ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ: ಎಳನೀರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ: ಎಳನೀರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್


ಬೆಂಗಳೂರು, ಫೆಬ್ರವರಿ 23: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಬಿಸಿಲಿನ ಪ್ರಮಾಣ (ಬೇಸಿಗೆ ಶಾಖ) ಹೆಚ್ಚಾಗಿದ್ದು, ಜನರು ಕಲ್ಲಂಗಡಿ ಹಾಗೂ ಎಳನೀರು (ಕೋಮಲ ತೆಂಗಿನಕಾಯಿ) ಮೊರೆ ಹೋಗುತ್ತಿದ್ದಾರೆ. ಕಲ್ಲಂಗಡಿ ಹಾಗೂ ಎಳನೀರಿಗೆ ಸದ್ಯ ಭಾರೀ ಡಿಮ್ಯಾಂಡ್ ಇದೆ. ಆದರೆ ಜನರು ಖರೀದಿಸಲು ಹಿಂದುಮುಂದೆ ನೋಡುವಂತಹ ಪರಿಸ್ಥಿತಿ ಉಂಟಾಗಿದೆ. ಹಾಗಾದರೆ ಕಲ್ಲಂಗಡಿ, ಎಳನೀರು ವ್ಯಾಪಾರ ಹೇಗಿದೆ ತಿಳಿಯಿರಿ.

ಈ ಬಾರಿಯ ಬಿಸಿಲಿನ ಪ್ರಮಾಣ ಜೋರಾಗಿಯೇ ಇದೆ. ಸಾಮಾನ್ಯವಾಗಿ ಮಾರ್ಚ್‌ನಲ್ಲಿ ಪ್ರಾರಂಭವಾಗುವ ಬಿಸಿಲಿನ ಝಳ ಈ ಬಾರಿ ಫೆಬ್ರವರಿಯಲ್ಲಿ ಶುರುವಾಗಿದೆ, ಪ್ರಮುಖವಾಗಿ ಬೆಂಗಳೂರಿನಲ್ಲಿ ಸುಡುಬಿಸಿಲಿಗೆ ಜನರು ರೋಸಿಹೋಗಿದ್ದಾರೆ.

ಇದನ್ನೂ ಓದಿ: ಸಾಂಪ್ರದಾಯಿಕ ಅಂತ ಕಲ್ಲಂಗಡಿ, ಐಸ್ ಕ್ರೀಮ್ ತಿನ್ನುವ ಮುನ್ನ ಬಿ ಕೇರ್ಫುಲ್ ಎಂದ ಆರೋಗ್ಯ ಇಲಾಖೆ: ಏಕೆ?

32 ರಿಂದ 33 ಡಿಗ್ರಿವರೆಗೆ ತಾಪಮಾನ ದಾಖಲಾಗುತ್ತಿದೆ. ಕೇವಲ ಬೆಂಗಳೂರು ಅಷ್ಟೇ ಅಲ್ಲದೆ ರಾಜ್ಯದಲ್ಲಿ ಸೂರ್ಯ ನೆತ್ತಿಯ ಮೇಲೆ ಕುಳಿತಿದ್ದಾನೆ. ಸದ್ಯ ಬಿಸಿಲಿನ ಪ್ರಮಾಣ ಹೆಚ್ಚಾದ ಬೆನ್ನಲ್ಲೇ ಜನರ ಕಲ್ಲಂಗಡಿ ಹಾಗೂ ಎಳನೀರಿನ ಮೊರೆ ಹೋಗಿದ್ದಾರೆ. ಸಾಮಾನ್ಯವಾಗಿ 40 ರಿಂದ 50 ರೂ.ಗೆ ಎಳನೀರು ಇದೀಗ 70 ರಿಂದ 80 ರೂ.ಗೆ ಮಾರಾಟವಾಗುತ್ತಿದೆ. ಜೊತೆಗೆ ಕೆ.ಜಿಗೆ 20 ರೂಪಾಯಿ ಕಲ್ಲಂಗಡಿ ಹಣ್ಣು ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಇಷ್ಟೇಪ್ಪ ಬೇಸಿಗೆ ಆರಂಭಕ್ಕೂ ಮುನ್ನವೇ ಬೆಲೆ ದುಟ್ಟಾಗಿರುವುದರಿಂದ ಹೆಚ್ಚಿನ ದರ ಏರಿಕೆಯಾಗಬಹುದೆಂಬ ಆತಂಕ ಗ್ರಾಹಕರನ್ನು ಕಾಡುತ್ತಿದೆ.

ಇನ್ನು ಹವಾಮಾನ ವೈಪರೀತ್ಯದಿಂದ ಅನೇಕ ಭಾಗಗಳಲ್ಲಿ ಏಳನೀರು ಇಳುವರಿ ಕಡಿಮೆಯಾಗಿದೆ. ಸದ್ಯ ಬೆಂಗಳೂರಿನಲ್ಲಿ ಸಿಗುವ ಹೆಚ್ಚಿನ ಎಳನೀರು ಮಂಡ್ಯ, ಚಾಮರಾಜನಗರ, ಮದ್ದೂರು, ಮಳವಳ್ಳಿ, ರಾಮನಗರ, ಹಾಸನ ಮತ್ತು ತುಮಕೂರಿನಿಂದ ಬರುತ್ತದೆ. ಸೀಸನ್ ಆಗಿರುವುದರಿಂದ 50 ರಿಂದ 55 ರೂ.ಗೆ ಸಿಕ್ಕರೆ ಸ್ವಾಭಾವಿಕವಾಗಿ ದರ ಏರಿಕೆಯಾಗಿದೆ. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿರುವ ಮಕ್ಕಳು, ಪೌಷ್ಟಿಕಾಂಶ ಕೊರತೆಯಿಂದ ಬಳಲುತ್ತಿರುವವರು ಅತ್ಯಗತ್ಯ ಎಳನೀರನ್ನು ಬಳಸುವುದರಿಂದ ಎಳೆನೀರಿನ ದರ ದುಸ್ತರವಾಗಿದೆ.

ಇದನ್ನೂ ಓದಿ: ಕೊನೆಗೂ ಎಚ್ಚೆತ್ತ ಆರೋಗ್ಯ ಇಲಾಖೆ: ಉಚಿತ ಸ್ಕ್ಯಾನಿಂಗ್‌ಗೆ ಪರ್ಯಾಯ ವ್ಯವಸ್ಥೆ

ಒಟ್ಟಿನಲ್ಲಿ ಬಿಸಿಲಿನ ಝಳ ಜೋರಾಗಿದ್ದರೆ, ಜನರು ತತ್ತರಿಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಎಳೆನೀರಿನ ಬೆಲೆ ದುಪಟ್ಟಾಗಿರುವುದು ಜನಸಾಮಾನ್ಯರು ಕುಡಿಯಲು ಹಿಂದೆ ಮುಂದೆ ನೋಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ವರದಿ: ಅರುಣ್ ಕುಮಾರ್ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *