ಮಧ್ಯಪ್ರಾಚ್ಯ ಸಂಘರ್ಷ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆ, 8 ಕಿಮೀ ವ್ಯಾಪ್ತಿಯಲ್ಲಿ ಡ್ರೋನ್ ನಿಷೇಧ

ಮಧ್ಯಪ್ರಾಚ್ಯ ಸಂಘರ್ಷ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆ, 8 ಕಿಮೀ ವ್ಯಾಪ್ತಿಯಲ್ಲಿ ಡ್ರೋನ್ ನಿಷೇಧ


ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆಚಿತ್ರದ ಕ್ರೆಡಿಟ್ ಮೂಲ: tv9

ಬೆಳಗಾವಿ, ಮಾರ್ಚ್ 5: ಇಸ್ರೇಲ್, ಇರಾನ್, ಅಮೆರಿಕ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬೆಳಗಾವಿ (ಬೆಳಗಾವಿ) ಸಾಂಬ್ರಾ ವಿಮಾನ ನಿಲ್ದಾಣವನ್ನು ‘ರೆಡ್ ಜೋನ್’ ಎಂದು ಘೋಷಿಸಲಾಗಿದೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (DGCA) ಮಾರ್ಗಸೂಚಿಯಂತೆ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಸಾಂಬ್ರಾ ವಿಮಾನ ನಿಲ್ದಾಣದ ಸುತ್ತಮುತ್ತ 8 ಕಿಲೋಮೀಟರ್ ಯಾವುದೇ ರೀತಿಯ ಡ್ರೋನ್ ಮತ್ತು ಅನ್ಮ್ಯಾಂಡ್ ಏರಿಯಲ್ ವಾಹನಗಳು (UAV) ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ರೆಡ್ ಝೋನ್ ಮತ್ತು ಎಲ್ಲೋ ಝೋನ್ ಯ್ಯಾಟ್ ಅನ್ನು ಅನುಮತಿಸದೆ ಡ್ರೋನ್ ಹಾರಾಟ ನಡೆಸುವುದು ಕಾನೂನುಬಾಹಿರ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಪತ್ರಿಕಾ ಪ್ರಕಟಣೆ ಹೊರಡಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿಮಾನ ನಿಲ್ದಾಣದ ಭದ್ರತೆ ದೃಷ್ಟಿಯಿಂದ ಈ ಕ್ರಮ ಅತ್ಯಾವಶ್ಯಕವಾಗಿದ್ದು, ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ.

ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲಾಗಿದೆ, ಸಾರ್ವಜನಿಕರು ಒದಗಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಇದನ್ನೂ ಓದಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ 5ನೇ ವಿಮಾನ: 3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್

ಪೊಲೀಸ್ ಆಯುಕ್ತರ ಪ್ರಕಟಣೆಯಲ್ಲೇನಿದೆ?

ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣ ಮತ್ತು ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯ ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ರೆಡ್ ಜೋನ್ (ಕೆಂಪು ವಲಯ) ಎಂದು ಘೋಷಿಸಲಾಗುತ್ತದೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವಿನ್ಯಾಸ (ಕೆಂಪು ವಲಯ/ ಹಳದಿ ವಲಯ) ಯಾವುದೇ ರೀತಿಯ ಪ್ರೋನ್ /ಅನ್ ಮ್ಯಾನಡ್ ಏರಿಯಲ್ ವಾಹನ (UAV/Drone) ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *