Headlines

ನಿಮ್ಮ ಸಂಬಂಧಿಕರು ಕಸ್ಟಮ್ಸ್‌ ಬಲೆಗೆ ಬಿದ್ದಿದ್ದಾರೆ ಎಂದು ಕರೆ ಬಂದರೆ ಎಚ್ಚರ! ಏರ್​ಪೋರ್ಟ್​ ಕಸ್ಟಮ್ಸ್ ಇಲಾಖೆ ಹೈ ಅಲರ್ಟ್​

ನಿಮ್ಮ ಸಂಬಂಧಿಕರು ಕಸ್ಟಮ್ಸ್‌ ಬಲೆಗೆ ಬಿದ್ದಿದ್ದಾರೆ ಎಂದು ಕರೆ ಬಂದರೆ ಎಚ್ಚರ! ಏರ್​ಪೋರ್ಟ್​ ಕಸ್ಟಮ್ಸ್ ಇಲಾಖೆ ಹೈ ಅಲರ್ಟ್​


ಬೆಂಗಳೂರು, ಡಿಸೆಂಬರ್ 27: ಬೆಂಗಳೂರಿನಲ್ಲಿ (ಬೆಂಗಳೂರು) ಕಸ್ಟಮ್ಸ್ ಅಧಿಕಾರಿಗಳಂತೆ ನಟಿಸಿ ಜನರನ್ನು ವಂಚಿಸುವ ವಂಚನಾ ಜಾಲ ಹೊಂದಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ವಂಚಕರ ಜಾಲದಿಂದ ತಪ್ಪಿಸಿಕೊಳ್ಳಲು ಜಾಗರೂಕರಾಗಿರುವುದರ ಜೊತೆಗೆ ವಂಚನೆಗೊಳಗಾದ ಸಮದರ್ಭದಲ್ಲಿ ಸೈಬರ್ ಕ್ರೈಂ ಹೆಲ್ಪ್‌ಲೈನ್‌ಗೆ ಕರೆ ಮಾಡುವಂತೆ ಕಸ್ಟಮ್ಸ್ ಇಲಾಖೆ ಎಚ್ಚರಿಸಿದೆ.

ಆರ್ಥಿಕವಾಗಿ ಹಿಂದುಳಿದ ವರ್ಗದ ಜನರೇ ಇವರ ಗುರಿ

ಕಸ್ಟಮ್ಸ್ ಅಧಿಕಾರಿಗಳು ಹೇಳಿಕೊಂಡು, ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ಕಸ್ಟಮ್‌ನಲ್ಲಿ ತಡೆಹಿಡಿದಿದ್ದಾರೆ ಎಂದು ಸುಳ್ಳು ಹೇಳಿ, ಸಮಸ್ಯೆ ಬಗೆಹರಿಸಲು ಹಣ ನೀಡಬೇಕು ಎಂದು ಕಸ್ಟಮ್ಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ವಂಚಕರು ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರನ್ನು ಗುರಿಯಾಗಿಸಿಕೊಂಡು, ಫೋನ್ ಕರೆ, ಸಾಮಾಜಿಕ ಜಾಲತಾಣ ಮತ್ತು ಮೆಸೇಜಿಂಗ್ ಆಯಪ್‌ಗಳ ಮೂಲಕ ಭಯ ಸೃಷ್ಟಿಸಿ ವಂಚನೆ ಮಾಡುತ್ತಿದ್ದಾರೆ. ಪ್ರಯಾಣಿಕ ಕನೊಬ್ಬಸ್ಟಮ್ಸ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ, ತಕ್ಷಣ ದಂಡ ಅಥವಾ ಸುಂಕ ನೀಡದಿದ್ದರೆ ಜೈಲು ಶಿಕ್ಷೆ ಅಥವಾ ಕಿರುಕುಳ ಎದುರಾಗಲಿದೆ ಎಂದು ಹೇಳಲಾಗಿದೆ.

ವಂಚಕರ ಜಾಲ ಹೇಗಿರುತ್ತೆ ನೋಡಿ

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಸ್ಟಮ್ಸ್ ಕಮಿಷನರ್, ಕಸ್ಟಮ್ಸ್ ಅಧಿಕಾರಿಗಳು ಯಾವಾಗಲೂ ಫೋನ್ ಅಥವಾ ವಾಟ್ಸಾಪ್ ಸಾಮಾಜಿಕ ಜಾಲತಾಣಗಳ ಮೂಲಕ ಹಣ ಕೇಳುವುದಿಲ್ಲ. ಬ್ಯಾಂಕ್ ಖಾತೆ, ಯುಪಿಐ ಅಥವಾ ಡಿಜಿಟಲ್ ವಾಲೆಟ್‌ಗೆ ಹಣವನ್ನು ವರ್ಗಾಯಿಸಲು ಹೇಳುವುದಿಲ್ಲ. ಎಲ್ಲಾ ಸರ್ಕಾರಿ ಪಾವತಿಗಳು ಅಧಿಕೃತ ಕೌಂಟರ್ ಅಥವಾ ಆನ್‌ಲೈನ್ ಪೋರ್ಟಲ್ ಮೂಲಕ ರಸೀದಿಯಲ್ಲಿ ಮಾತ್ರ ನಡೆಯುತ್ತವೆ ಎಂದು ಸ್ಪಷ್ಟಪಡಿಸಿದ್ದಾರೆ.

ವಂಚಕರ ಜಾಲವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಧಿಕಾರಿಗಳು, ಆನ್‌ಲೈನ್‌ನಲ್ಲಿ ಸಂಪರ್ಕ ಹೊಂದಿದ ನಂತರ ಸಂಬಂಧಿತ ಅಥವಾ ಸ್ನೇಹಿತ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ ಎಂದು ಹೇಳುತ್ತಾರೆ. ಹಣ ವರ್ಗಾವಣೆ ಮಾಡಿದ ತಕ್ಷಣ ಸಂಪರ್ಕ ಕಡಿತಗೊಳಿಸುತ್ತಾರೆ ಎಂದು ವಿವರಿಸಿದ್ದಾರೆ.

ವಂಚನೆಯ ಕರೆಗಳು ಬಂದಲ್ಲಿ ಇಲಾಖೆಯನ್ನೇ ಸಂಪರ್ಕಿಸಿ

ಸುಂಕ ಪಾವತಿ ವಿಚಾರದಲ್ಲಿ ಯಾವುದೇ ಪ್ರಯಾಣಿಕನಿಗೂ ಕಿರುಕುಳ ನೀಡುವುದಿಲ್ಲ ಎಂದು ಹೇಳಿರುವ ಕಸ್ಟಮ್ಸ್ ಇಲಾಖೆ, ಎಲ್ಲಾ ಪ್ರಕ್ರಿಯೆಗಳು ಸಿಸಿಟಿವಿ ಮೇಲ್ವಿಚಾರಣೆಯಲ್ಲೇ ನಡೆಯುತ್ತವೆ. ಇಂತಹ ವಂಚನೆಯ ಕರೆಗಳು ಬಂದಲ್ಲಿ commrapacc-cusblr@gov.in ಗೆ ಇಮೇಲ್ ಮಾಡಿ ಅಥವಾ ಸೈಬರ್ ಕ್ರೈಂ ಹೆಲ್ಪ್‌ಲೈನ್ 1930 ಗೆ ಸಂಪರ್ಕಿಸಲು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ವಂಚಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.



Source link

Leave a Reply

Your email address will not be published. Required fields are marked *