ಹೊಸ ವರ್ಷ ಸಂಭ್ರಮಾಚರಣೆಗೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತಾ ಕ್ರಮ? ಇಲ್ಲಿದೆ ನೋಡಿ

ಹೊಸ ವರ್ಷ ಸಂಭ್ರಮಾಚರಣೆಗೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತಾ ಕ್ರಮ? ಇಲ್ಲಿದೆ ನೋಡಿ


ಬೆಂಗಳೂರು, ಡಿಸೆಂಬರ್ 30: ಹೊಸ ವರ್ಷ 2026ರ ಸ್ವಾಗತ ಹಾಗೂ ಸಂಭ್ರಮಾಚರಣೆಗೆ ಬೆಂಗಳೂರು ಸಜ್ಜಾಗುತ್ತಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಪಬ್‌ಗಳಲ್ಲಿ ಸಿದ್ಧತೆಗಳು ಬಿರುಸಾಗಿವೆ. ಆದರೆ, ಗೋವಾ ಪಬ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದಾಗ, ಜನಸಂದಣಿ ಸೇರಲು ಪಬ್‌ಗಳಲ್ಲಿ ಸುರಕ್ಷತಾ ಕ್ರಮಗಳು ಎಷ್ಟು ಇವೆ ಎಂಬುದು ಪ್ರಮುಖ ಪ್ರಶ್ನೆಯಾಗಿದೆ. ಈ ಕುರಿತು ‘ಟಿವಿ9’ ನಗರದ ವಿವಿಧ ಪಬ್‌ಗಳಲ್ಲಿ ರಿಯಾಲಿಟಿ ಚೆಕ್ ನಡೆಸಿದೆ.

ಚರ್ಚ್ ಸ್ಟ್ರೀಟ್, ಬ್ರಿಗೇಡ್ ರೋಡ್ ಮತ್ತು ಕೋರಮಂಗಲದಂತಹ ಪ್ರಮುಖ ಪಬ್ ವಲಯಗಳಲ್ಲಿ ರಿಯಾಲಿಟಿ ಚೆಕ್ ಮಾಡಲಾಗಿತ್ತು, ಅನೇಕ ಪಬ್‌ಗಳಲ್ಲಿ ಅಗ್ನಿಶಾಮಕ ಉಪಕರಣಗಳು ಅಳವಡಿಕೆ, ತುರ್ತು ನಿರ್ಗಮನ ಮಾರ್ಗಗಳು ಲಭ್ಯತೆ ಮತ್ತು ಅವುಗಳ ನಿರ್ವಹಣೆ ಕುರಿತು ಪರಿಶೀಲಿಸಲಾಗಿದೆ. ಕೆಲವು ಪಬ್‌ಗಳಲ್ಲಿ ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯ ಕಂಡುಬಂದಿದೆ, ಇನ್ನು ಕೆಲವು ಪಬ್‌ಗಳು ಪೊಲೀಸ್ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಿ ಉತ್ತಮ ಸಿದ್ಧತೆಗಳನ್ನು ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *