
ಬೆಂಗಳೂರು, ಮಾರ್ಚ್ 20: ಬೆಂಗಳೂರು (ಬೆಂಗಳೂರು) ಉತ್ತರ ತಾಲ್ಲೂಕಿನ ಶೆಟ್ಟಿಹಳ್ಳಿಯಲ್ಲಿರುವ ಪ್ರತಿಷ್ಠಿತ ಪ್ರಿನ್ಸ್ ಟೌನ್ ಅಪಾರ್ಟ್ಮೆಂಟ್ನಲ್ಲಿ ಕೋಟಿ ಕೋಟಿ ಹಣ ವಂಚನೆ ಆರೋಪ ಕೇಳಿಬಂದಿದೆ. ಸುಮಾರು 70 ಫ್ಲಾಟ್ಗಳಿರುವ ಈ ಅಪಾರ್ಟ್ಮೆಂಟ್ನಲ್ಲಿ ಅಸೋಸಿಯೇಷನ್ನ ಸದಸ್ಯರು ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಈ ಬಗ್ಗೆ ಅಪಾರ್ಟ್ಮೆಂಟ್ ನಿವಾಸಿ ಹಾಗೂ ವಕೀಲೆ ನಿಶಾ ಎಂಬವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಅಸೋಸಿಯೇಷನ್ ಅಧ್ಯಕ್ಷ ಅರುಣ್ ಕುಲಕರ್ಣಿ, ಕಾರ್ಯದರ್ಶಿ ಅಲೆಕ್ಸ್, ಖಜಾಂಚಿ ಪ್ರವೀಣ್ ನಾಯ್ಕರ್ ಸೇರಿದಂತೆ ಒಟ್ಟು 18 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಮಾಹಿತಿಯ ಪ್ರಕಾರ, ಪ್ರತಿ ಫ್ಲಾಟ್ನಿಂದ ವರ್ಷಕ್ಕೆ ಸುಮಾರು 60 ಸಾವಿರ ರೂಪಾಯಿ ಸಂಗ್ರಹಿಸಲಾಗುತ್ತಿದೆ, 700 ಫ್ಲಾಟ್ಗಳಿಂದ ಒಟ್ಟಾರೆ ಸುಮಾರು 3.6 ಕೋಟಿ ರೂಪಾಯಿ ವಸೂಲಿ ಮಾಡಲಾಗಿದೆ. ಆದರೆ, ಈ ಹಣವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲು ಬಳಸಲಾಗಿದೆ, ಲೆಕ್ಕಪತ್ರಗಳಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಕಳೆದ ಎರಡು ವರ್ಷಗಳಲ್ಲಿ ಸುಮಾರು 1.73 ಕೋಟಿ ರೂಪಾಯಿ ವಂಚನೆ ನಡೆದಿರುವ ಸಾಧ್ಯತೆಯಿದೆ ಎಂದು ದೂರದಲ್ಲಿ ಉಲ್ಲೇಖಿಸಲಾಗಿದೆ. ಕೆಲವು ಖರ್ಚುಗಳನ್ನು ತಪ್ಪಾಗಿ ತೋರಿಸಲಾಗಿದೆ. ಉದಾಹರಣೆಗೆ; ವಾಟರ್ಮ್ಯಾನ್ಗೆ ಅನಗತ್ಯವಾಗಿ 2 ಲಕ್ಷ ರೂಪಾಯಿಗಳು ಎಂದು ನಮೂದಿಸಿರುವುದು ಗಮನಕ್ಕೆ ಬಂದಿದೆ. ಜೊತೆಗೆ, ಆಡಿಟ್ ಖರ್ಚನ್ನು ಒಂದು ವರ್ಷ 35 ಲಕ್ಷ ರೂಪಾಯಿ, ಮತ್ತೊಂದು ವರ್ಷ 24 ಲಕ್ಷ ರೂಪಾಯಿ ಎಂದು ತೋರಿಸುವುದು ಅನುಮಾನಕ್ಕೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದಲ್ಲದೆ, ಅಸೋಸಿಯೇಷನ್ ಹಣವನ್ನು ಆರೋಪಿಗಳು ತಮ್ಮ ಕುಟುಂಬದ ಸದಸ್ಯರ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಹೆಂಡತಿ, ಮನೆ ಕೆಲಸದವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಬಾಗಲಗುಂಟೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ನೋಟಿಸ್ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ.
ಒಟ್ಟಾರೆಯಾಗಿ, ಪ್ರತಿಷ್ಠಿತ ಅಪಾರ್ಟ್ಮೆಂಟ್ನಲ್ಲಿ ಇಷ್ಟು ದೊಡ್ಡ ಪ್ರಮಾಣದ ಹಣ ವಂಚನೆ ಆರೋಪ ಕೇಳಿಬಂದಿರುವುದು ನಿವಾಸಿಗಳಲ್ಲಿ ಆತಂಕ ಮತ್ತು ಅಸಮಾಧಾನವನ್ನು ಉಂಟುಮಾಡಿದೆ.
ವರದಿ: ಮಂಜುನಾಥ್, ಟಿವಿ9 ನೆಲಮಂಗಲ
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ