Bangaluru Karaga 2026: ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್

Bangaluru Karaga 2026: ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್


ಬೆಂಗಳೂರು ಕರಗ (ಸಂಗ್ರಹ ಚಿತ್ರ)ಚಿತ್ರದ ಕ್ರೆಡಿಟ್ ಮೂಲ: google

ಬೆಂಗಳೂರು, ಫೆಬ್ರವರಿ 27: ವಿಶ್ವವಿಖ್ಯಾತ ಬೆಂಗಳೂರು ಕರಗ (ಬೆಂಗಳೂರು ಕರಗ) ಶಕ್ತ್ಯೋತ್ಸವ ನಗರದ ಸಾಂಸ್ಕೃತಿಕ, ಐತಿಹಾಸಿಕ ಪರಂಪರೆಯ ಹೆಗ್ಗುರುತು. ಹೂವಿನ ದಂಡನ್ನ ಸಾಗುವ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಇದೀಗ ದಿನಾಂಕ ಫಿಕ್ಸ್ ಆಗಿದೆ. ಏಪ್ರಿಲ್ 1ರ ಮಧ್ಯರಾತ್ರಿಯಂದು ಕರಗ ಶಕ್ತ್ಯೋತ್ಸವ. ಆ ಮೂಲಕ ದಿನಗಣನೆ ಆರಂಭವಾಗಿದೆ. ಇನ್ನು 16ನೇ ಬಾರಿಗೆ ಅರ್ಚಕರು ಎ.ಜ್ಞಾನೇಂದ್ರಸ್ವಾಮಿ ಬೆಂಗಳೂರು ಕರಗ ಹೊರಲಿದ್ದಾರೆ.

ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿ

ಧರ್ಮರಾಯ ಸ್ವಾಮಿ ದೇವಾಲಯದ ನೂತನ ವ್ಯವಸ್ಥಾಪನಾ ಸಮಿತಿಯಿಂದ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿಪಡಿಸಲಾಗಿದೆ. ಮಾರ್ಚ್ 24 ರಂದು ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಚಾಲನೆ ಸಿಗಲಿದೆ. ಮಾರ್ಚ್ 30 ರಂದು ಹಸಿಕರಗ ನಂತರ. ಬಳಿಕ ಏಪ್ರಿಲ್ 1ರ ಮಧ್ಯರಾತ್ರಿ ಬೆಂಗಳೂರು ಕರಗ ಶಕ್ತ್ಯೋತ್ಸವ. ಇನ್ನು ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಶಕ್ತ್ಯೋತ್ಸವ. ಕಳೆದ ವರ್ಷ ಬೆಂಗಳೂರು ಕರಗ ಹೊತ್ತಿದ್ದ ಅರ್ಚಕರು ಎ.ಜ್ಞಾನೇಂದ್ರ ಸ್ವಾಮಿ ಅವರು 16ನೇ ಬಾರಿಗೆ ಕರಗ ಹೊರಲಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಕರಗ: ಬೆಂಗಳೂರು ಕರಗ ಮಹೋತ್ಸವ ಇಂದಿನಿಂದ ಶುರು, ಯಾವಾಗ ಏನೇನು ಕಾರ್ಯಕ್ರಮ? ಇಲ್ಲಿದೆ ವಿವರ

ಸಿಲಿಕಾನ್ ಸಿಟಿಯ ವಿಶ್ವವಿಖ್ಯಾತ ಕರಗ ಮಹೋತ್ಸವಕ್ಕೆ ಸದ್ಯದ ದಿನಾಂಕ ನಿಗದಿಯಾಗಿದೆ. ಆ ಮೂಲಕ ಸಿಟಿ ಮದಿ ಕರಗ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ಇನ್ನು ಇತಿಹಾಸ ಕರಗದ ವಿಧಿ ವಿಧಾನಗಳಿಗೆ ಧರ್ಮರಾಯಸ್ವಾಮಿ ದೇವಸ್ಥಾನ ಸಾಕ್ಷಿ ಆಗಲಿದೆ. ಕಳೆದ ಬಾರಿ ಕರಗ ಮಹೋತ್ಸವ ಕೊಂಚ ತಡವಾಗಿ ಆರಂಭವಾಗಿತ್ತು.

ಇದನ್ನೂ ಓದಿ: ಬೆಂಗಳೂರು ಕರಗ: ಸರ್ಕಾರದಿಂದ ಹಣ ಬಿಡುಗಡೆ ವಿಚಾರದಲ್ಲಿ ಗೊಂದಲ, ಯಾರು ಏನಂದರು ನೋಡಿ

ಚೈತ್ರ ಪೌರ್ಣಮಿಯ ಮಧ್ಯರಾತ್ರಿ ಆದಿಶಕ್ತಿ ದ್ರೌಪದಿದೇವಿಯ ಕರಗ ಶಕ್ತ್ಯೋತ್ಸವ ನಡೆಯುತ್ತದೆ, ಇದರ ಪ್ರಥಮ ಭಾಗವಾಗಿ ಮಾರ್ಚ್ 30 ರಂದು ಹಸಿಕರಗ. ಬೆಳಿಗ್ಗೆ ನಾಲ್ಕು ಗಂಟೆ ಸುಮಾರಿಗೆ ಹಸಿಕರಗಕ್ಕೆ ಚಾಲನೆ ದೊರೆಯಲಿದೆ. ತಿಗಳರ ಸಮಾಜದ ನಂಬಿಕೆಯಂತೆ ದ್ರೌಪದಿದೇವಿಯೂ ಹಸಿಕರಗದ ರೂಪದಲ್ಲಿ ಬೆಳಿಗ್ಗೆ ಭೂಮಿಗೆ ಬಂದು ಮೂರು ದಿನಗಳ ಕಾಲ ಭಕ್ತರಿಗೆ ದರ್ಶನ ಮತ್ತು ಬೇಡಿದ ವರಗಳನ್ನು ಕರುಣಿಸುತ್ತಾಳೆ ಎಂಬ ನಂಬಿಕೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *