Headlines

ಎಲ್​ಪಿಜಿ ಸಿಲಿಂಡರ್ ಕೊರತೆ ಬೆನ್ನಲ್ಲೇ ಅರಣ್ಯ ಇಲಾಖೆ ಹೈ ಅಲರ್ಟ್​ ಆಗಿದ್ಯಾಕೆ ಗೊತ್ತಾ?

ಎಲ್​ಪಿಜಿ ಸಿಲಿಂಡರ್ ಕೊರತೆ ಬೆನ್ನಲ್ಲೇ ಅರಣ್ಯ ಇಲಾಖೆ ಹೈ ಅಲರ್ಟ್​ ಆಗಿದ್ಯಾಕೆ ಗೊತ್ತಾ?


ಎಲ್‌ಪಿಜಿ ಸಿಲಿಂಡರ್ ಕೊರತೆ ಬೆನ್ನಲ್ಲೇ ಅರಣ್ಯ ಇಲಾಖೆ ಅಲರ್ಟ್ ಆಗಿದ್ಯಾಕೆ ಗೊತ್ತಾ?

ಬೆಂಗಳೂರು, ಮಾರ್ಚ್ 13: ಇರಾನ್, ಇಸ್ರೇಲ್ ಯುದ್ಧದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ದೇಶದೆಲ್ಲೆಡೆ ಎಲ್ಪಿಜಿ ಸಿಲಿಂಡರ್ ಕೊರತೆ (LPG ಸಿಲಿಂಡರ್ ಬಿಕ್ಕಟ್ಟು) ತೀವ್ರವಾಗಿದೆ. ವಾಣಿಜ್ಯ ಸಿಲಿಂಡರ್ ಸಿಗದೆ ಅದೆಷ್ಟೋ ಹೋಟೆಲ್‌ಗಳು ಸಮಸ್ಯೆಗೀಡಾಗಿವೆ. ಅಡುಗೆ ಮಾಡಲು ಮುಚ್ಚಲು ಇಂಧನವಿಲ್ಲದೆ ಹೋಟೆಲ್‌ಗಳು ಬಾಗಿಲು ಮಾಡುವ ಹಂತಕ್ಕೆ ತಲುಪಿವೆ. ಈ ಸಮಸ್ಯೆಗೆ ಪರಿಹಾರವಾಗಿ ಕೆಲವು ಕಡೆ ಎಲ್ಪಿಜಿ ಸಿಲಿಂಡರ್ ಬದಲಿಗೆ ಸೌದೆ ಬಳಸಿಯೂ ಅಡುಗೆ ಮಾಡಲಾಗುತ್ತಿದೆ. ಹೆಚ್ಚಿನ ಮರದ ಇಂಧನದ ಬೇಡಿಕೆಯಿದೆ. ಹೀಗೆ ಅಕ್ರಮವಾಗಿ ಕಡಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಇಲಾಖೆ ಸಜ್ಜಾಗಿದೆ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಸೌದೆ ಒಲೆ ಬಳಸುವವರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಅನೇಕ ಹೋಟೆಲ್‌ಗಳು, ಪಿಜಿಗಳು ಮತ್ತು ಇತರ ಅಡುಗೆ ಕೇಂದ್ರಗಳು ಮತ್ತೆ ಸಾಂಪ್ರದಾಯಿಕ ಸೌದೆ ಒಲೆಯತ್ತ ಮುಖ ಮಾಡುತ್ತಿರುವುದರಿಂದ ಮರದ ಬಳಕೆ ಹೆಚ್ಚುತ್ತಿದೆ. ಈ ಪರಿಸ್ಥಿತಿ ಮುಂದುವರಿದರೆ ಅಕ್ರಮವಾಗಿ ಮರ ಕಡಿಯುವ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅರಣ್ಯ ಇಲಾಖೆ ಆತಂಕ ವ್ಯಕ್ತಪಡಿಸಿದೆ. ಈ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ ಇರಾನ್-ಇಸ್ರೇಲ್ ಯುದ್ಧ: ಯುದ್ಧದ ಪರಿಣಾಮ ಯಾದಗಿರಿಯ 28 ರೈಸ್ ಮಿಲ್‌ಗಳಿಗೆ ಭಾರೀ ಹೊಡೆತ!

ಗುರುವಾರ ಅರಣ್ಯ ಸಚಿವ ಈಶ್ವರ ಖಂಡ್ರೆ ಈ ಕುರಿತು ಆದೇಶ ಹೊರಡಿಸಿದ್ದು, ಅರಣ್ಯ ಪ್ರದೇಶಗಳಲ್ಲಷ್ಟೇ ಅಲ್ಲದೆ ಸರ್ಕಾರದ ಜಾಗಗಳು, ಉದ್ಯಾನವನಗಳು ಹಾಗೂ ಇತರ ಹಸಿರು ಪ್ರದೇಶಗಳಲ್ಲಿ ಅಕ್ರಮ ಮರ ಕಡಿಯುವ ಘಟನೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಎಲ್‌ಪಿಜಿ ಕೊರತೆಯಿಂದ ಅನೇಕ ಹೋಟೆಲ್‌ಗಳು ಮತ್ತು ಅಡುಗೆ ಕೇಂದ್ರಗಳು ಮರದ ಇಂಧನ ಬಳಕೆಗೆ ಮರಳುತ್ತಿರುವುದರಿಂದ ಬೇಡಿಕೆಯಲ್ಲಿ ಏರಿಕೆಯಾಗಿದೆ. ಹೀಗೆ ಹೆಚ್ಚು ಮರಗಳನ್ನು ಮಾಡಿದರೆ ಪರಿಸರದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಆದ್ದರಿಂದ ಅರಣ್ಯ ಅಧಿಕಾರಿಗಳು ತಮ್ಮ ಯೋಜನೆಯ ಅರಣ್ಯ ಪ್ರದೇಶಗಳು ಮತ್ತು ಹಸಿರು ವಲಯಗಳಲ್ಲಿ ಹೆಚ್ಚುವರಿ ಪೆಟ್ರೋಲಿಂಗ್ ನಡೆಸಬೇಕು ಎಂದು ನಿರ್ದೇಶನ ನೀಡಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *