ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗೆ ಮತ್ತೆ ಕಂಟಕ: ಸುರಕ್ಷಿತವಲ್ಲ, ಕಾನೂನು ಬಾಹಿರವೆಂದು ಹೈಕೋರ್ಟ್​ಗೆ ಹೈಪವರ್ ಕಮಿಟಿ ವರದಿ

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗೆ ಮತ್ತೆ ಕಂಟಕ: ಸುರಕ್ಷಿತವಲ್ಲ, ಕಾನೂನು ಬಾಹಿರವೆಂದು ಹೈಕೋರ್ಟ್​ಗೆ ಹೈಪವರ್ ಕಮಿಟಿ ವರದಿ


ಬೆಂಗಳೂರು, ನವೆಂಬರ್ 26: ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಭವಿಷ್ಯ ಮತ್ತೆ ಡೋಲಾಯಮಾನವಾಗುವ ಎಲ್ಲ ಸಾಧ್ಯತೆ ಗೋಚರಿಸುತ್ತದೆ. ಸರ್ಕಾರ ಹೈ ಪವರ್ ಸಮಿತಿ ರಚಿಸಿದ್ದ ವರದಿ ಸಲ್ಲಿಸಿದ್ದು, ಬೈಕ್ ಟ್ಯಾಕ್ಸಿಗಳು ಅಸುರಕ್ಷಿತ ಹಾಗೂ ಕಾನೂನು ಬಾಹಿರ ಎಂದು ಸ್ಪಷ್ಟಪಡಿಸಿದ್ದಾರೆ. ಸಾರಿಗೆ ಸಂಸ್ಥೆಗಳು ಈ ವರದಿಯನ್ನು ಸ್ವಾಗತಿಸುತ್ತವೆ. ಆದರೆ, ಜನಸಾಮಾನ್ಯರು ಮಾತ್ರ ಬೈಕ್ ಟ್ಯಾಕ್ಸಿ ಸೇವೆ ಸುಲಭ ಮತ್ತು ಅನುಕೂಲಕರವೆಂದು ಹೇಳುತ್ತಿದ್ದಾರೆ. ಕಾಮಿಟಿ ಹೈಕೋರ್ಟ್‌ಗೆ ಸಲ್ಲಿಸಿದ ವರದಿಯ ಪ್ರಮುಖ ಅಂಶಗಳ ಪ್ರಕಾರ, ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಸಾಧ್ಯವಿಲ್ಲ. ಇದು ಕೇಂದ್ರ ವಾಹನ ಕಾಯ್ದೆಯ ಉಲ್ಲಂಘನೆಯಾಗಲಿದೆ. ಬೈಕ್ ಟ್ಯಾಕ್ಸಿಗಳು ವಿಪರೀತ ಸಂಚಾರ ದಟ್ಟಣೆಗೆ ಕಾರಣವಾಗಿವೆ. ಜೊತೆಗೆ, ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ತರುವ ಸಾಧ್ಯತೆಗಳಿವೆ.

ಯುವಕರು ಆಹಾರ ವಿತರಣೆಯಂತಹ ಸೇವೆಗಳಲ್ಲಿ ಬೈಕ್ ಬಳಸಿ ಜೀವನೋಪಾಯ ನಡೆಸಲು ಸಮಿತಿ ವಿರೋಧ ವ್ಯಕ್ತಪಡಿಸಿಲ್ಲ. ಆದರೆ, ಪ್ರಯಾಣಿಕರನ್ನು ಹೊಂದಿರುವ ವಾಣಿಜ್ಯ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅವಕಾಶ ನೀಡಲಾಗದು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *