
ಬೆಂಗಳೂರು, ಡಿಸೆಂಬರ್ 24: 50ಕ್ಕೂ ಹೆಚ್ಚು ಅನಧಿಕೃತ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಈ ಶಿಕ್ಷಣ ಸಂಸ್ಥೆಗಳು ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಕಾರ್ಯನಿರ್ವಹಿಸುತ್ತಿವೆ, ಅನಧಿಕೃತವಾಗಿ ಬೋಧನೆ ನಡೆಸುತ್ತಿವೆ. ಇಂತಹ ಶಾಲೆಗಳ ಕುರಿತು ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಡಿಡಿಪಿಐ ಮತ್ತು ಬಿಐಒಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಹೆಣ್ಣೂರು ರಸ್ತೆಯ ಯುರೋಸ್ಕೂಲ್, ಕಿಡ್ಸ್ ಕ್ಯಾಸಲ್ ಪೂರ್ವ ಪ್ರಾಥಮಿಕ ಶಾಲೆ ಸಿಂಗಸಂದ್ರ, ಯರೋ ಸ್ಕೂಲ್ ತಿಪ್ಪಸಂದ್ರ ಗುಂಜೂರು, ಗರೇಭಾವಿಪಾಳ್ಯದ ಅಪೋಲೋ ಕಿಡ್ಸ್ ಪೂರ್ವ ಪ್ರಾಥಮಿಕ ಶಾಲೆ ಸೇರಿದಂತೆ ಹಲವು ನರ್ಸರಿ ಶಾಲೆಗಳಿಗೆ ನೋಟಿಸ್ ನೀಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.