ಸಿಸಿಬಿ ಪೊಲೀಸರ ಮೆಗಾ ರೇಡ್​​: ಪ್ರತಿಷ್ಠಿತ ಅಪಾರ್ಟ್​ಮೆಂಟ್​ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್​​ ಸೀಜ್​

ಸಿಸಿಬಿ ಪೊಲೀಸರ ಮೆಗಾ ರೇಡ್​​: ಪ್ರತಿಷ್ಠಿತ ಅಪಾರ್ಟ್​ಮೆಂಟ್​ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್​​ ಸೀಜ್​


ಬೆಂಗಳೂರು, ಮಾರ್ಚ್ 03: ಡ್ರಗ್ಸ್ ದಂಧೆಕೋರರಿಗೆ ಬೆಂಗಳೂರು ಪೊಲೀಸರಿಗೆ ಭರ್ಜರಿ ಶಾಕ್ ಕೊಟ್ಟಿದ್ದಾರೆ. ನಗರದ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ಸ್ ಪತ್ತೆ ಮಾಡಿರುವುದು, ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಸಿಬಿ ವಶಕ್ಕೆ ಪಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ ಮೂಲದ ಅಶ್ವಿನ್(27), ಮೊಬಿನಾ(25) ಬಂಧಿತ ಆರೋಪಿಗಳಾಗಿದ್ದು, ಎಲ್‌ಎಸ್‌ಡಿ, ಹೈಡ್ರೋ ಗಾಂಜಾ ಮತ್ತು ಚರಸ್ನ ಆರೋಪಿಗಳಿಂದ ಸೀಜ್ ಮಾಡಲಾಗಿದೆ. LSD ಸ್ಟ್ರಿಪ್ಸ್ ಕರ್ನಾಟಕದಲ್ಲಿ ವಶಪಡಿಸಿಕೊಂಡಿರೋದು ಇದೇ ಮೊದಲು.

ಡ್ರಗ್ಸ್ ಮಾರಾಟಕ್ಕೆ ಖತರ್ನಾಕ್ ಪ್ಲ್ಯಾನ್

ಡ್ರಗ್ಸ್

ಸೀಜ್ ಮಾಡಲಾದ ಡ್ರಗ್ಸ್

ಆರೋಪಿಗಳು ದೇವರ ಚಿತ್ರ ಸೇರಿ ವಿವಿಧ ಚಿತ್ರಕಲಾ ರೂಪದಲ್ಲಿ LSD ಸ್ಟ್ರಿಪ್ಟ್ ಮಾರಾಟ ಮಾಡುತ್ತಿರುವುದು ಬೆಂಗಳೂರು ಸಿಸಿಬಿ ನಾರ್ಕೊಟಿಕ್ಸ್ ವಿಭಾಗದ ಕಾರ್ಯಾಚರಣೆ ವೇಳೆ ಬಯಲಾಗಿದೆ. ಬಂಧಿತ ಇಬ್ಬರೂ ಆರೋಪಿಗಳು ಡ್ರಗ್ಸ್ ಪೆಡ್ಲಿಂಗ್ ಅನ್ನೇ ವೃತ್ತಿ ಮಾಡಿಕೊಂಡಿದ್ದರು. ಇವರಿಗೆ ವಿನ್ಸೆಂಟ್ ಎಂಬಾತ ಥಾಯ್ಲೆಂಡ್ ನಿಂದ ಡ್ರಗ್ಸ್ ಸೇವಿಸುತ್ತಿದ್ದ. ವಿಮಾನದ ಆಗಾಗ ಅಲ್ಪ ಪ್ರಮಾಣದಲ್ಲಿ ಡ್ರಗ್ಸ್ ಪೂರೈಕೆ ಆಗುತ್ತಿದೆ. ವಿನ್ಸೆಂಟ್ ಸೂಚಿಸಿದ ಜಾಗದಲ್ಲಿ ಅಶ್ವಿನ್ ಮತ್ತು ಮೊಬಿನಾ ಡ್ರಗ್ಸ್ ಇಡುವುದು ಗೊತ್ತಾಗಿದೆ. ಈ ಪ್ರಕರಣ ಸಂಬಂಧ ಫ್ಲ್ಯಾಟ್ ಮಾಲೀಕನ ಪಾತ್ರದ ಬಗ್ಗೆಯೂ ಸಿಸಿಬಿಯಿಂದ ಪರಿಶೀಲನೆ ಮುಂದುವರಿದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೇರಳ ಪೊಲೀಸರ ಭರ್ಜರಿ ಕಾರ್ಯಾಚರಣೆ; 1 ಕೋಟಿ ರೂ ಮೌಲ್ಯದ ಡ್ರಗ್ಸ್ ಸೀಜ್, ಪೆಡ್ಲರ್ ಅರೆಸ್ಟ್

ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ: ಆರೋಪಿ ಬಂಧನ

ವಿದ್ಯಾರ್ಥಿಗಳು, ಐಟಿಬಿಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದು ಒಡಿಶಾ ಮೂಲದ ಡ್ರಗ್ ಪೆಡ್ಲರ್ ಬೆಂಗಳೂರಿನ ವೈಟ್‌ಫೀಲ್ಡ್ ವೈದ್ಯರನ್ನು ಬಂಧಿಸಿದ್ದಾರೆ. ಲಿಂಗರಾಜ್ ದಾಸ್ ಬಂಧಿತ ಆರೋಪಿ, ಈತನಿಂದ 55 ಲಕ್ಷ ಮೌಲ್ಯದ 27 ಕೆಜಿ ಗಾಂಜಾ, 3 ಕೆಜಿ 200 ಗ್ರಾಂ ಆಶಿಸ್ ಆಯಿಲ್ ಜಪ್ತಿ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *