
ಆನೇಕಲ್, ಮಾರ್ಚ್ 17: ಬೆಂಗಳೂರು ಹೊರವಲಯ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಕಳೆದ ಫೆಬ್ರವರಿ 1 ರಂದು ಸಿನಿಮಾ ಸ್ಟೈಲ್ ನಲ್ಲಿ ರಾಬರಿ ನಡೆಸಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 10 ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಲಾಗಿದೆ. ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿರುವ ಘಟನೆಯ ದೃಶ್ಯದ ಆಧಾರದಲ್ಲಿ ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಆರೋಪಿಗಳನ್ನು ಖೆಡ್ಡಾಕ್ಕೆ ಕೆಡವಿದ್ದಾರೆ.
ಉಡಾನ್ ಕಂಪನಿಯ ಬ್ರಾಂಚ್ಗಳಲ್ಲಿ ಹಣ ಕಲೆಕ್ಷನ್ ಮಾಡಿಸಿಕೊಂಡು ಹೋಗುತ್ತಿದ್ದ ಪ್ರೈವೇಟ್ ಏಜೆನ್ಸಿಯ ಸಿಬ್ಬಂದಿ ಶ್ರೀಕೈಲಾಸ್ ಎಂಬವರ 2 ಬೈಕ್ಗಳಲ್ಲಿ ಹಿಂಬಾಲಿಸಿದ್ದ ನಾಲ್ವರು ದುಷ್ಕರ್ಮಿಗಳ ತಂಡ, ಬೈಕ್ ಅಡ್ಡಗಟ್ಟಿ 31,38,625 ರೂ. ಹಣವನ್ನ ರಾಬರಿ ಮಾಡಿ ಎಸ್ಕೇಪ್ ಆಗುತ್ತಿದೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾಂತ್, ಅಡಿಶನಲ್ ಎಸ್ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆರೋಪಿಗಳ ಬಂಧನಕ್ಕೆ 3 ತಂಡಗಳನ್ನು ರಚಿಸಲಾಗಿತ್ತು. ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ನಿಖಿಲ್, ಪ್ರಶಾಂತ್ ಅಲಿಯಾಸ್ ಪಿಂಕಿ, ಅರುಣ್ ಕುಮಾರ್, ಹರೀಶ್ ಮತ್ತು ರಕ್ಷಿತ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರೀಗ ಬಂಧಿಸಿದ್ದಾರೆ.
ಇದನ್ನೂ ಓದಿ: ಪಾಳು ಮನೆಯಲ್ಲಿ ಅಪ್ರಾಪ್ತೆಯ ಭೀಕರ ಕೊಲೆ; ಭಾವಿ ಪತಿಯಿಂದಲೇ ನಡೀತು ಹತ್ಯೆ!
ಪ್ರಕರಣ ಸಂಬಂಧ ಸಿಟಿವಿ ದೃಶ್ಯ ವಶಕ್ಕೆ ಪಡೆದಿದ್ದು, ಅದರ ಆಧಾರದಲ್ಲಿ ತನಿಖೆ ಆರಂಭಿಸಲಾಗಿದೆ. ಈ ರಾಬರಿನ್ನ ಯಾರೋ ಪರಿಚಿತರೇ ಮಾಡಬಹುದೆಂಬ ಅನುಮಾನ ಖಾಕಿಗೆ ಕಾಡಿತ್ತು. ಪ್ರಕರಣ ಸಂಬಂಧ ಹಲವರ ವಿಚಾರಣೆ ನಡೆಸಿದಾಗ ಉಡಾನ್ ಕಂಪನಿ ಸಿಬ್ಬಂದಿ ರಕ್ಷಿತ್ ಎಂಬಾತ ಲಾಕ್ ಆಗಿದ್ದ. ರಾಬರಿಯ ಮೈಂಡ್ ಈತನೇ ಅನ್ನೋದು ತಿಳಿಯುತ್ತಿದ್ದಂತೆ ಫೀಲ್ಡ್ ಗೆ ಇಳಿದ ಡಿವೈಎಸ್ಪಿ ಮೋಹನ್, ಇನ್ಸ್ ಪೆಕ್ಟರ್ ಕೃಷ್ಣಕುಮಾರ್, ಮಂಜುನಾಥ್ ನೇತೃತ್ವದ ಪೊಲೀಸರ ತಂಡ ತಲೆಮರೆಸಿಕೊಂಡಿರುವ ಆರೋಪಿಗಳ ಹೆಡೆಮುರಿ ಕಟ್ಟಿದೆ. ಸಿನಿಮಾ ಮಾದರಿಯಲ್ಲಿ ದರೋಡೆ ಮಾಡಿದ್ದ ಆರೋಪಿಗಳೀಗ ಬನ್ನೇರುಘಟ್ಟ ಪೊಲೀಸರ ಅತಿಥಿಗಳಾಗಿದ್ದು, ಎಲ್ಲರನ್ನು ಪರಪ್ಪನ ಅಗ್ರಹಾರ ಜೈಲಿಗಟ್ಟಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.