Headlines

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಪಿಂಕ್ ಮತ್ತು ಬ್ಲೂ ಲೈನ್‌ಗೆ ಬರಲಿವೆ 4 ಚಾಲಕರಹಿತ ರೈಲುಗಳು!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಪಿಂಕ್ ಮತ್ತು ಬ್ಲೂ ಲೈನ್‌ಗೆ ಬರಲಿವೆ 4 ಚಾಲಕರಹಿತ ರೈಲುಗಳು!


ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಪಿಂಕ್ ಮತ್ತು ಬ್ಲೂ ಲೈನ್‌ಗೆ ಬರಲಿವೆ 4 ಚಾಲಕರಹಿತ ರೈಲುಗಳು!

ಬೆಂಗಳೂರು, ಮಾರ್ಚ್ 27: ಬೆಂಗಳೂರಿನ ಟ್ರಾಫಿಕ್ ಮತ್ತು ವಾಯುಮಾಲಿನ್ಯದ ಸಮಸ್ಯೆಗೆ ಮುಕ್ತಿ ನೀಡಲು ಬಿಎಂಆರ್‌ಸಿಎಲ್ (BMRCL) ತನ್ನ ಜಾಲ ವಿಸ್ತರಣೆಗೆ ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮತ್ತು ಬ್ಲೂ ಲೈನ್ ಮೆಟ್ರೋ ಮಾರ್ಗಗಳಿಗಾಗಿ ಅತ್ಯಾಧುನಿಕ ಚಾಲಕರಹಿತ (ಚಾಲಕ ರಹಿತ ರೈಲು) ರೈಲುಗಳು ಶೀಘ್ರದಲ್ಲೇ ಆಗಮಿಸಲಿವೆ. ಬೆಂಗಳೂರಿನ ಬಿಐಎಂಎಲ್ (BEML) ಕಾರ್ಖಾನೆಯಿಂದ ಈ ತಿಂಗಳು ಮತ್ತು ಮುಂದಿನ ತಿಂಗಳು ಒಟ್ಟು ನಾಲ್ಕು ಹೊಸ ರೈಲು ಸೆಟ್‌ಗಳು ಬಿಎಂಆರ್‌ಸಿಎಲ್ ಕೈಸೇರಲಿವೆ.

ಮೇ ತಿಂಗಳಲ್ಲಿ ಪಿಂಕ್ ಲೈನ್ ಪ್ರಾರಂಭವಾಗುವ ಸಾಧ್ಯತೆಯಿದೆ

ಕಾಳೇನ ಅಗ್ರಹಾರದಿಂದ ನಾಗವಾರದ ಪಿಂಕ್ ಲೈನ್ ಮಾರ್ಗದ ಕಾಮಗಾರಿ ಅಂತಿಮ ಹಂತದಲ್ಲಿದೆ. ವಿಶೇಷವಾಗಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಒಟ್ಟು ಆರು ಮೆಟ್ರೋ ನಿಲ್ದಾಣಗಳನ್ನು ಮೇ ತಿಂಗಳಿನಲ್ಲಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲು ಬಿಎಂಆರ್‌ಸಿಎಲ್ ಯೋಜನೆ ರೂಪಿಸಿದೆ. ಈ ಮಾರ್ಗಕ್ಕಾಗಿ 5 ರೈಲುಗಳು ಬಂದಿದ್ದು, ಏಪ್ರಿಲ್ ವೇಳೆಗೆ ಮತ್ತೊಂದು ರೈಲು ಆಗಮಿಸಲಿದೆ. ಇದರಿಂದ ದಕ್ಷಿಣ ಬೆಂಗಳೂರಿನ ಜನರಿಗೆ ಟ್ರಾಫಿಕ್ ಕಿರಿಕಿರಿಯಿಂದ ದೊಡ್ಡ ಮಟ್ಟದ ಸಮಾಧಾನ ಸಿಗಲಿದೆ.

ಏರ್ ಪೋರ್ಟ್ ಮಾರ್ಗಕ್ಕೂ ಸಜ್ಜಾಗುತ್ತಿದೆ ಬ್ಲೂ ಲೈನ್

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ 59 ಕಿ.ಮೀ ಉದ್ದದ ಬ್ಲೂ ಲೈನ್ ಮಾರ್ಗವು ಬೆಂಗಳೂರಿನ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ.

  • ಸಿಲ್ಕ್ ಬೋರ್ಡ್ ಟು ಕೆ.ಆರ್. ಪುರ: 19.75 ಕಿ.ಮೀ (13 ನಿಲ್ದಾಣಗಳು)
  • ಕೆ.ಆರ್. ಪುರ ಟು ವಿಮಾನ ನಿಲ್ದಾಣ: 38 ಕಿ.ಮೀ ವಿಸ್ತೀರ್ಣ

ಈ ಬೃಹತ್ ಮಾರ್ಗಕ್ಕಾಗಿ ಒಟ್ಟು 38 ಚಾಲಕರಹಿತ ರೈಲುಗಳಿಗೆ ಬಿಐಎಂಎಲ್‌ಗೆ ಆರ್ಡರ್ ನೀಡಲಾಗಿದೆ. ಇದರ ಮೊದಲ ಹಂತವಾಗಿ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಎರಡು ರೈಲುಗಳು ಬರಲಿವೆ.

ಇದನ್ನೂ ಓದಿ: RCB ಅಭಿಮಾನಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್! ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸೇವೆ ವಿಸ್ತರಣೆ

ಮೆಟ್ರೋ ಮಾರ್ಗಗಳ ವಿಸ್ತರಣೆ ಬಗ್ಗೆ ಸ್ಥಳೀಯ ನಿವಾಸಿಗಳು ಹಾಗೂ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ. ವಿಶ್ವದಲ್ಲೇ ಎರಡನೇ ಅತಿದೊಡ್ಡ ಟ್ರಾಫಿಕ್ ಸಿಟಿ ಎಂಬ ಕುಖ್ಯಾತಿ ಹೊಂದಿರುವ ಬೆಂಗಳೂರಿನಲ್ಲಿ ಒಂದೇ ಸರಿಯಾದ ಪರಿಹಾರ. ಪಿಂಕ್ ಲೈನ್ ಬೇಗ ಆರಂಭವಾದರೆ ತಾವರೆಕೆರೆ ಮತ್ತು ಸಿಲ್ಕ್ ಬೋರ್ಡ್ ಭಾಗದ ಟ್ರಾಫಿಕ್ ಸಮಸ್ಯೆ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಪ್ರಯಾಣಿಕರು ಆಶಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *