ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಜ್ (ಚಿತ್ರ ಕೃಪೆ: x.com/vijayrpbjp)ಚಿತ್ರ ಕ್ರೆಡಿಟ್ ಮೂಲ: X
ಬೆಂಗಳೂರು, ನವೆಂಬರ್ 10: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ (ಕೆಂಪೇಗೌಡ ವಿಮಾನ ನಿಲ್ದಾಣ) ನಿಲ್ದಾಣದ ಟರ್ಮಿನಲ್-2ರಲ್ಲಿ ಸಾಮೂಹಿಕ ನಮಾಜ್ (ನಮಾಜ್) ಮಾಡಿರುವ ವಿಡಿಯೋ ವೈರಲ್ (ವಿಡಿಯೋ ವೈರಲ್) ಆದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಇದನ್ನು ಒಪ್ಪುತ್ತಾರೆಯೇ ಎಂದು ಕರ್ನಾಟಕ ಬಿಜೆಪಿ (ಬಿಜೆಪಿ) ವಕ್ತಾರ ವಿಜಯ್ ಪ್ರಸಾದ್ ಪ್ರಶ್ನಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಈ ವ್ಯಕ್ತಿಗಳು ಅತಿ ಹೆಚ್ಚಿನ ಭದ್ರತೆ ಇರುವ ವಿಮಾನ ನಿಲ್ದಾಣ ವಲಯದಲ್ಲಿ ನಮಾಜ್ ಮಾಡಲು ಪೂರ್ವಾನುಮತಿ ಪಡೆದಿದ್ದಾರೆಯೇ? ಸಂಬಂಧಿತ ಅಧಿಕಾರಿಗಳಿಂದ ಸೂಕ್ತ ಅನುಮತಿ ಪಡೆದ ನಂತರ ಆರ್ಎಸ್ಎಸ್ ಪಥ ಸಂಚಲನ ನಡೆಸಿದಾಗಲೂ ಆಕ್ಷೇಪಿಸುವ ಸರ್ಕಾರ, ನಿರ್ಬಂಧಿತ ಸಾರ್ವಜನಿಕ ಪ್ರದೇಶದಲ್ಲಿ ನಮಸ್ಕಾರ ಮಾಡಿದ ಚಟುವಟಿಕೆಗಳನ್ನು ಏಕೆ ನಿರ್ಲಕ್ಷಿಸುತ್ತದೆ’ ಎಂದು ಅವರು ಪ್ರಶ್ನಿಸಿದ್ದಾರೆ.
ಇದು ಸೂಕ್ಷ್ಮ ವಲಯದಲ್ಲಿ ಗಂಭೀರ ಭದ್ರತಾ ಕಳವಳ ಉಂಟುಮಾಡುವುದಿಲ್ಲ ಎಂದು ವಿಜಯ್ ಪ್ರಸಾದ್ ಪ್ರಶ್ನಿಸಿದ್ದಾರೆ.
ಕರ್ನಾಟಕ ಬಿಜೆಪಿ ವಕ್ತಾರ ವಿಜಯ್ ಪ್ರಸಾದ್ ಎಕ್ಸ್ ಸಂದೇಶ
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ T2 ಟರ್ಮಿನಲ್ ಒಳಗೆ ಇದನ್ನು ಹೇಗೆ ಅನುಮತಿಸಲಾಗಿದೆ? ಮಾನ್ಯ ಮುಖ್ಯಮಂತ್ರಿಗಳೇ @ಸಿದ್ದರಾಮಯ್ಯ ಮತ್ತು ಮಂತ್ರಿ @ಪ್ರಿಯಾಂಕ್ ಖರ್ಗೆ ನೀವು ಇದನ್ನು ಅನುಮೋದಿಸುತ್ತೀರಾ?
ಹೈ-ಸೆಕ್ಯುರಿಟಿ ಏರ್ಪೋರ್ಟ್ ವಲಯದಲ್ಲಿ ನಮಾಜ್ ಮಾಡಲು ಈ ವ್ಯಕ್ತಿಗಳು ಪೂರ್ವಾನುಮತಿ ಪಡೆದಿದ್ದಾರೆಯೇ? ಅದು ಏಕೆ… pic.twitter.com/iwWK2rYWZa
– ವಿಜಯ್ ಪ್ರಸಾದ್ (@vijayrpbjp) ನವೆಂಬರ್ 9, 2025
ಹಜ್ ಯಾತ್ರಿಕರನ್ನು ಬೀಳ್ಕೊಡಲು ಬಂದಿದ್ದ ಕೆಲವರು ವಿಮಾನ ನಿಲ್ದಾಣದ ಟರ್ಮಿನಲ್-2ರ ಒಳಭಾಗದಲ್ಲೇ ಸಾಮೂಹಿಕವಾಗಿ ನಮಾಜ್ ಮಾಡಿದರು. ಇಷ್ಟಾದರೂ ಅಲ್ಲಿದ್ದ ಭದ್ರತಾ ಸಿಬ್ಬಂದಿ ಸುಮ್ಮನೆ ನೋಡುತ್ತಾ ನಿಂತಿದ್ದರು.
ಸರ್ಕಾರಿ ಪ್ರಾಯೋಜಿತ ನಮಸ್: ಅಶೋಕ್
ರಾಜ್ಯ ಕಾಂಗ್ರೆಸ್ ಸರ್ಕಾರ ಮುಸಲ್ಮಾನರ ಓಲೈಕೆ ಮಾಡುತ್ತಿದೆ . ಏನು ಹೇಳುವವರು ಕೇಳುವವರು ಯಾರೂ ಇಲ್ಲ. ಕಾಂಗ್ರೆಸ್ ಸರ್ಕಾರ ಇರುವ ಕಡೆ ವಿಮಾನ ನಿಲ್ದಾಣಗಳಲ್ಲಿ ಮಾತ್ರ ಈ ರೀತಿ ಆಗುತ್ತಿದೆ. ಇದು ಸರ್ಕಾರಿ ಪ್ರಾಯೋಜಿತ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ. ಆರ್ ಎಸ್ ಎಸ್ ನೋಡಿದರೆ ದುರುಗುಟ್ಟುವುದು. ಮುಸ್ಲಿಮರನ್ನು ನೋಡಿದರೆ ತಬ್ಬಿಕೊಳ್ಳುವುದು, ಟೋಪಿ ಹಾಕಿಕೊಳ್ಳುವುದು ಎಂದ ಅಶೋಕ್ ವಾಗ್ದಾಳಿ.
ಇದನ್ನೂ ಓದಿ: ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್ ಆರೋಪ, ವೈರಲ್ ಆಗ್ತಿದೆ ವಿಡಿಯೋ
ಏತನ್ಮಧ್ಯೆ ವಿಮಾನ ನಿಲ್ದಾಣದಲ್ಲಿ ಸಾಮೂಹಿಕವಾಗಿ ನಮಾಜ್ ಮಾಡಿದ ಬಗ್ಗೆ ಮಾಹಿತಿ ಇಲ್ಲ. ಹೆಚ್ಚಿನ ಮಾಹಿತಿ ತಿಳಿದುಕೊಂಡು ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದಾರೆ. ವಿಮಾನ ನಿಲ್ದಾಣ ಆಡಳಿತ ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ