ಕರ್ನಾಟಕದಲ್ಲಿ ಶೇ 19.55ರಷ್ಟು ಮಾರಾಟ ಕುಂಠಿತ: ಪಾತಾಳಕ್ಕೆ‌ ಕುಸಿದ ಬಿಯರ್, ಕಾರಣ ಇಲ್ಲಿದೆ

ಕರ್ನಾಟಕದಲ್ಲಿ ಶೇ 19.55ರಷ್ಟು ಮಾರಾಟ ಕುಂಠಿತ: ಪಾತಾಳಕ್ಕೆ‌ ಕುಸಿದ ಬಿಯರ್, ಕಾರಣ ಇಲ್ಲಿದೆ


ಬೆಳಗಾವಿ, ಡಿಸೆಂಬರ್ 08: ಬೆಳಗಾವಿ ಅಧಿವೇಶನ (ಬೆಳಗಾವಿ ಅಧಿವೇಶನ) ಮೊದಲ ದಿನವೇ ವಿಧಾನಪರಿಷತ್ ಕಲಾಪ ಕಾವೇರಿತ್ತು. ಆಡಳಿತ, ವಿಪಕ್ಷ ನಾಯಕರ ಮಧ್ಯೆ ಆರೋಪ, ಪ್ರತ್ಯಾರೋಪಗಳು ಜೋರಾಗಿಯೇ ನಡೆದಿದೆ. ಈ ವೇಳೆ ಎಂಎಲ್ಸಿ ಎನ್ ರವಿಕುಮಾರ್ (ಎಂಎಲ್‌ಸಿ ಎನ್. ರವಿಕುಮಾರ್) ಮದ್ಯಪ್ರಿಯರ ರಕ್ಷಣೆ ಬಗ್ಗೆ ಪ್ರಶ್ನೆ ಎತ್ತಿದರು. ಸರ್ಕಾರಕ್ಕೆ ಬರುವ ಆದಾಯದಲ್ಲಿ ಮದ್ಯಪ್ರಿಯರ ಆರೋಗ್ಯ ರಕ್ಷಣೆಗೆ ಶೇಕಡಾ 20% ಹಣವನ್ನು ಸರ್ಕಾರ ಮೀಸಲಿಡಬೇಕು ಅಂತಾ ಒತ್ತಾಯಿಸಿದರು. ಇದಕ್ಕೆ ಬಿಜೆಪಿ ಸದಸ್ಯರು ಧ್ವನಿಗೂಡಿಸಿದರು.

ಶೇಕಡಾ 19.55ರಷ್ಟು ಬಿಯರ್ ಮಾರಾಟ ಕುಂಠಿತ: ಸಚಿವ ಆರ್.ಬಿ ತಿಮ್ಮಾಪುರ

ಇದಕ್ಕೆ ಲಿಖಿತ ಉತ್ತರ ನೀಡಿದ ಅಬಕಾರಿ ಸಚಿವ ಆರ್.ಬಿಮ್ಮಾಪುರ, ಮದ್ಯಸೇವನೆ ಮಾಡುವವರಿಗೆ ಪ್ರತ್ಯೇಕವಾಗಿ ಅನುದಾನ ನೀಡಲು ಅಸಾಧ್ಯ. ಸಂಗ್ರಹವಾಗುವ ಹಣ ಆರೋಗ್ಯ ಇಲಾಖೆಗೂ ಹೋಗುತ್ತೆ. ಹಲವು ಆರೋಗ್ಯ ಯೋಜನೆಗಳು ಇವೆ ಎಂದು ಉತ್ತರಿಸಿದ್ದಾರೆ.

ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೆ 195 ಲಕ್ಷ ಪೆಟ್ಟಿಗೆ ಬಿಯರ್ ಮಾರಾಟವಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದಾಗ 46 ರಿಂದ 47 ಲಕ್ಷ ಪೆಟ್ಟಿಗೆ ಬಿಯರ್ ಮಾರಾಟ ಆಗಿವೆ. ಅಂದರೆ ಶೇಕಡಾ 19.55ರಷ್ಟು ಮಾರಾಟ ಬೆಳವಣಿಗೆ ಕುಂಠಿತವಾಗಿದೆ. ಪ್ರಸ್ತುತ ಬಿಯರ್ ಮಾರಾಟವು ಕಡಿಮೆಯಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ: ನಾಳೆ ಬೆಳಗಾವಿಯಲ್ಲಿ ಬೃಹತ್ ಹೋರಾಟಕ್ಕೆ ಸಜ್ಜು

ರಾಜ್ಯದಲ್ಲಿ ಹೆಚ್ಚಿನ ಮಳೆಯಿಂದ ಶೀತ ವಾತಾವರಣದ ಕಾರಣ ಬಿಯರ್ ಮಾರಾಟದಲ್ಲಿ ಕುಸಿತ ಉಂಟಾಗಿದೆ. ಅಬಕಾರಿ ಆದಾಯ ಬಜೆಟ್ ನ ಕಾರ್ಯಕ್ರಮಗಳಿಗೆ ಕೊಡಲಾಗಿದೆ. ಆದಾಯವನ್ನು ರಾಜ್ಯದ ಸಂಚಿತ ನಿಧಿಗೆ ಜಮೆಗೊಳಿಸಲಾಗುತ್ತಿದೆ. ನಿಮ್ಮ ಕೋರಿಕೆಯಂತೆ ಕ್ರಮ ವಹಿಸಲು ಅವಕಾಶ ಇರುವುದಿಲ್ಲ ಎಂದು ಅಬಕಾರಿ ಇಲಾಖೆ ಸಚಿವ ಆರ್.ಬಿ.ತಿಮ್ಮಾಪುರ ಲಿಖಿತ ಉತ್ತರ ನೀಡಿದ್ದಾರೆ.

ಸರ್ಕಾರಕ್ಕೆ ಮನವಿ ಮಾಡಿದ ಬಿಜೆಪಿ ಸದಸ್ಯ ಕೆ.ಎಸ್.ನವೀನ್

ಈ ಚರ್ಚೆ ವೇಳೆ ಮಾತನಾಡಿದ ಬಿಜೆಪಿ ಸದಸ್ಯ ಕೆ.ಎಸ್.ನವೀನ್, ಮದ್ಯಪಾನ ಸಾಮಾಜಿಕ ಪಿಡುಗು. ಕಠಿಣ ಲಿಕ್ಕರ್ ಸೇವನೆಯಲ್ಲಿ ದೇಶದಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ. ಸರ್ಕಾರಕ್ಕೆ ಆದಾಯ ತರಲು ಇಷ್ಟು ಮದ್ಯ ಪೂರೈಸುತ್ತಿದೆ ಅನಿಸುತ್ತೆ. ಅಬಕಾರಿ ಇಲಾಖೆ ಮೇಲೆ ಒತ್ತಡ ಹೇರುತ್ತಿದೆ ಅನಿಸುತ್ತಿದೆ. ಬಂಗಾರಪ್ಪ ಕಾಲದಲ್ಲಿ ಹೆಚ್ಚು ಲೈಸೆನ್ಸ್ ಕೊಡಬಾರದೆಂದು ನಿರ್ಧಾರ ಮಾಡಲಾಗಿತ್ತು.

ಬೆಳಗ್ಗೆ 9 ಗಂಟೆ ನಂತರ ಬಾರ್ ಬಾಗಿಲು ತೆಗೆಯುವ ನಿಯಮ, ಆದರೆ ಈಗ ಹಾಲಿನ ಅಂಗಡಿಗೂ ಮೊದಲೇ ಎಣ್ಣೆ ಅಂಗಡಿ ಆಗುತ್ತಿದೆ. ಅಬಕಾರಿ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲೂ ಟಾರ್ಗೆಟ್ ಕೊಟ್ಟಿದ್ದಾರೆ. ಟಾರ್ಗೆಟ್ ಮುಟ್ಟದಿದ್ದರೆ ಆಯಾ ಜಿಲ್ಲೆಗಳ ಅಧಿಕಾರಿಗಳಿಗೆ ಸಮಸ್ಯೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುವರ್ಣಸೌಧದ ಮೊಗಸಾಲೆಯಲ್ಲಿ ಸಿದ್ದರಾಮಯ್ಯ ಮತ್ತು ಅಶೋಕ್ ನಡುವೆ ‘ನಾಟಿಕೋಳಿ’ ಮಾತು

ಮದ್ಯ ಸೇವನೆ ಮಾಡುವವರ ಲಿವರ್ ಡ್ಯಾಮೇಜ್ ಹೆಚ್ಚಾಗುತ್ತಿದೆ. ಮದ್ಯವ್ಯಸನಿ ಕುಟುಂಬ ಸದಸ್ಯರನ್ನು ಬಿಟ್ಟು ಸಾಯುತ್ತಿದ್ದಾರೆ. ಮಕ್ಕಳು ಅನಾಥರಾಗುತ್ತಿದ್ದಾರೆ, ಪತ್ನಿಯರು ವಿಧವೆ ಆಗುತ್ತಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಾತ್ರ ಲಿವರ್ ಕಸಿ ಮಾಡಲಾಗುತ್ತಿದೆ. ಲಿವರ್ ಕಸಿ ಮಾಡಲು ಲಕ್ಷ ಲಕ್ಷ ಹಣ ಬೇಕು. ಹೀಗಾಗಿ ಅಬಕಾರಿ ಇಲಾಖೆ ಆದಾಯದಲ್ಲಿ 20% ಹಣ ಮೀಸಲಿಡಬೇಕು. ಮದ್ಯಪ್ರಿಯರು ಅನಾರೋಗ್ಯಕ್ಕೊಳಗಾದರೆ ಚಿಕಿತ್ಸೆ ಹಣ ಮೀಸಲಿಡಬೇಕು. ಮದ್ಯಸೇವನೆಯಿಂದ ಸಾವು ನೋವು ತಡೆಯಲು ಸರ್ಕಾರ ಕ್ರಮವಹಿಸಲಿ ಎಂದು ಬಿಜೆಪಿ ಸದಸ್ಯ ಕೆ.ಎಸ್.ನವೀನ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *