
ಬೆಂಗಳೂರು, ಏಪ್ರಿಲ್ 10: ಮನೆಯ ಮುಂಭಾಗ ನಿಲ್ಲಿಸಿದ್ದ ಬೈಕನ್ನು ಕಳ್ಳನೊಬ್ಬ ಹಾಡಹಗಲೇ ಹೊತ್ತೊಯ್ದಿರುವ ಘಟನೆ ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆದಿದೆ. ಮಾಡಿದ ಒಂದು ಸಣ್ಣ ನಿರ್ಲಕ್ಷ್ಯ ಕಳ್ಳನಿಗೆ ವರದಾನವಾಗಿ ಪರಿಣಮಿಸಿದ್ದು, ಬೈಕ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಲಕ್ಕಸಂದ್ರದ 16ನೇ ಕ್ರಾಸ್ ಬಳಿ ಏಪ್ರಿಲ್ 9 ರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಿವಾಸಿಯೊಬ್ಬರು ಸುಜುಕಿ ಆಕ್ಸೆಸ್ 125 ಬೈಕ್ ಅನ್ನು ಮನೆ ಮುಂದೆ ನಿಲ್ಲಿಸಿದ್ದರು. ಆದರೆ, ಮರೆತು ಬೈಕ್‌ನಲ್ಲಿಯೇ ಕೀ ಬಿಟ್ಟು ಹೋಗಿದ್ದರು. ಇದನ್ನು ಗಮನಿಸಿದ ಕಳ್ಳ, ಯಾರೂ ಇಲ್ಲದ ಸಮಯ ನೋಡಿ ನಿರಾಯಾಸವಾಗಿ ಬೈಕ್ ಸ್ಟಾರ್ಟ್ ಮಾಡಿ ಪರಾರಿಯಾಗಿದ್ದಾನೆ.
ಬೈಕ್ ಕಳುವಾಗ ಕಂಡು ಆತಂಕಕ್ಕೊಳಗಾದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕಳ್ಳತನ ಬೆಳಕಿಗೆ ಬಂದಿದೆ. ಈ ಸಂಬಂಧ ಆಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಕಳ್ಳನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ