ಬೆಂಗಳೂರು ರೋಡ್​ರೇಜ್​ನ ಈ ವಿಡಿಯೋ ನೋಡಿದ್ರೆ ಎದೆ ಝಲ್ ಎನ್ನುತ್ತೆ!

ಬೆಂಗಳೂರು ರೋಡ್​ರೇಜ್​ನ ಈ ವಿಡಿಯೋ ನೋಡಿದ್ರೆ ಎದೆ ಝಲ್ ಎನ್ನುತ್ತೆ!


ಬೆಂಗಳೂರು, ಫೆಬ್ರವರಿ 12: ಬೆಂಗಳೂರು (ಬೆಂಗಳೂರು) ಹೆಚ್.ಎಲ್ (ಎಚ್ಎಎಲ್) ರಸ್ತೆಯಲ್ಲಿ ನಡೆದ ಭಯಾನಕ ಘಟನೆಯೊಂದು ಸಾರ್ವಜನಿಕರನ್ನು ಬೆಚ್ಚಿಬೀಳುವಂತೆ ಮಾಡಿದೆ. ಕಾರು ಮತ್ತು ಗೂಡ್ಸ್ ವಾಹನ ಚಾಲಕರ ನಡುವೆ ಸಣ್ಣ ಗಲಾಟೆ ನಡೆದು, ಬಳಿಕ ಕಾರು ಚಾಲಕ ಗೂಡ್ಸ್ ವಾಹನದ ಚಾಲಕನನ್ನು ತನ್ನ ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಘಟನೆ ಬುಧವಾರ ಮಧ್ಯಾಹ್ನ 12.45ರ ಸುಮಾರಿಗೆ ನಡೆದಿದೆ. ಮೂಲಗಳಿಂದ ದೊರೆತ ಮಾಹಿತಿ ಪ್ರಕಾರ, ಗೂಡ್ಸ್ ವಾಹನ ಮತ್ತು ಕಾರು ಟಚ್ ಆಗಿದ್ದ ಇಬ್ಬರು ಚಾಲಕರ ನಡುವೆ ಮಾತಿನ ಚಕಮಕಿ ನಡೆದಿದೆ. ವಾಹನಕ್ಕೆ ಉಂಟಾದ ನಷ್ಟದ ಪರಿಹಾರ ನೀಡುವಂತೆ ಗೂಡ್ಸ್ ವಾಹನದ ಚಾಲಕ ನಂಜುಂಡ ಕೇಳಿದ್ದಾನೆ. ಇವರಿಬ್ಬರ ಮಧ್ಯೆ ವಾಗ್ವಾದ ಹೆಚ್ಚಾಗಿ, ನಂಜುಂಡ ಕಾರಿನ ಮುಂದೆ ನಿಂತಿದ್ದ ವೇಳೆ ಕಾರು ಚಾಲಕ ಸುರೇಶ್ ಏಕಾಏಕಿ ಕಾರು ಚಾಲನೆ ಮಾಡಿದ್ದಾನೆ. ಪರಿಣಾಮ, ನಂಜುಂಡ ಕಾರಿನ ಬಾನೆಟ್ ಮೇಲೆ ಬಿದ್ದು ಸುಮಾರು ಒಂದು ಕಿಲೋಮೀಟರ್‌ಗೂ ಹೆಚ್ಚು ದೂರ ಒಯ್ಯಲ್ಪಟ್ಟಿದ್ದಾನೆ.

ನಂಜುಂಡ ಜೋರಾಗಿ ಕಿರುಚುತ್ತಿದ್ದರೂ ಚಾಲಕ ಕಾರನ್ನು ನಿಲ್ಲಿಸದೆ ಸಾಗಿದ ದೃಶ್ಯ ರಸ್ತೆಬದಿ ಸಾಗುತ್ತಿದ್ದ ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ. ಕೆಂಪು ಬಣ್ಣದ ಕಾರಿನ ಚಲನವಲನವನ್ನು ಗಮನಿಸಿದ ಕೆಲವರು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾರೆ.

ವಿಡಿಯೋ ಇಲ್ಲಿ ನೋಡಿ

ಟ್ರಿನಿಟಿ ಜಂಕ್ಷನ್ ಬಳಿ ಆರಂಭವಾದ ಗಲಾಟೆ ಬಳಿಕ CB ಜಂಕ್ಷನ್ ಹಾಗೂ ASC ಸೆಂಟರ್ ಕಾಲೇಜು ವರೆಗೆ ಮುಂದುವರಿದಿದ್ದು, ಇತರೆ ಕ್ಯಾಬ್ ಚಾಲಕರು ಅಡ್ಡಹಾಕಿದ ಬಳಿಕ ಚಾಲಕ ಕಾರು ನಿಲ್ಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಹೆತ್ತ ತಂದೆ-ತಾಯಿಯನ್ನೇ ಕೊಂದ ಮಗ

ಘಟನೆಗೆ ಸಂಬಂಧಿಸಿ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇವಲ ಒಂದು ಗಂಟೆಯಲ್ಲೇ ಆರೋಪಿ ಕಾರು ಚಾಲಕ ಸುರೇಶ್ ಅವರನ್ನು ಬಂಧಿಸಿದ್ದಾರೆ. ಕಾರನ್ನು ಸೀಜ್ ಮಾಡಿದ್ದಾನೆ, ಆರೋಪಿಯ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ವರದಿ: ನಟರಾಜ್, ಟಿವಿ9 ಬೆಂಗಳೂರು

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *