ಮನೆಗೆ ಕರೆದುಕೊಂಡು ಬರಬೇಕಾ? ಅವರನ್ನು ಹಿಡಿದು ಬಂದು ಅವರಿಗೆ ತಿಳಿಯುವ ಭಾಷೆಯಲ್ಲಿ ಹೇಳಬೇಕು ಎಂದೂ ಸ್ವಾಮೀಜಿ ಹೇಳಿದ್ದಾರೆ. ಈ ಹಿಂದೆಯೂ ಕಾಡಸಿದ್ದೇಶ್ವರ ಸ್ವಾಮೀಜಿ ಲಿಂಗಾಯತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಗಮನಾರ್ಹ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *