ಬೆಂಗಳೂರು, (ಫೆಬ್ರವರಿ 10): ಸಿಲಿಕಾನ್ ಟಿಸಿ ಬೆಂಗಳೂರಿನಲ್ಲಿ (ಬೆಂಗಳೂರು) ದಿನೇ ದಿನೇ ಹೆಚ್ಚುತ್ತಿರುವ ಸಣ್ಣ ಮತ್ತು ಮಧ್ಯಮ ವರ್ಗದ ಹೋಟೆಲ್ಗಳಲ್ಲಿ (ಹೋಟೆಲ್) ಗ್ರಾಹಕರು ತಾಸುಗಟ್ಟಲೆ ಕೂತು ಕಾಲಹರಣ ಮಾಡುವ ಪ್ರವೃತ್ತಿ ಹೋಟೆಲ್ಗೆ ತೀವ್ರ ತೊಂದರೆಯಾಗುತ್ತಿದೆ. ಹೌದು…ಮಾತುಕತೆಗಾಗಿ ನೆಪಕ್ಕೆ ಎರಡು ಟೀ, ಕಾಫಿ ತಗೊಂಡು ಗಂಟೆ ಗಟ್ಟಲೇ ಕುಳಿತು ಟೈಮ್ ಪಾಸ್ ಮಾಡುತ್ತಾರೆ. ಇದಕ್ಕೆ ಪರಿಹಾರವಾಗಿ ಹೋಟೆಲ್ಗಳಲ್ಲಿ ದೀರ್ಘಕಾಲ ಕೂತರೆ, ‘ಟೇಬಲ್ ಚಾರ್ಜ್’ ಅಥವಾ ದಂಡ ವಿಧಿಸುವ ಕುರಿತು ಹೋಟೆಲ್ ಸಂಸ್ಥೆ ಹೊಸ ಚಿಂತನೆ ನಡೆಸಿದೆ, ‘ಟೇಬಲ್ ಚಾರ್ಜ್’ ಹೆಸರಿನಲ್ಲಿ 500 ರಿಂದ 1000 ರೂ.ವರೆಗೆ ದಂಡ ವಿಧಿಸಲು ಮುಂದಾಗಿದೆ.
ಪಾರ್ಕಿಂಗ್ ಚಾರ್ಜ್ ರೀತಿ ಟೇಬಲ್ ಚಾರ್ಜ್
ಬೆಂಗಳೂರಿನಲ್ಲಿ ಹೋಟೆಲ್ ಇತ್ತೀಚೆಗೆ ಹೊಸದೊಂದು ಸಮಸ್ಯೆಯನ್ನು ಎದುರಿಸುತ್ತಿದೆ. ಬೆಂಗಳೂರಿನ ಸಣ್ಣ ಹಾಗೂ ಮಧ್ಯಮ ಹೋಟೆಲ್ಗಳಲ್ಲಿ ಗ್ರಾಹಕರು ಗಂಟೆಗಟ್ಟಲೆ ಕಾಲಹರಣ ಮಾಡುವುದರಿಂದ ವ್ಯಾಪಾರಕ್ಕೆ ನಷ್ಟವಾಗುತ್ತಿದೆ. ಊಟ, ತಿಂಡಿ, ಕಾಫಿ ಎಂದು ಹೋಟೆಲ್ನತ್ತ ಬರುವ ಕೆಲ ಗ್ರಾಹಕರು ಎಲ್ಲವೂ ಮುಗಿದ ಬಳಿಕವೂ ಎದ್ದು ಹೋಗುತ್ತಿಲ್ಲ. ಕಾಫಿ, ಟೀ, ತಿಂಡಿಗೆ ಬರುವ ಗ್ರಾಹಕರಿಂದ ಗಂಟೆಗಟ್ಟಲೆ ನಾನಾ ವಿಚಾರಗಳ ಮಾತುಕತೆ ಆಗುತ್ತೆ. ಭೂ ವ್ಯವಹಾರ, ರಿಯಲ್ ಎಸ್ಟೇಟ್, ರಾಜಕೀಯ ಇತ್ಯಾದಿ ವಿಚಾರಗಳ ಬಗ್ಗೆ ಹರಟೆ ಹೊಡೆಯುವ ಹಿನ್ನೆಲೆ ಇತರೆ ಗ್ರಾಹಕರ ಹೋಟೆಲ್ಗಳಿಗೆ ಸ್ಥಳಾವಕಾಶ ಸಿಗದೇ ವಾಪಸ್ ಹೋಗುತ್ತಾರೆ. ಹೀಗಾಗಿ ಇದನ್ನು ಪರಿಗಣಿಸಿರುವ ಬೆಂಗಳೂರು ಹೋಟೆಲ್ ಸಂಘ, ಪಾರ್ಕಿಂಗ್ ಚಾರ್ಜ್ ರೀತಿ ಟೇಬಲ್ ಚಾರ್ಜ್ ಹಾಕಲು ಚಿಂತನೆ ನಡೆಸಿದೆ.
ಇದನ್ನೂ ಓದಿ: ಬೆಂಗಳೂರಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ: ಶೇ. 50ರಷ್ಟು ಸಿಗಲಿದೆ ಮನೆ ಬಾಡಿಗೆ ಭತ್ಯೆ
ಸದ್ಯಕ್ಕೆ ಅನಗತ್ಯವಾದ ಚರ್ಚೆ ಮಾಡುತ್ತಾ ಕಾಲಹರಣ ಮಾಡಿ ಇತರ ತೊಂದರೆಗಳಿಗೆ ನೀಡುವ ಗ್ರಾಹಕರಿಗೆ ಹೋಟೆಲ್ ಸಿಬ್ಬಂದಿ ಮನವಿ ಹಂತ, ಸಮಸ್ಯೆ ಮತ್ತಷ್ಟು ಗಂಭೀರ ತಲುಪಿದರೆ ಟೇಬಲ್ ಶುಲ್ಕ ವಸೂಲಿ ಮಾಡಲು ಹೋಟೆಲ್ ಸಂಸ್ಥೆ ಸಂಘ ತೀರ್ಮಾನಿಸಿದೆ.
ಈ ನಿರ್ಧಾರವನ್ನು ಜಾರಿಗೆ ತರಲು ಸರ್ಕಾರಕ್ಕೆ ಶೀಘ್ರದಲ್ಲೇ ಪತ್ರ ಬರೆದು ಅನುಮತಿ ಪಡೆಯಲು ಹೋಟೆಲ್ ಸಂಸ್ಥೆ ಸಿದ್ಧತೆ ನಡೆಸುತ್ತಿದೆ. ಸರ್ಕಾರದ ಒಪ್ಪಿಗೆ ದೊರೆತಿದೆ, ಈ ನಿಯಮವನ್ನು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಜಾರಿಗೆ ತರಲು ಯೋಜನೆ ರೂಪಿಸಲಾಗುತ್ತಿದೆ.
ಹೋಟೆಲ್ ಸಂಘದ ಅಧ್ಯಕ್ಷ ಹೇಳಿದ್ದೇನು?
ಈ ಕುರಿತು ಮಾತನಾಡಿದ ಹೋಟೆಲ್ ಸಂಘದ ಅಧ್ಯಕ್ಷ ಪಿ.ಸಿ. ರಾವ್, ಹೋಟೆಲ್ಗಳಲ್ಲಿ ಒಂದು ಟೀ ಕುಡಿದು ಗಂಟೆಗಟ್ಟಲೆ ಕುಳಿತು ಸಭೆಗಳನ್ನು ನಡೆಸುತ್ತಾರೆ. ಇದರಿಂದ ಇತರರಿಗೆ ತೊಂದರೆ ಆಗುವುದಲ್ಲದೆ, ನಮ್ಮ ವ್ಯಾಪಾರಕ್ಕೂ ನಷ್ಟವಾಗುತ್ತಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಹೋಟೆಲ್ಗಳಲ್ಲಿ ಕೂತರೆ ಟೇಬಲ್ ಶುಲ್ಕ ವಿಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 500 ರಿಂದ 1,000 ರೂ.ವರೆಗೆ ಶುಲ್ಕ ವಿಧಿಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ.