
ಬೆಳ್ತಂಗಡಿ, ಏ.13: ತಾಲೂಕಿನ ಕೊಡಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಅತೀ ವೇಗವಾಗಿ ಬಂದ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಪಾದಚಾರಿಗಳ ಮೇಲೆ ಉರುಳಿ ಬಿದ್ದಿರುವ ಭೀಕರ ಘಟನೆ ನಡೆದಿದೆ. ಈ ಘಟನೆಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಬೊಲೆರೊ ಜೀಪ್‌ನಿಂದ ಇಳಿದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಮಾರುತಿ ಓಮ್ನಿ ಕಾರು, ತೀಕ್ಷ್ಣವಾದ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಉರುಳುತ್ತಾ ಬಂದ ಕಾರು ಹಠಾತ್ತಾಗಿ ಪಾದಚಾರಿಗಳ ಗುಂಪಿನ ಮೇಲೆ ಹರಿದಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಕೂದಲೆಳೆ ಅಂತರದಲ್ಲಿ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಆದರೆ, ದುರದೃಷ್ಟವಶಾತ್ ಮತ್ತೊಬ್ಬ ಮಹಿಳೆ ಪಲ್ಟಿಯಾದ ಕಾರಿನ ಅಡಿಯಲ್ಲಿ ಸಿಲುಕಿಕೊಂಡಿದ್ದು, ಗಂಭೀರವಾಗಿ ಸಿಕ್ಕಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ಕಾರಿನ ಅಡಿಯಲ್ಲಿ ಸಿಲುಕಿದ ಮಹಿಳೆಯನ್ನು ಹೊರತೆಗೆದು ತಕ್ಷಣವೇ ಆಟೋರಿಕ್ಷಾ ಮೂಲಕ ಬೆಳ್ಳಂಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಡೀ ಘಟನೆಯ ಭಯಾನಕ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ