
ಧಾರವಾಡ, ಡಿಸೆಂಬರ್ 17: ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕ್ಯಾರಕೊಪ್ಪ ಗೇಟ್ ಬಳಿ ನಡೆದಿದೆ. ಬಳ್ಳಾರಿ ಮೂಲದ ಪಲ್ಲವಿ(24) ಆತ್ಮಹತ್ಯೆಗೆ ಶರಣಾದ ಯುವತಿ, ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಗಾಗಿ ಧಾರವಾಡಕ್ಕೆ ಬಂದಿದ್ದಳು. ಯುವತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆ ಪರೀಕ್ಷಿಸಿದಾಗ ಆಕೆಯ ಪ್ಯಾಂಟ್ ಕಿಸೆಯಲ್ಲಿ ಡೆತ್ ಇದೆ.
ಎರಡು ಡೆತ್ತ್ ನೋಟು ಪತ್ತೆ
ಮೃತ ಪಲ್ಲವಿಯ ಪ್ಯಾಂಟ್ ಕಿಸೆಯಲ್ಲಿ ಎರಡು ಪುಟಗಳ ನೋಟು ಬರೆದಿದ್ದು, ಅದರಲ್ಲಿ ತಂದೆ ತಾಯಿ ಬಗ್ಗೆ ಆಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನಗೆ ಯಾವತ್ತೂ ನೀವು ಪ್ರೀತಿ ನೀಡಿಲ್ಲ. ಹಾಸ್ಟೆಲ್ನಲ್ಲೇ ನನ್ನ ಬೆಳೆಸಿದೆ. ನನ್ನ ಬೇಕು ಮತ್ತು ಬೇಡಗಳನ್ನು ನೀವು ಕೇಳಿದ ಕಾರಣ ನಾನು ನೋವುಂಡಿದ್ದೇನೆ ಎಂದು ಬರೆದಿರೋದು ಕಂಡುಬಂದಿದೆ. ಮತ್ತೊಂದು ಡೆತ್ ನೋಟ್ ಆಕೆಯ ರೂಮಿನಲ್ಲಿ ಸಿಕ್ಕಿದ್ದು, ಪ್ರೀತಿಸುತ್ತಿದ್ದ ಯುವಕನ ಬಳಿ ಪಲ್ಲವಿ ಕ್ಷಮೆ ಕೇಳಿದ್ದಾಳೆ. ನಮ್ಮವರು ನಿನ್ನೊಡನೆ ಬದುಕಲು ಅವಕಾಶ ಕೊಡಲಿಲ್ಲ. ನನ್ನ ಮನಸ್ಸಿಗೆ ನೋವಾಗಿದೆ. ನನ್ನನ್ನು ನೀನು ಕ್ಷಮಿಸು, ಈ ನನ್ನ ಸಾವಿಗೆ ನಾನೇ ಕಾರಣ ಎಂದು ಪಲ್ಲವಿ ಸ್ಪಷ್ಟವಾಗಿ ತಿಳಿಸಿದ್ದಾಳೆ.
ಇದನ್ನೂ ಓದಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್ಗಳು ಭಸ್ಮ
ಪಲ್ಲವಿ ಮತ್ತು ಬಳ್ಳಾರಿ ತಾಲೂಕಿನ ದಮ್ಮೂರು ಕಗ್ಗಲ್ಲು ಗ್ರಾಮದ ನಿವಾಸಿ ಯುವಕ ಪ್ರೀತಿಸುತ್ತಿದ್ದರು. ಈ ವಿಷಯವನ್ನು ಪಲ್ಲವಿ ಮನೆಯಲ್ಲೂ ಇವರು ಪ್ರಸ್ತಾಪಿಸಿದ್ದು, ಆ ವೇಳೆ ಕುಟುಂಬ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಜೊತೆಗೆ, ತಾಯಿಯ ಉತ್ಪನ್ನೊಬ್ಬರ ಜೊತೆ ಪಲ್ಲವಿಯ ಮದುವೆ ನಿಶ್ಚಯ ಕೂಡ ಮಾಡಲಾಯಿತು. ಹೀಗಾಗಿ ಆಕೆ ಬಹಳ ನೊಂದಿದ್ದಳು ಎಂಬ ವಿಷಯ ಕೂಡ ತನಿಖೆ ವೇಳೆ ಗೊತ್ತಾಗಿದೆ.
‘ಅಪಪ್ರಚಾರ ಮಾಡಿದ್ರೆ ಕಠಿಣ ಕ್ರಮ’
ಈ ಘಟನೆ ಸಂಬಂಧ ಹುಬ್ಬಳ್ಳಿಯಲ್ಲಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ. ವೈಯಕ್ತಿಕ ಕಾರಣಕ್ಕಾಗಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ನೇಮಕಾತಿ ಪ್ರಕ್ರಿಯೆ ಆಗದಿರೋದಕ್ಕೆ ಪಲ್ಲವಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅಪಪ್ರಚಾರ ಮಾಡಲಾಗ್ತಿದೆ. ಪಲ್ಲವಿ ಸಾವಿಗೂ ಉದ್ಯೋಗ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ. ಆಕೆಯ ಜೇಬಿನಲ್ಲಿ ಎರಡು ಡೆತ್ನೋಟ್ಗಳು ಇವೆ. ವಿಚಾರಕ್ಕೆ ಆತ್ಮಹತ್ಯೆ ಎಂದು ನಮೂದಿಸಿರುವ ವೈಯಕ್ತಿಕ ಕಾರಣ, ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಯುವತಿ ಆತ್ಮಹತ್ಯೆಗೆ ಬೇರೆ ಬಣ್ಣ ಕಟ್ಟುವ ಕೆಲಸ ಮಾಡಬಾರದು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.