
ಈ ಘಟನೆ ರಾಜ್ಯಾದ್ಯಂತ ಪ್ರತಿಭಟನೆಗೆ ಕಾರಣವಾಗಿತ್ತು. ಕರ್ನಾಟಕ ಹೈಕೋರ್ಟ್ ಈ ಘಟನೆಯನ್ನು ತೀಕ್ಷ್ಣವಾಗಿ ಖಂಡಿಸಿ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿತ್ತು. ರಾಷ್ಟ್ರೀಯ ಮಹಿಳಾ ಆಯೋಗ, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಪೊಲೀಸರು ಮತ್ತು ಸಿಐಡಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು.
ಈ ಪ್ರಕರಣದಲ್ಲಿ ಓರ್ವ ಬಾಲಾಪರಾಧಿ ಸೇರಿ ಒಟ್ಟು 13 ಮಂದಿ ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿತ್ತು. ಸುಧೀರ್ಘವಾಗಿ ಎರಡು ವರ್ಷಗಳ ಕಾಲ ನಡೆದ ವಿಚಾರಣೆಯ ನಂತರ, ಬಾಲಾಪರಾಧಿಯನ್ನು ಹೊರತುಪಡಿಸಿ ಉಳಿದ 12 ಮಂದಿ ಆರೋಪಿಗಳು ತಪ್ಪಿತಸ್ಥರು ಎಂದು ನ್ಯಾಯಾಲಯ ಈಗಾಗಲೇ ತೀರ್ಪು ನೀಡಿದೆ. ಸದ್ಯ ಈ ಎಲ್ಲಾ 12 ಮಂದಿ ಆರೋಪಿಗಳು ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿದ್ದು, ಶಿಕ್ಷೆಯ ಪ್ರಮಾಣದ ಘೋಷಣೆಗೆ ಕಾಯುತ್ತಿದ್ದಾರೆ.