ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್

ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್


ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ ಮಾಡಿದವರ ವಿರುದ್ಧ ದರ್ಶನ್ (ದರ್ಶನ್) ಪತ್ನಿ ವಿಜಯಲಕ್ಷ್ಮಿ ಅವರು ದೂರು ನೀಡಿದ್ದರು. ಆದರೆ ಈ ಬಗ್ಗೆ ಕ್ರಮ ತೆಗೆದಕೊಂಡಿಲ್ಲ ಎಂದು ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ಆರೋಪಿಸಿದ್ದರು. ತಮ್ಮ ದೂರನ್ನು ನಿರ್ಲಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಅದಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ನನ್ನ ಪ್ರಕಾರ, ವಿಜಯಲಕ್ಷ್ಮಿ ಅವರ ಆರೋಪ ಸುಳ್ಳು. ಎಲ್ಲರಿಗೋಸ್ಕರ ನಾವು ವೈದ್ಯರು ಇದ್ದೇವೆ. ಯಾವುದೇ ಒಂದು ವರ್ಗಕ್ಕಾಗಿ ಅಲ್ಲ. ನಾವು ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಈ ಪ್ರಕರಣದಲ್ಲಿ ನಮ್ಮವರು ತಕ್ಷಣ ಕೇಸ್ ದಾಖಲಿಸಿದ್ದಾರೆ. ಸಿಸಿಬಿ ಹಂತದಲ್ಲಿ ಮಾಡಿದ್ದೇವೆ. ಡಿಸಿಪಿ ಹಂತದಲ್ಲಿ ತನಿಖೆ ನಡೆಯುತ್ತಿದೆ. ಕೆಲವೊಮ್ಮೆ ತಕ್ಷಣಕ್ಕೆ ಸುಳಿವು ಸಿಗುತ್ತದೆ. ಕೆಲವೊಮ್ಮ ವಿಳಂಬವಾಗುತ್ತದೆ. ಅದನ್ನು ಬೇರೆ ಯಾವುದೇ ಉದ್ದೇಶವಿಲ್ಲ. ಯಾವುದೇ ಪ್ರಕರಣದಲ್ಲಿ ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ. ಒಂದು ವೇಳೆ ಮಾಡಿದರೆ ಅಂಥ ಅಧಿಕಾರಿಗಳ ಮೇಲೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಸೀಮಂತ್ ಕುಮಾರ್ ಹೇಳಿದರು (ಸೀಮಂತ್ ಕುಮಾರ್ ಸಿಂಗ್) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *