ಬೆಂಗಳೂರಿನಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್, ಗಾಂಜಾ ಜಪ್ತಿ: ಮಹಿಳೆಯರಿಬ್ಬರು ಸೇರಿ 16 ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್, ಗಾಂಜಾ ಜಪ್ತಿ: ಮಹಿಳೆಯರಿಬ್ಬರು ಸೇರಿ 16 ಆರೋಪಿಗಳ ಬಂಧನ


ಜಪ್ತಿ ಮಾಡಲಾದ ಡ್ರಗ್ಸ್ಚಿತ್ರ ಕ್ರೆಡಿಟ್ ಮೂಲ: tv9 ಕನ್ನಡ

ಬೆಂಗಳೂರು, ಫೆಬ್ರವರಿ 27: ವಿವಿಧ ಡ್ರಗ್ಸ್ ಪ್ರಕರಣಗಳಲ್ಲಿ (ಡ್ರಗ್ಸ್ ಕೇಸ್) ಇಬ್ಬರು ಮಹಿಳೆಯರು ಸೇರಿ ಒಟ್ಟು 16 ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಸಿಸಿಬಿ ಹಾಗೂ ನಗರದ ವಿವಿಧ ಠಾಣೆಗಳ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಿದೇಶಿ ಪ್ರಜೆಗಳು ಸೇರಿದಂತೆ ರಾಜ್ಯದ 8 ಮಂದಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಜೊತೆಗೆ 5.24 ಕೋಟಿ ರೂ ಮೌಲ್ಯದ ಡ್ರಗ್ಸ್, ಮೂರು ಸಾವಿರ ಎಂಡಿಎಂ ಮಾತ್ರೆಗಳು ಮತ್ತು ಗಾಂಜಾವನ್ನು ಜಪ್ತಿ ಮಾಡಲಾಗಿದೆ.

ನೈಜೀರಿಯಾ ಪ್ರಜೆಯ ಡ್ರಗ್ಸ್ ಡಿಲೀಂಗ್‌ಗೆ ಸಾಥ್ ಕೊಡುತ್ತಿದ್ದ ಕಿಲಾಡಿ ಲೇಡಿಯ ಬಂಧನ

ಇನ್ನು ನೈಜೀರಿಯಾ ಪ್ರಜೆಯ ಡ್ರಗ್ಸ್ ಡಿಲೀಂಗ್ ಗೆ ಸಾಥ್ ಕೊಡುತ್ತಿದ್ದ ಕಿಲಾಡಿ ಲೇಡಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುಭಾಷಿಣಿ ಬಂಧಿತ ಮಹಿಳೆ. ಬಾಗಲೂರು ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೇರಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 1 ಕೋಟಿ ರೂ ಮೌಲ್ಯದ ಡ್ರಗ್ಸ್ ಸೀಜ್, ಪೆಡ್ಲರ್ ಅರೆಸ್ಟ್

ಬಂಧಿತ ಸುಭಾಷಿಣಿ, ನೈಜೀರಿಯನ್ ಪ್ರಜೆಯೊಬ್ಬನ ಜೊತೆ ಸೇರಿ ಡ್ರಗ್ಸ್ ಡಿಲೀಂಗ್ ಮಾಡುತ್ತಿದ್ದಳು. ವಿದೇಶಿ ಪ್ರಜೆ ನೈಜೀರಿಯಾದಿಂದ ಡ್ರಗ್ಸ್ ತರಿಸಿಕೊಂಡು ಸುಭಾಷಿಣಿ ಮನೆಯಲ್ಲಿ ಸಂಗ್ರಹಿಸಿದ್ದ. ಆತ ಸೂಚಿಸಿದ ವಿಳಾಸ, ಗ್ರಾಹಕ ಸುಭಾಷಿಣಿ ತಲುಪುತ್ತಿದ್ದಳು.

ವಿದೇಶಿ ಡ್ರಗ್ ಪೆಡ್ಲರ್ ಪರಾರಿ

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ, ಬಂಧಿತರಿಂದ 2 ಕೋಟಿ ರೂ ಮೌಲ್ಯದ 300 ಎಕ್ಸ್ ಟೆಸಿ ಮಾತ್ರೆಗಳನ್ನು ವಶಕ್ಕೆ ಪಡೆದಿದ್ದಾರೆ. ಪರಾರಿಯಾಗಿರುವ ವಿದೇಶಿ ಪೆಡ್ಲರ್‌ಗಾಗಿ ಔಷಧ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: ಬ್ಯಾಂಕಾಕ್, ಹಾಂಕಾಂಗ್ ನಿಂದ ಬರ್ತಿದ್ದ ಅಪಾರ ಪ್ರಮಾಣದ ಡ್ರಗ್ಸ್ ವಶ

ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಕೋಟಿಗಟ್ಟಲೆ ಮಾದಕ ವಸ್ತುಗಳನ್ನು ಸಿಬಿ ಪೊಲೀಸರು ಸೀಜ್ ಮಾಡಿ ಪೆಡ್ಲರ್‌ಗಳನ್ನು ಲಾಕ್ ಮಾಡಿದ್ದಾರೆ. ಬಂಧಿತರಲ್ಲಿ ಬಹುಪಾಲು ನೆರೆ ರಾಜ್ಯದವರು ಸೇರಿ ವಿದೇಶಿಗರನ್ನು ಕಂಬಿಹಿಂದೆ ತಳ್ಳಿದ್ದರು. ಅಮೃತಹಳ್ಳಿ, ಹೆಬ್ಬಗೋಡಿ, ಶೇಷಾದ್ರಿಪುರಂ, ಜೆಬಿ ನಗರ, ಮಹಾಲಕ್ಷ್ಮೀ ಲೇಔಟ್, ಗೋವಿಂದರಾಜ್ ಠಾಣ ವ್ಯಾಪ್ತಿಗಳಲ್ಲಿ ಪೆಡ್ಲರ್‌ಗಳನ್ನು ಲಾಕ್ ಮಾಡಿ ಬರೋಬ್ಬರಿ 20 ಕೋಟಿ ರೂ ಮೌಲ್ಯದ ವಿವಿಧ ರೀತಿಯ ಮಾದಕ ವಸ್ತುಗಳನ್ನು ಸೀಜ್ ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *