
ಬೆಂಗಳೂರು, ಮಾರ್ಚ್ 16: ಬೆಂಗಳೂರು ಕರಗ (ಬೆಂಗಳೂರು ಕರಗ) ಶಕ್ತ್ಯೋತ್ಸವಕ್ಕೆ ಕೇವಲ ಒಂಬತ್ತು ದಿನಗಳು ಮಾತ್ರ ಬಾಕಿಯಿದ್ದು, ಉತ್ಸವವನ್ನು ಈ ಬಾರಿ ವಿಶೇಷವಾಗಿ ಆಚರಿಸಲು ಸಕಲ ಸಿದ್ಧತೆಗಳು ಪ್ರಾರಂಭವಾಗಿವೆ. ಐತಿಹಾಸಿಕ ಧರ್ಮರಾಯಸ್ವಾಮಿ ದೇವಾಲಯದಲ್ಲಿ ನಡೆಯುವ ಕರಗ ಶಕ್ತ್ಯೋತ್ಸವ ಈ ಬಾರಿ ಮೈಸೂರು ದಸರಾ ಶೈಲಿಯಲ್ಲೇ ಅದ್ಧೂರಿಯಾಗಿ ನಡೆಯುವ ಸಾಧ್ಯತೆ ಇದೆ. ವಿಶೇಷವಾಗಿ ನಗರದ ಪ್ರಮುಖ ರಸ್ತೆಗಳನ್ನು ಮೈಸೂರು ದಸರಾ ಮಾದರಿಯಲ್ಲಿ ಲೈಟಿಂಗ್ ಮೂಲಕ ಅಲಂಕರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ.
ಹೆಚ್ಚಿನ ರೂ. ವೆಚ್ಚದಲ್ಲಿ ಲೈಟಿಂಗ್!
ಕರಗ ಸಂಭ್ರಮಾಚರಣೆಯ ವೆಚ್ಚ ಒಟ್ಟು 39 ಲಕ್ಷ ರೂಪಾಯಿಗಳಲ್ಲಿ ಲೈಟಿಂಗ್ ಅಳವಡಿಸಲು ಟೆಂಡರ್ ಆಹ್ವಾನಿಸಲಾಗಿದೆ. ಮೊದಲ ಹಂತದಲ್ಲಿ 10.14 ಲಕ್ಷ ರೂಪಾಯಿ ವೆಚ್ಚದಲ್ಲಿ ಧರ್ಮರಾಯಸ್ವಾಮಿ ದೇವಾಲಯ, ಸಂಪಂಗಿ ಕೆರೆ ಹಾಗೂ ಕರಗ ಸಾಗುವ ಪ್ರಮುಖ ಮಾರ್ಗಗಳಲ್ಲಿ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಎರಡನೇ ಹಂತದಲ್ಲಿ 28.92 ಲಕ್ಷ ರೂಪಾಯಿ ವೆಚ್ಚದಲ್ಲಿ ಜಿಬಿಎ ಪ್ರಧಾನ ಕಚೇರಿ, ಪ್ರಮುಖ ವೃತ್ತಗಳು ಮತ್ತು ಕೆಲವು ಪ್ರಮುಖ ಆಯ್ದ ರಸ್ತೆಗಳನ್ನು ಬೆಳಗಿಸಲು ಯೋಜಿಸಲಾಗಿದೆ.
ಏಪ್ರಿಲ್ 1ಕ್ಕೆ ಕರಗ ಶಕ್ತ್ಯೋತ್ಸವ
ಮಾರ್ಚ್ 24 ರಂದು ಧರ್ಮರಾಯಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕರಗ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಮಾರ್ಚ್ 30 ರಂದು ಹಸಿ ಕರಗ ನಡೆಯಲಿದೆ, ಏಪ್ರಿಲ್ 1 ರಂದು ಮುಖ್ಯ ಕರಗ ಶಕ್ತ್ಯೋತ್ಸವ. ಇದರ ಜೊತೆಗೆ ಭಕ್ತರಿಗೆ ಮನರಂಜನೆ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಚರ್ಚೆ ನಡೆಯುತ್ತಿದೆ.
ಇದನ್ನೂ ಓದಿ ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಕಳೆದ ವರ್ಷ ಸುಮಾರು 40 ಲಕ್ಷ ರೂಪಾಯಿಯಲ್ಲಿ ಕರಗ ಉತ್ಸವ ನಡೆಸಲಾಯಿತು. ಆದರೆ ಈ ಬಾರಿ ಕೇವಲ ಲೈಟಿಂಗ್‌ಗಾಗಿಯೇ 39 ಲಕ್ಷ ರೂಪಾಯಿ ವೆಚ್ಚ ಮಾಡಲಾಗುತ್ತಿದೆ, ಈ ಬಾರಿಯ ಕರಗ ಉತ್ಸವ ಮೈಸೂರು ದಸರಾ ಶೈಲಿಯಲ್ಲಿ ಭರ್ಜರಿಯಾಗಿ ಎಂಬ ನಿರೀಕ್ಷೆಯನ್ನು ಹೆಚ್ಚಿಸಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.