
ಬೆಂಗಳೂರು, ಮಾರ್ಚ್ 10: ಅಮೆರಿಕ, ಇರಾನ್ ಹಾಗೂ ಇಸ್ರೇಲ್ ಯುದ್ಧದ ಪರಿಣಾಮವಾಗಿ ಎಲ್ಪಿಜಿ ಸಿಲಿಂಡರ್‌ಗಳ ಕೊರತೆ ಬೆಂಗಳೂರಿನ ಹೋಟೆಲ್‌ಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ಏಕಾಏಕಿ ಸ್ಥಗಿತಗೊಂಡಿದ್ದು, ಮಾರ್ಚ್ 10 ರಂದು ನಗರದ ಹಲವು ಹೋಟೆಲ್‌ಗಳು ಮುಚ್ಚುವ ಸಾಧ್ಯತೆಯಿದೆ. ಎಲ್ಪಿಜಿ ಕೊರತೆಯಿಂದಾಗಿ ಹೋಟೆಲ್‌ಗಳಲ್ಲಿ ಕಾಫಿ, ಟೀ, ಉಪಹಾರ ಮತ್ತು ಊಟ ಲಭ್ಯವಾಗುವುದು ಅನುಮಾನ ಎಂದು ಹೋಟೆಲ್ ಲಭ್ಯವಾಯಿತು.
ಗ್ಯಾಸ್ ಸಿಲಿಂಡರ್ ಇಲ್ಲದೆ ಹೋಟೆಲ್ ನಡೆಸಲು ಅಸಾಧ್ಯ ಎಂದು ಹೋಟೆಲ್ ಸಂಘದ ಅಧ್ಯಕ್ಷ ಪಿಸಿ ರಾವ್ ಹೇಳಿದ್ದಾರೆ. ಕೇಂದ್ರ ಸರ್ಕಾರವು 60-70 ದಿನಗಳ ಸ್ಟಾಕ್ ಇದೆ ಎಂದು ಈ ಹಿಂದೆ ಹೇಳಿದ್ದರೂ, ವಾಣಿಜ್ಯ ಗ್ಯಾಸ್ ಪೂರೈಕೆ ನಿಲ್ಲಿಸಿರುವುದು ಆತಂಕ ಮೂಡಿಸಿದೆ. ರಾಜ್ಯ ಸರ್ಕಾರವು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಒತ್ತಡ ಹೇರಿ ಸಮಸ್ಯೆಯನ್ನು ಪರಿಹರಿಸಬೇಕು ಎಂದು ರಾವ್ ಹೇಳಿದ್ದಾರೆ.
ವರದಿ: ನಟರಾಜ್, ಟಿವಿ9 ಬೆಂಗಳೂರು
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ