ಬೆಂಗಳೂರು, ಫೆಬ್ರವರಿ 18: ಇಸ್ರೋ ಸಂಸ್ಥೆ ನಿವೃತ್ತ ನೌಕರನಿಂದ ಉಸಿರುಗಟ್ಟಿಸಿ ಪತ್ನಿಯ ಕೊಲೆ (ಕೊಲೆ) ಬೆಂಗಳೂರಿನ ಆವಲಹಳ್ಳಿಯ ವರ್ಟುಸೊ ಅಪಾರ್ಟ್‌ಮೆಂಟ್‌ನಲ್ಲಿ ಇಂತಹ ಘಟನೆ ನಡೆದಿದೆ. ಪತ್ನಿ (ಹೆಂಡತಿ) ಸಧ್ಯಾರ ಉಸಿರುಗಟ್ಟಿಸಿ ಪತಿ ನಾಗಲೇಶ್ವರ ರಾವ್‌ರಿಂದ ಕೊಲೆ ಮಾಡಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಆಲವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದಿದ್ದೇನು?
ನಾಗಲೇಶ್ವರ ರಾವ್, ಇಸ್ರೋ ಸಂಸ್ಥೆಯ ನಿವೃತ್ತ ನೌಕರರು. ಪತ್ನಿ ಸಧ್ಯಾ ಅವರೊಂದಿಗೆ ವರ್ಟುಸೊ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದರು. ಪ್ರಾಥಮಿಕ ವಿಚಾರಣೆ ವೇಳೆ ನಾನು ಸತ್ತರೆ ಪತ್ನಿಯನ್ನು ಯಾರು ನೋಡುತ್ತಾರೆ, ಯಾರೂ ಇಲ್ಲ ಆಕೆಯ ಮುಂದಿನ ಜೀವನ ಹೇಗೆ? ಆಕೆಯನ್ನ ಕೊಲೆ ಮಾಡಿದೆ ಎನ್ನ ನಾಗಲೇಶ್ವರ ರಾವ್, ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ.
ಚಾಲಕನ ಜೊತೆಗೆ ಪತ್ನಿ ಮಾತನಾಡಿದ್ದಕ್ಕೆ ಅನುಮಾನ: ಮಚ್ಚಿನಿಂದ ಕೊಚ್ಚಿ ಪತ್ನಿಯ ಬರ್ಬರ ಹತ್ಯೆ
ಮತ್ತೊಂದು ಪ್ರಕರಣದಲ್ಲಿ ಕೂಡ ಪತಿ ಮಚ್ಚಿನಿಂದ ಕೊಚ್ಚಿ ಪತ್ನಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮಚ್ಚಿನಿಂದ ಕೊಚ್ಚಿ ದೇವಿಕಾ(50) ಹತ್ಯೆಗೈದ ಪತಿ ಕುಮಾರ್. ಸದ್ಯ ಆರೋಪಿ ಕುಮಾರ್ ಅವರನ್ನು ಬಂಧಿಸಿದ ಪೊಲೀಸರು, ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಗಂಡನ ಪ್ರೇಮ, ಪ್ರೀತಿ-ಪ್ರಣಯದಾಟಕ್ಕೆ ಪತ್ನಿ ಸುಸ್ತು: ಇದು ಮಂಗಳೂರು ಮನ್ಮಥನ ಭಯಾನಕ ಕಥೆ
ಇತ್ತೀಚೆಗೆ ಕುಟುಂಬ ಸಮೇತ ಕೇರಳ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಚಾಲಕನ ಜೊತೆಗೆ ಪತ್ನಿ ಮಾತನಾಡಿದ್ದಕ್ಕೆ ಅನುಮಾನ ಹೊಂದಿದ್ದ ಆರೋಪಿ ಪತಿ ಕುಮಾರ್, ನಿನ್ನೆ ರಾತ್ರಿ ಮಲಗಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ದೇವಿಕಾರನ್ನು ಕೊಲೆ ಮಾಡಿದ್ದಾರೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದರು. ಆದರೆ ಕೂಡಲೇ ಆರೋಪಿ ಕುಮಾರ್ ನನ್ನ ಮಕ್ಕಳು ತಡೆದಿದ್ದಾರೆ.
ಗ್ರಾಮ ದೇವತೆಯ ಅವಘಡ: ಬಂಡಿ ಯುವಕನ ಕೆಳಗೆ ಬಿದ್ದು ಸಾವು
ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಗ್ರಾಮ ದೇವತೆ ಹಬ್ಬದಲ್ಲಿ ಅವಘಡ ಸಂಭವಿಸಿದ್ದು, ಬಂಡಿ ಓಡಿಸುವಾಗ ಆಯತಪ್ಪಿ ಕೆಳಗೆ ಬಿದ್ದು ಪ್ರವೀಣ್(22) ಮೃತಪಟ್ಟಿದ್ದಾರೆ. ಗ್ರಾಮ ದೇವತೆ ಬಂಡರಸಮ್ಮ ಹಬ್ಬದ ಬಂಡಿ ಉತ್ಸವದಲ್ಲಿ ಘಟನೆ ನಡೆದಿದೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.