
ಬೆಂಗಳೂರು, ಮಾರ್ಚ್ 22: ಬಹುತೇಕ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ರಿಕ್ಕಿ ರೈ ಮೇಲೆ ಅನುಮಾನಗಳು ಕಂಡುಬಂದಿವೆ. ತನಿಖೆ ವೇಳೆ ರಿಕ್ಕಿ ರೈ ನಿವಾಸದಲ್ಲಿ ಪತ್ತೆಯಾದ ಕೆಎ 05 ಎನ್ಆರ್ 0009 ಸಂಖ್ಯೆಯ ಲ್ಯಾಂಬೋರ್ಗಿನಿ ಕಾರನ್ನು ಕಬ್ಬನ್ಪಾರ್ಕ್ ಸಂಚಾರ ಠಾಣೆ ಸೀಜ್ ಮಾಡಲಾಗಿದೆ. ಕಾರು ದಾಖಲೆಗಳ ಪರಿಶೀಲನೆ ನಡೆಸಿದಾಗ ಮಾಲೀಕತ್ವದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ನೋಂದಣಿ ದಾಖಲೆಗಳು ಸರಿಯಿಲ್ಲದ ಕಾರಣ ಪೊಲೀಸರು ಆರ್ಟಿಒಗೆ ಪತ್ರ ಬರೆದಿದ್ದಾರೆ. ಜೊತೆಗೆ, ರಿಕ್ಕಿ ರೈ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗುತ್ತಿದೆ, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಚಾಲಕನ ಗುರುತು ಪತ್ತೆ ಹಚ್ಚುವ ಪ್ರಯತ್ನ ನಡೆಸಲಾಗುತ್ತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.