ಬೆಂಗಳೂರು, ಜನವರಿ 05: ಬೆಂಗಳೂರಿನ ಜೆಜೆ ಓಮ್ ಶಕ್ತಿ ಮಾಲಾಧಾರಿಗಳು ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಇಬ್ಬರು ಯುವತಿಯರು ಘಟನೆ ಭಾನುವಾರ ರಾತ್ರಿ ನಡೆದಿತ್ತು. ಈ ಹಿಂಸಾತ್ಮಕ ಘಟನೆಯ ನಂತರ ಸಚಿವ ಜಮೀರ್ ಅಹ್ಮದ್ ಖಾನ್ ಜೆ.ಜೆ. ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ದೇವಿಯ ಮೇಲೆ ಕಲ್ಲು ಎಸೆದ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಕೇವಲ ಅಪ್ರಾಪ್ತರು ಮಾತ್ರ ಈ ಕೃತ್ಯ ಎನ್ನುವುದನ್ನು ನಂಬಲು ಸಾಧ್ಯವಿಲ್ಲ ಎಂದು ಜಮೀರ್, ಈ ಕೃತ್ಯದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚುವಂತೆ ಡಿಸಿಪಿಗೆ ಸೂಚಿಸಲಾಗಿದೆ. ಚಾಮರಾಜಪೇಟೆಯಲ್ಲಿ ಹಿಂದೂ–ಮುಸ್ಲಿಂರು ಸಹೋದರರಂತೆ ಬದುಕುತ್ತಿದ್ದರು, ಈ ರೀತಿಯ ಘಟನೆ ಹಿಂದೆ ನಡೆದಿಲ್ಲ. ಈ ಪ್ರದೇಶದ ಗಾಂಜಾ ಸಮಸ್ಯೆ ಸ್ವಲ್ಪ ಮಟ್ಟಿಗೆ ಹೆಚ್ಚಿರುವುದು ಸತ್ಯವಾಗಿದೆ, ಈ ಕುರಿತು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ತಪ್ಪು ಮಾಡಿದವರನ್ನು ಮುಲಾಜಿಲ್ಲದೆ ಬಂಧಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.