
ಬೆಂಗಳೂರು, ಏಪ್ರಿಲ್ 7: ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ಸೋಮವಾರ ಬೆಳಗಿನ ಜಾವ ವಿಚಿತ್ರ ಪ್ರಕರಣ ನಡೆದಿದೆ. ಹೆಲ್ಮೆಟ್ ಧರಿಸಿ ಬೈಕ್‌ನಲ್ಲಿ ಬಂದ ಕಳ್ಳನೊಬ್ಬ, ರಸ್ತೆಯಲ್ಲಿನ ಮನೆಗಳ ಗೇಟ್ ಪರಿಶೀಲಿಸಿ, ಲಾಕ್ ಇಲ್ಲದ ಮನೆಯೊಳಗೆ ನುಗ್ಗಿ ಅಡುಗೆ ಅನಿಲ ಸಿಲಿಂಡರ್ ಕದ್ದು ಪರಾರಿಯಾಗಿದ್ದಾನೆ. ಮುಂಜಾನೆ 3 ಗಂಟೆ ಸುಮಾರಿಗೆ ನಡೆದ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆ ಸಿಕ್ಕ, ಕಾಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ