Headlines

6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ರೂ. ಅಕ್ರಮ ಆಸ್ತಿ! ಬೆಳಗಾವಿ ನಗರಾಭಿವೃದ್ಧಿ ಇಂಜಿನಿಯರ್ ಆಸ್ತಿ ಕಂಡು ಲೋಕಾಯುಕ್ತರೇ ಶಾಕ್

ಬೆಳಗಾವಿ, ಏಪ್ರಿಲ್ 11: ಬೆಳಗಾವಿ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಜಯಸಿಂಗ್ ರಾಜಪೂತಗೆ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ನಡೆದ ಲೋಕಾಯುಕ್ತ ದಾಳಿ ಅಂತ್ಯಗೊಂಡಿದ್ದು, ತನಿಖೆ ವೇಳೆ ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಇದೆ. ಬೆಳಗಾವಿಯ ಆಂಜನೇಯ ನಗರ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಯಿತು. ಈ ವೇಳೆ 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ಆಭರಣಗಳು ಇವೆ. ಇದಲ್ಲದೆ 3.12 ಕೋಟಿ ರೂಪಾಯಿ ಬ್ಯಾಂಕ್ ಡೆಪಾಸಿಟ್ ಇಟ್ಟಿರುವುದು ಬೆಳಕಿಗೆ ಬಂದಿದೆ. ಸವದತ್ತಿ, ಹುಕ್ಕೇರಿ ಹಾಗೂ ಹುಬ್ಬಳ್ಳಿಯ ವಿವಿಧೆಡೆ ಒಟ್ಟು 18 ನಿವೇಶನಗಳನ್ನು ಅಜಯಸಿಂಗ್ ಖರೀದಿಸಿರುವುದು ದಾಖಲೆಗಳಲ್ಲಿದೆ. ಮನೆಯಲ್ಲಿ ಐಷಾರಾಮಿ ಕಾರುಗಳು ಮತ್ತು ಬೈಕ್‌ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ನೀಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಅಜಯಸಿಂಗ್ ಅವರ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವುದು ಮೇಲ್ನೋಟಕ್ಕೆ ದಾಖಲಾಗಿದೆ. ಸದ್ಯಕ್ಕೆ ಎಲ್ಲಾ ದಾಖಲೆಗಳು ನಗದನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಮತ್ತು ತನಿಖೆಯನ್ನು ಮುಂದುವರಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *