ಬೆಂಗಳೂರು, ಡಿ.16: ಬೆಂಗಳೂರಿನಿಂದ ಕರಾವಳಿಗೆ ಹೋಗುವ ರೈಲು ಪ್ರಯಾಣಿಕರಿಗೆ ಸಿಹಿಸುದ್ದಿಗಾಗಿ ನೈಋತ್ಯ ಅನುಮತಿ ಇಲಾಖೆ ನೀಡಿದೆ. ಹಾಗೂ ಇದು ಧರ್ಮಸ್ಥಳ, ಕುಕ್ಕೆ- ಶ್ರವಣಬೆಳಗೊಳ ಸೇರಿದಂತೆ ಹಲವು ಪುಣ್ಯ ಕ್ಷೇತ್ರಕ್ಕೆ ಹೋಗುವವರಿಗೆ ಇದು ಸಹಾಯಧನ. ಆರು ತಿಂಗಳ ಹಿಂದೆ ರದ್ದಾಗಿದ್ದ ಬೆಂಗಳೂರು-ಮಂಗಳೂರು-ಕಾರವಾರ ರೈಲು ಸೇವೆ ಪುನಾರಂಭ ಮಾಡಲು ನಿರ್ಧರಿಸಲಾಗಿದೆ. ಇದೀಗ ಈ ಬಗ್ಗೆ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಬೆಂಗಳೂರು-ಮಂಗಳೂರು-ಕಾರವಾರ ರೈಲು ಸೇವೆಯಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಈ ಮೂಲಕ ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲು (16575/16576) (ಗೊಮ್ಮಟೇಶ್ವರ ಎಕ್ಸ್ಪ್ರೆಸ್) ಮತ್ತೆ ತನ್ನ ಸೇವೆಯನ್ನು ಮುಂದುವರಿಸಲಿದೆ. ಇದೀಗ ಮೊದಲಿನಂತೆ ತನ್ನ ಸಂಚಾರವನ್ನು ಯಶವಂತಪುರ ನಿಲ್ದಾಣದಿಂದ ಆರಂಭಿಸಲಿದೆ. ಪ್ರಯಾಣಿಕರು ಈ ಸಾರಿಗೆ ಸಂಚಾರ ಸೇವೆಯನ್ನು ಸದುಪಯೋಗ ಮಾಡಿಕೊಳ್ಳುವಂತೆ ಇಲಾಖೆ ಹೇಳಿದೆ.
ಕಳೆದ ಆರು ತಿಂಗಳಿನಿಂದ ರದ್ದಾಗಿದ್ದ ಈ ರೈಲು, ಇದೀಗ ಮತ್ತೆ ಆರಂಭವಾಗಿರುವುದು ಪ್ರಯಾಣಿಕರಲ್ಲಿ ಸಂತಸ ತಂದಿದೆ. ಹಾಸನ, ಸಕಲೇಶಪುರ ಮಾರ್ಗದಲ್ಲಿ ವಿದ್ಯುದೀಕರಣ ಮತ್ತು ಇತರ ಕಾಮಗಾರಿಗಳಿಗೆ ಈ ರೈಲು ರದ್ದಾಗಿತ್ತು. ಇದೀಗ ಮತ್ತೆ ಸಂಚಾರ ಮಾಡುವ ಮೂಲಕ ಪ್ರಯಾಣಿಕರಿಗೆ ಸೇವೆ ನೀಡಲು ಸಿದ್ಧವಾಗಿದೆ. ಈ ಮೂಲಕ ನೈಋತ್ಯ ಕರಾವಳಿ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ.
ಇಲ್ಲಿದೆ ನೋಡಿ ಎಕ್ಸ್ ಪೋಸ್ಟ್:
🚆 ಗೋಮಟೇಶ್ವರ ಎಕ್ಸ್ಪ್ರೆಸ್ 6 ತಿಂಗಳ ನಂತರ ಮತ್ತೆ ಟ್ರ್ಯಾಕ್ಗೆ ಬಂದಿದೆ!
ಅಂತಿಮವಾಗಿ, ಬೆಂಗಳೂರು ಮತ್ತು ಕರಾವಳಿ ಕರ್ನಾಟಕದ ನಡುವಿನ ಬಹುನಿರೀಕ್ಷಿತ ದಿನದ ರೈಲು ಸಂಪರ್ಕವನ್ನು ಸುದೀರ್ಘ ಅಮಾನತುಗೊಳಿಸಿದ ನಂತರ ಇಂದಿನಿಂದ ಮರುಸ್ಥಾಪಿಸಲಾಗಿದೆ.
✅ ಗೋಮಟೇಶ್ವರ ಎಕ್ಸ್ಪ್ರೆಸ್ ಸೇವೆ ಪುನರಾರಂಭ ✅ ಈ ನಡುವೆ ಹಗಲು ರೈಲು ಪ್ರಯಾಣ… pic.twitter.com/qifTP93Ack
— ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಬಳಕೆದಾರರು (@dkdistrictrail) ಡಿಸೆಂಬರ್ 16, 2025
ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲಿನಲ್ಲಿ ಮಹತ್ವದ ಸುಧಾರಣೆ:
ರೈಲಿ ಇಲಾಖೆಯಲ್ಲಿ ಇದೊಂದು ದೊಡ್ಡ ಮೈಲಿಗಲ್ಲು ಎಂದು ಹೇಳಬಹುದು. ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲಿನಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಇನ್ನು ಈ ರೈಲು ಬೆಳಗ್ಗಿನ ಹೊತ್ತು ಸಂಚಾರ ಮಾಡುವ ಕಾರಣ, ಪ್ರಯಾಣಿಕರು ಪ್ರಕೃತಿಯನ್ನು ವೀಕ್ಷಿಸಲು ವಿಸ್ಟಾಡೋಮ್ ಕೋಚ್, ಗಾಜಿನ ಕಿಟಿಕಿ, ಬೃಹತ್ ಗಾಜಿನ ಮೇಲ್ಚಾವಣೆ, ವ್ಯವಸ್ಥಿತ ಆಸನಗಳನ್ನು ಮಾಡಲಾಗಿದೆ. ಇಲ್ಲ ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ , ಮಂಗಳೂರು ಮಾರ್ಗದ ಸುಂದರ ಪ್ರಕೃತಿಯನ್ನು ನೋಡಿಕೊಂಡು ಹೋಗಬಹುದು. ಇಷ್ಟು ದಿನ ಈ ಪ್ರಯಾಣಿಕರು ಇದನ್ನು ಮಿಸ್ ಮಾಡಿಕೊಂಡಿದ್ದರು. ಇದೀಗ ಮತ್ತೆ ತನ್ನ ಸಂಚಾರವನ್ನು ಮುಂದುವರಿಸುವುದರಿಂದ ಪ್ರಯಾಣಿಕರಿಗೆ ಮತ್ತೆ ಸಂತಸ ತಂದಿದೆ.
ಇದನ್ನೂ ಓದಿ: ಬಿಎಂಆರ್ ಸಿಎಲ್ ಅಧಿಕಾರಿಗಳು ಯಡವಟ್ಟಿಗೆ ಪ್ರಯಾಣಿಕರು ಕಂಗಾಲು: ಯಾವುದೋ ಮೆಟ್ರೋ ನಿಲ್ದಾಣಕ್ಕೆ ಇನ್ಯಾವುದೋ ಹೆಸರು!
ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲಿನಲ್ಲಿ ಸಮಯ;
ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲಿನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಕೊಂಡಿಲ್ಲ. ಸಂಚಾರ ಮಾರ್ಗದಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಕೊಂಡಿಲ್ಲ, ಆದರೆ ನಿಲ್ದಾಣದಲ್ಲಿ ನಿಲ್ಲುವ ಸಮಯದಲ್ಲಿ ಬದಲಾವಣೆಯನ್ನು ಮಾಡಿಕೊಂಡಿದೆ. ಯಶವಂತಪುರ ನಿಲ್ದಾಣದಿಂದ ಹೊರಟು ಚಿಕ್ಕಬಾಣಾವರ, ಹಾಸನ, ಶ್ರವಣಬೆಳಗೊಳ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು, ಬಂಟ್ವಾಳದ ಮೂಲಕ ಮಂಗಳೂರಿಗೆ ಹೋಗುತ್ತದೆ. ಅಲ್ಲಿಂದ ಶ್ರವಣಬೆಳಗೊಳ ನಿಲ್ದಾಣದಲ್ಲಿ ನಿಲ್ಲುತ್ತದೆ. ರೈಲು ಹಾಸನ ಮತ್ತು ಸಕಲೇಶಪುರದಲ್ಲಿ ಹೆಚ್ಚು ಸಮಯ ನಿಲ್ಲುತ್ತದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ