ಬೆಂಗಳೂರಿಗರಿಗೆ ಜಿಬಿಎಯಿಂದ ಭರ್ಜರಿ ಶಾಕ್​​: ಹೆಚ್ಚುವರಿ ತೆರಿಗೆಗೆ ಬಿಜೆಪಿಗರು ಕೆಂಡ; ವಿಧಾನ ಸಭೆಯಲ್ಲೂ ಬಿಸಿ ಬಿಸಿ ಚರ್ಚೆ

ಬೆಂಗಳೂರಿಗರಿಗೆ ಜಿಬಿಎಯಿಂದ ಭರ್ಜರಿ ಶಾಕ್​​: ಹೆಚ್ಚುವರಿ ತೆರಿಗೆಗೆ ಬಿಜೆಪಿಗರು ಕೆಂಡ; ವಿಧಾನ ಸಭೆಯಲ್ಲೂ ಬಿಸಿ ಬಿಸಿ ಚರ್ಚೆ


ಬೆಂಗಳೂರಿಗರಿಗೆ ಜಿಬಿಎಯಿಂದ ಭರ್ಜರಿ ಶಾಕ್ : ಹೆಚ್ಚುವರಿ ತೆರಿಗೆಗೆ ಬಿಜೆಪಿಗರು ಕೆಂಡ; ವಿಧಾನ ಸಭೆಯಲ್ಲೂ ಬಿಸಿ ಬಿಸಿ ಚರ್ಚೆ

ಬೆಂಗಳೂರು, ಮಾರ್ಚ್ 10: ತೆರಿಗೆ ವಸೂಲಿ ವಿಚಾರದಲ್ಲಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ನಡೆಯೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಡ್ರೋನ್ ಸರ್ವೆ ಮೂಲಕ ಹೆಚ್ಚುವರಿ ತೆರಿಗೆ ವಸೂಲಿಗೆ ಜಿಬಿಎ ಮುಂದಾಗಿದ್ದು, ಕಟ್ಟಡದ ಬಾಲ್ಕನಿ, ಕಿಟಿಕಿ ಮೇಲಿನ ಸಜ್ಜೆ, ವಾಟರ್ ಟ್ಯಾಂಕ್ ಸ್ಟ್ಯಾಂಡ್, ಕಾರ್ ಪಾರ್ಕಿಂಗ್, ಪೋರ್ಟಿಕೋ, ಮನೆ ಮುಂದಿನ ತಾತ್ಕಾಲಿಕ ಗಜಿಬೋ ಸೇರಿ ಮನೆಯ ಪೂರಕ ಕಟ್ಟಡಕ್ಕೂ ತೆರಿಗೆ ವಿಧಿಸಲಾಗಿದೆ. ಇದುವರೆಗೂ ಅಂದಾಜು 46 ಸಾವಿರ ಮನೆ ಮಾಲಿಕರಿಂದ ಟ್ಯಾಕ್ಸ್ ಸಂಗ್ರಹಕ್ಕೆ ಜಿಬಿಎ ಮುಂದಾಗಿದೆ, 5 ಲಕ್ಷದಿಂದ 18 ಲಕ್ಷದವರೆಗೂ ಹೆಚ್ಚಿನ ತೆರಿಗೆ ವಸೂಲಿಗೆ ಮೆಸೇಜ್ ಮೂಲಕ ನೋಟಿಸ್ ನೀಡಿದೆ.

ಮೆಸೇಜ್ ಓಪನ್ ಮಾಡಿದ್ರೆ ನೋಟಿಸ್ ಸ್ವೀಕರಿಸಲಾಗಿದೆ ಎಂದು ಭಾವಿಸಿ ಕ್ರಮಕ್ಕೆ ಮುಂದಾಗಿರುವ ಜಿಬಿಎ ಹೆಚ್ಚುವರಿ ತೆರಿಗೆ ಪ್ರಶ್ನೆ ಮಾಡಿದವರ ಮನೆಯನ್ನೇ ಹರಾಜಿಗೆ ಮುಂದಾಗಿದೆ. 17 ಮನೆಗಳ ಹರಾಜು ಪ್ರಕ್ರಿಯೆಗೆ ಅಂತಿಮ ನೋಟೀಸ್ ನೀಡಲಾಯಿತು, ಐದು ಮಹಾನಗರ ಪಾಲಿಕೆಗೆ 46 ಸಾವಿರ ಜನರಿಗೆ ನೋಟಿಸ್ ನೀಡಲಾಗಿದೆ ಜಿಬಿಎ ಕ್ರಮವನ್ನು ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಜಿಬಿಎಯ 5 ಪಾಲಿಕೆಗಳ ಚುನಾವಣೆ; ವಾರ್ಡ್ ವಾರು ಅಂತಿಮ ಮೀಸಲಾತಿ ಪ್ರಕಟ

ಜಿವಿಎ ನಡೆ ಬಗ್ಗೆ ವಿಧಾನಸಭೆಯಲ್ಲೂ ಚರ್ಚೆ

ಡ್ರೋನ್ ಸರ್ವೆ ನಡೆಸಿ ಬೆಂಗಳೂರಿನಲ್ಲಿ ಮನೆಗಳಿಗೆ ಹೆಚ್ಚುವರಿ ಹೆಚ್ಚುವರಿ ತೆರಿಗೆ, ದಂಡ ವಿಧಿಸಲಾಗುತ್ತಿದೆ. ಒಂದು ಮನೆಗೆ 7-8 ಲಕ್ಷ, 30 ಲಕ್ಷದವರೆಗೆ ತೆರಿಗೆ, ದಂಡ ಹಾಕಿದ್ದಾರೆ ಎಂದು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಪ್ರಸ್ತಾಪಿಸಿದ್ದಾರೆ. ರಾಮಮೂರ್ತಿ ಹೇಳಿಕೆಗೆ ಧ್ವನಿಗೂಡಿಸಿದ ಶಾಸಕರ ಸುರೇಶ್ ಕುಮಾರ್, ಇದು ಆಸ್ತಿ ತೆರಿಗೆ ಭಯೋತ್ಪಾದನೆ. ಇದನ್ನು ಹಿಂಪಡೆಯಿರಿ ಎಂದು ಹೇಳಿದ್ದಾರೆ. ಬಿಜೆಪಿ ಶಾಸಕರ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದು, ನಾವು ಡ್ರೋನ್ ಸರ್ವೇ ನಡೆಸಿ ನೋಟಿಸ್ ಕೊಡ್ತಿಲ್ಲ. ಆದರೆ ಡ್ರೋನ್ ಮೂಲಕ ಮನೆಗಳ ಸರ್ವೆ ಕಾರ್ಯ ನಡೆಯುತ್ತಿದೆ. ಮೊದಲು ಸೆಲ್ಫ್ ಅಸೆಸ್ಮೆಂಟ್ ಸ್ಕೀಂ ತಂದವನು ನಾನು. ಒನ್ ಟೈಮ್ ಸೆಟ್ಲ್ಮೆಂಟ್ ಸ್ಕೀಂ ಕೂಡ ಕೊಡಬಹುದಾಗಿದೆ. ಈ ಬಗ್ಗೆ ಯಾರಿಗಾದರೂ ಸಮಸ್ಯೆ ಇದ್ರೆ ಅರ್ಜಿ ಕೊಡಲಿ. ಸಮಸ್ಯೆ ಇದ್ದವರಿಗೆ ಸರಿಪಡಿಸುವುದಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

 



Source link

Leave a Reply

Your email address will not be published. Required fields are marked *