ಬೆಳಗಾವಿ/ಬೆಂಗಳೂರು, (ನವೆಂಬರ್.7): ಪ್ರತಿ ಕ್ವಿಂಟಲ್ ಕಬ್ಬಿಗೆ 3500 ರೂ.ನಿಗದಿಪಡಿಸುವಂತೆ ಒತ್ತಾಯಿಸಿ ಬೆಳಗಾವಿಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ ಕಳೆದ 9 ದಿನಗಳಿಂದ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಸರ್ಕಾರ ಮನೆ ಮಾಡಿದೆ. ಕಬ್ಬು ಬೆಳೆಗಾರರ ಪ್ರತಿಭಟನೆಗೆ ರಾಜ್ಯ ಸರ್ಕಾರ ಪ್ರತಿಕ್ರಿಯಿಸಿದ್ದು, ಟನ್ ಕಬ್ಬಿಗೆ 3,300 ರೂ. (ಕಬ್ಬು ಬೆಲೆ) ನೀಡಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ವಿಧಾನಸೌಧ ಸಭಾಂಗಣದಲ್ಲಿ ಶುಕ್ರವಾರ ಸಕ್ಕರೆ ಕಾರ್ಖಾನೆ ಹಾಗೂ ರೈತ ಮುಖಂಡರ ಜತೆ ಶುಕ್ರವಾರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿ.
ಶೇ.11.25 ರಿಕವರಿ ಪ್ರಮಾಣದ ಕಬ್ಬಿಗೆ 3250 ರೂ. ಸಕ್ಕರೆ ಕಾರ್ಖಾನೆಗಳು ಬೇಕು. ಇದಕ್ಕೆ ಸರ್ಕಾರ ಸಹ 50 ರೂ. ಹೆಚ್ಚುವರಿಯಾಗಿ ಆಯ್ಕೆ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕೊನೆಗೂ ಸರ್ಕಾರ 3300 ರೂ ನಿಗದಿಪಡಿಸಿದ ಪ್ರತಿಭಟನಾ ರೈತರಲ್ಲಿ ಸಂಭ್ರಮ ಮನೆ ಮಾಡಿದ್ದು, ಗುರ್ಲಾಪುರ ಕ್ರಾಸ್ ಬಳಿ ಕಳೆದ 9 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
ಒಟ್ಟಿನಲ್ಲಿ ಕಬ್ಬು ಬೆಳೆಗಾರರ ನಿರಂತರ ಪ್ರತಿಭಟನೆ ಫಲ ಕೊಟ್ಟಿದ್ದು, ಒಂದೊಳ್ಳೆ ಶುಭ ಸುದ್ದಿಯೊಂದಿಗೆ ಧರಣಿಗೆ ಕೊನೆ ಬಿದ್ದಿದೆ.