Headlines

ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಇವಿ ಬೈಕ್​ ಸಬ್ಸಿಡಿ ಯೋಜನೆ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ

ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಇವಿ ಬೈಕ್​ ಸಬ್ಸಿಡಿ ಯೋಜನೆ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ


ಬೆಂಗಳೂರು, ಮಾ.3: ಸಿಲಿಕಾನ್ ಸಿಟಿಯಲ್ಲಿ ಇಲೆಕ್ಟಿಕ್ ಬೈಕ್ ವಿತರಿಸುವ ನೆಪದಲ್ಲಿ ಬರೋಬ್ಬರಿ 35 ಕೋಟಿ ರೂಪಾಯಿ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ‘ಆಪ್ಕಿ ಇವಿ’ (Aapki EV) ಶೋರೂಂ ಸುಮಾರು 3,250 ಜನರಿಗೆ ಸಬ್ಸಿಡಿ ಆಸೆ ತೋರಿಸಿ ಲೋನ್ ಸುಳಿಗೆ ಸಿಲುಕಿದೆ. ಕೇವಲ 20,000 ರೂ. ಡಿಪಾಸಿಟ್ ಮಾಡಿದರೆ ಸಾಕು, ಉಳಿದ ಹಣ ಕೇಂದ್ರ ಸರ್ಕಾರದ ಸಬ್ಸಿಡಿ ಪಾವತಿ ಎಂದು ನಂಬಲಾಗಿದೆ. ಬೈಕ್ ನೀಡುವ ನೆಪದಲ್ಲಿ ಗ್ರಾಹಕರಿಂದ ಆಧಾರ್, ಪಾನ್ ಕಾರ್ಡ್ ಪಡೆದ ಶೋರೂಂ, ಗ್ರಾಹಕರಿಗೆ ತಿಳಿಯದಂತೆ ಕೊಟಕ್ ಮಹೀಂದ್ರಾ ಬ್ಯಾಂಕ್ ಮೂಲಕ ಲೋನ್ ಮಾಡಿದ್ದಾರೆ.

ಕೇವಲ 35,000 ರೂ. ಬೆಲೆಬಾಳುವ ಸಾಧಾರಣ ಇವಿ ಬೈಕ್‌ಗೆ ಬರೋಬ್ಬರಿ 1.50 ಲಕ್ಷ ರೂಪಾಯಿ ಲೋನ್ ಮಾಡಿ ಬ್ಯಾಂಕ್‌ನಿಂದ ಹಣವನ್ನು ಪಡೆದುಕೊಳ್ಳಲಾಗಿದೆ. ಈ ವಂಚನೆಯಲ್ಲಿ ಕೋಟಕ್ ಮಹೀಂದ್ರಾ ಬ್ಯಾಂಕ್ ಮ್ಯಾನೇಜರ್ ಕೂಡ ಭಾಗವಹಿಸಿದ್ದು, ಗ್ರಾಹಕರು ಅನುಮತಿಯಿಲ್ಲದೆ ಲೋನ್ ಮಂಜೂರು ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಿರುವ ಉದ್ಯೋಗಾಕಾಂಕ್ಷಿಗಳು!

ಇಲ್ಲಿದೆ ನೋಡಿ ವಿಡಿಯೋ:

ತಮ್ಮ ಹೆಸರಿನಲ್ಲಿ ರೂಪಾಯಿ ಸಾಲ ಇರುವುದನ್ನು ಕಂಡು ಬೆಚ್ಚಿಬಿದ್ದ ಗ್ರಾಹಕರು ಇಂದು ಜಾಲಹಳ್ಳಿ ಮೆಟ್ರೋ ನಿಲ್ದಾಣದಿಂದ ಎಂ.ಜಿ. ರಸ್ತೆವರೆಗೆ ಬೃಹತ್ ಬೈಕ್ ರ್ಯಾಲಿ ನಡೆಸಿ ಪ್ರತಿಭಟಿಸಿದರು. 500ಕ್ಕೂ ಹೆಚ್ಚು ಗ್ರಾಹಕರು ಭಾಗವಹಿಸಿ, ತಮಗೆ ನ್ಯಾಯ ಕೊಡಿಸುವಂತೆ ಮತ್ತು ಆರೋಪಿಗಳಾದ ರವಿ ಹಾಗೂ ನುಮಂತರಾಜು ಅವರನ್ನು ಬಂಧಿಸುವಂತೆ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಗುಂಟೆ ಮತ್ತು ಪೀಣ್ಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಗಲಗುಂಟೆ ಠಾಣಾಧಿಕಾರಿಗಳು, ತನಿಖೆ ನಡೆಸಿ ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡುವ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *