Tractor catches fire after touching electric wire: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಒಣಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.

ಚಿಕ್ಕೋಡಿ: ಒಣ ಮೇವು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್‌ಗೆ ವಿದ್ಯುತ್ ತಂದಿ ಸ್ಪರ್ಶಿಸಿ ಬೆಂಕಿ ಹತ್ತಿಕೊಂಡು ಮೇವು ಸುಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಹೊರ ವಲಯದಲ್ಲಿ ಒಣ ಮೇವು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಕಾಣಿಸಿಕೊಂಡಿದೆ.

ಸಂಬರಗಿ ಖಿಳೆಗಾಂವ್ ಮಾರ್ಗದ ರಸ್ತೆ ಮಧ್ಯೆ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿನ ರಾಶಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ, ಸಾರ್ವಜನಿಕರು ಚಾಲಕನಿಗೆ ತಿಳಿಸಿ ದೊಡ್ಡ ಅನಾಹುತ ಅಗುವುದನ್ನು ತಪ್ಪಿಸಿದ್ದಾರೆ.

ಚಾಲಕ ಟ್ರ್ಯಾಕ್ಟರ್ ನಲ್ಲಿದ್ದ ಒಣ ಮೇವನ್ನು ತಕ್ಷಣ ರಸ್ತೆಗೆ ಚೆಲ್ಲಿದ್ದು, ಭಾರಿ ಅನಾಹುತ ತಪ್ಪಿದಂತಾಗಿದೆ.

ಇದನ್ನೂ ಓದಿ: ಕೊಪ್ಪಳ: ಕೌಟುಂಬಿಕ ಕಲಹ, ಇಬ್ಬರು ಮಕ್ಕಳ ಸಮೇತ ಕೆರೆಗೆ ಹಾರಿದ ಅಮ್ಮ

ಸ್ಥಳಕ್ಕೆ ಅಥಣಿ ಅಗ್ನಿಶಾಮಕ ದಳದ ಅಧಿಕಾರಿಗಳು ಭೇಟಿ ನೀಡಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಬಾಗಲಕೋಟೆ: ಧಗಧಗನೇ ಹೊತ್ತಿ ಉರಿದ ಪೀಠೋಪಕರಣ ಮಳಿಗೆ: ಲಕ್ಷಾಂತರ ಮೌಲ್ಯದ ಆಸ್ತಿ ಹಾನಿ

Source link
ಒಣ ಮೇವು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ