ಬೆಳಗಾವಿ, ಡಿಸೆಂಬರ್ 05: ಪಿಹೆಚ್ಡಿ ಪದವಿ ನೀಡದ ಹಿನ್ನೆಲೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ ಪ್ರಕರಣ ಸಂಬಂಧ ಘಟನೆ ಬಗ್ಗೆ ಚರ್ಚಿಸಲು ವಿಶೇಷ ಸಿಂಡಿಕೇಟ್ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಎರಡು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಬೆಳಗಾವಿಯಲ್ಲಿ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ ಕುಲಪತಿ ತ್ಯಾಗರಾಜ್ ಹೇಳಿದ್ದಾರೆ. 4 ದಿನದ ಹಿಂದೆ ಮಾತ್ರ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದ ಬೆನ್ನಲ್ಲೇ ವಿಶ್ವ ವಿದ್ಯಾಲಯ ಸಿಂಡಿಕೇಟ್ ಸಭೆ ಕರೆದು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಸಿಂಡಿಕೇಟ್ ಸಭೆಯ ತೀರ್ಮಾನ ಏನು?
ಪಿಹೆಚ್‌ಡಿ ಪದವಿ ಪಡೆಯಲು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಅರ್ಹನಾಗಿದ್ದಾನೆ. ಹೀಗಾಗಿ ನಿಯಮಾನುಸಾರ ಅರ್ಜಿ ಸಲ್ಲಿಸಿದ್ರೆ ಪಿಹೆಚ್ಡಿ ಪದವಿ ನೀಡುತ್ತೇವೆ. ಕಿರುಕುಳ ಆರೋಪ ಪ್ರಾಧ್ಯಾಪಕ ಕೆ.ಎಲ್.ಎನ್.ಮೂರ್ತಿಗೆ ಕಡ್ಡಾಯ ನಿವೃತ್ತಿಗೆ ಆದೇಶ ನೀಡಲಾಗಿದೆ. ವಿದ್ಯಾರ್ಥಿಗಳು ಜೊತೆಯಲ್ಲಿ ನಡೆದುಕೊಳ್ಳಬೇಕು ಎಂಬ ನಿಯಮ ಇದ್ದು, ಇದನ್ನು ಪಾಲಿಸದ ಹಿನ್ನೆಲೆ ಕಡ್ಡಾಯ ನಿವೃತ್ತಿ ನೀಡಲು ಸಭೆ ತೀರ್ಮಾನ ಮಾಡಿದೆ ಎಂದು ಬೆಳಗಾವಿ ವಾರ್ತಾ ಭವನದಲ್ಲಿ ಸಿ.ಎಂ.ತ್ಯಾಗರಾಜ್.
ಇದನ್ನೂ ಓದಿ: ಪಿಚ್ಚಿ ಗೈಡ್‌ನಿಂದ ಕಿರುಕುಳ, 19ಕ್ಕೂ ಹೆಚ್ಚು ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ವಿದ್ಯಾರ್ಥಿನಿ ಆರೋಪ ಏನಾಗಿತ್ತು?
ಉದ್ದೇಶಪೂರ್ವಕವಾಗಿ ಪಿಎಚ್‌ಡಿ ಪದವಿ ನೀಡದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 19 ಅಧಿಕ ಮಾತ್ರೆಗಳನ್ನು ಸೇವಿಸಿದ್ದ ಅವರನ್ನು ತಕ್ಷಣವೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಲಾಯಿತು.ಗೈಡ್ ಕೆ.ಎಲ್.ಎನ್. ಮೂರ್ತಿ ಅವರು ಕಿರುಕುಳ ನೀಡಿದ್ದ ವಿಚಾರವಾಗಿ ಕುಲಪತಿಯವರಿಗೆ ಹಾಗೂ ರಿಜಿಸ್ಟ್‌ರಾರ್‌ಗೆ ವಿದ್ಯಾರ್ಥಿನಿ ದೂರು ನೀಡಿದ್ದರು. ನಂತರ ಗೈಡ್ ಸಂಬಂಧಿತ ಸಮಸ್ಯೆಯನ್ನು ಪರಿಹರಿಸಲಾಗಿದೆ. ಆದಾಗ್ಯೂ ಟಾರ್ಗೆಟ್ ಮಾಡಿ ಪಿಎಚ್ಡಿ ನೀಡಿಲ್ಲ ಎಂದು ವಿದ್ಯಾರ್ಥಿನಿ ಆರೋಪಿಸಿದ್ದರು.
ಘಟನೆ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ರಾಣಿ ಚನ್ನಮ್ಮ ವಿವಿ ಕುಲಪತಿ ಸಿ.ಎಂ ತ್ಯಾಗರಾಜ್, ಇತಿಹಾಸ ವಿಭಾಗ 2021ರಲ್ಲಿ ವಿದ್ಯಾರ್ಥಿನಿ ಆರಂಭಿಸಿದ್ದ ಸಂಶೋಧನೆ 2025ರಲ್ಲಿ ಪೂರ್ಣವಾಗಿದೆ. ಪ್ರಾಧ್ಯಾಪಕರ ಮೇಲೆ ವಿದ್ಯಾರ್ಥಿನಿ ಕಿರುಕುಳ ಆರೋಪ ಮಾಡಿದ್ದು, ಸಿಂಡಿಕೇಟ್‌ನಲ್ಲಿ ವಿಚಾರ ಮುಂದಿಟ್ಟು ವರದಿ ನೀಡಲು ಸೂಚಿಸಲಾಗಿದೆ. ಆಗ ಪ್ರಾಧ್ಯಾಪಕ ಕಿರುಕುಳ ನೀಡಿದ್ದು ಪ್ರಾಥಮಿಕವಾಗಿ ತಿಳಿದುಬಂದಿತ್ತು. ಹೀಗಾಗಿ ಅವರ ಕೆಲಸದಿಂದ ವಜಾ ಮಾಡಲಾಗಿದೆ. ಇದಾದ ಬಳಿಕ ವಿದ್ಯಾರ್ಥಿನಿ ದೂರು ವಾಪಾಸ್ ಪಡೆದಿದ್ದಳು. ಇಷ್ಟಾದರೂ ಮತ್ತೊಮ್ಮೆ ಸಿಂಡಿಕೇಟ್ ನಲ್ಲಿ ಚರ್ಚೆ ಮಾಡಿ ಪ್ರಮಾಣ ಪತ್ರ ನೀಡಲು ಮುಂದಾಗಿದ್ದೆವು. ತೀರ್ಮಾನ ಆಗದ ಹಿನ್ನೆಲೆ ಘಟಿಕೋತ್ಸವದಲ್ಲಿ ಅವರಿಗೆ ಪಿಎಚ್‌ಡಿ ಪದವಿ ನೀಡಲು ಆಗಲಿಲ್ಲ. ತುರ್ತು ಸಿಂಡಿಕೇಟ್ ಸಭೆ ಕರೆಯಲಾಗಿತ್ತು,ಅದರಲ್ಲಿ ಈ ಬಗ್ಗೆ ತೀರ್ಮಾನ ಮಾಡೋದಾಗಿ ತಿಳಿಸಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.