ಬಂಧಿತ ಕಾನ್ಸಟೇಬಲ್ ಅಣ್ಣಪ್ಪ ನಾಯ್ಕ್ ಮತ್ತು ವಶಪಡಿಸಿಕೊಳ್ಳಲಾದ ಕಾರು.
ಬೆಂಗಳೂರು, ನವೆಂಬರ್ 21: ಎಟಿಎಂಗೆ ಹಣ ಪೂರೈಸುತ್ತಿದ್ದ ವಾಹನ ಅಡ್ಡಗಟ್ಟಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿಗಳ ಗ್ಯಾಂಗ್ ದರೋಡೆ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಪೊಲೀಸ್ ಕಾನ್ಸ್‌ಟೇಬಲ್ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಹೇಳಲಾಗಿದೆ, ಗೋವಿಂದಪುರ ಠಾಣೆಯ ಕಾನ್‌ಟೇಬಲ್ ಅಣ್ಣಪ್ಪ ನಾಯ್ಕ ಎಂಬವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಆದರೆ ಈ ನಡುವೆ ಮತ್ತೊಂದು ರೋಚಕ ತಿರುವು ಸಿಕ್ಕಿದೆ.
ದರೋಡೆ ಗ್ಯಾಂಗ್ ಹಿಂದೆ ಇದ್ದಿದ್ದು ಪೊಲೀಸ್ ಕಾನ್ ಟೇಬಲ್ ಆಗಿ ಸಿಎಂಎಸ್ ಮಾಜಿ ಉದ್ಯೋಗಿಗೆ ಸಾಥ್ ನೀಡಿದ್ದ ಎಂಬ ವಿಚಾರ ಪೊಲೀಸರ ತನಿಖೆ ಬಯಲಾಗಿದೆ. ಹೀಗಾಗಿ ಸಿಎಂಎಸ್‌ನಲ್ಲಿ ಈ ಹಿಂದೆ ಕೆಲಸಮಾಡಿದ್ದ ಝೇವಿಯರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಒಂದು ವರ್ಷದ ಹಿಂದೆ ಸಿಎಂ ಎಸ್ ನಿಂದ ಕೆಲಸ ಬಿಟ್ಟಿರುವುದು ಗೊತ್ತಾಗಿದೆ. ಇತ್ತ ಬಾಣಸವಾಡಿಯಲ್ಲಿ ಕ್ರೈಂ ಬೀಟ್ ಮಾಡುತ್ತಿರುವ ಪೊಲೀಸ್ ಕಾನ್‌ಟೇಬಲ್ ಅಣ್ಣಪ್ಪನನ್ನು ಹೊಯ್ಸಳಕ್ಕೆ ವರ್ಗಾಯಿಸಲಾಯಿತು. ಕೆಲಸವಿಲ್ಲದೆ ಅಣ್ಣಪ್ಪ ಮತ್ತು ಝೇವಿಯರ್ ಇಬ್ಬರೂ ಪ್ರತಿದಿನ ಮೀಟಿಂಗ್ ಮಾಡುತ್ತಿದ್ದರು. ಈ ವೇಳೆ ಸಿಎಂಎಸ್ ನ ಹಣ ರವಾನೆಯ ಎಲ್ಲಾ ವಿಚಾರವನ್ನ ಅಣ್ಣಪ್ಪ ಬಳಿ ಝೇವಿಯರ್ ಹೇಳಿದ್ದಾರೆ. ಹಣ ದರೋಡೆಗೆ ಆರೋಪಿಗಳು ಯೋಚಿಸಿದ್ದು, ಸಿಎಂ ಪ್ಲ್ಯಾನ್ ನಂದು, ಎಸ್ಕೇಪ್ ಪ್ಲ್ಯಾನ್ ನಿಂದು ಎಂದು ಝೆವಿಯರ್ ಅಣ್ಣಪ್ಪಗೆ ತಿಳಿಸಿದ್ದರು.
ಇದನ್ನೂ ಓದಿ: 7 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಕಾನ್ಟೇಬಲ್ ಬಂಧನ, ಪೋಲೀಸಪ್ಪನೇ ಮಾಸ್ಟರ್‌ಮೈಂಡ್!
ಅವರ ಪ್ಲ್ಯಾನ್‌ನಂತೆ ಹಣ ಸಾಗಿಸುತ್ತಿದ್ದ ವಾಹನ ತಡೆದು 7 ಕೋಟಿ 11 ಲಕ್ಷ ಹಣವನ್ನು ಗ್ಯಾಂಗ್ ದೋಚಿ ಪರಾರಿಯಾಗಿದೆ. ಆದರೆ ದರೋಡೆ ಸಂದರ್ಭ ಪ್ರಕರಣದ ಮಾಸ್ಟರ್ ಮೈಂಡ್‌ಗಳಾದ ಝೇವಿಯರ್ ಮತ್ತು ಅಣ್ಣಪ್ಪ ಇಬ್ಬರೂ ಸ್ಪಾಟ್‌ಗೆ ಹೋಗಲಿಲ್ಲ. ಬದಲಾಗಿ ದರೋಡೆ ಹೇಗೆ ಮಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಎಂಬ ಪಕ್ಕಾ ರೂಟ್ ಪ್ಲ್ಯಾನ್ ಮಾಡಿಕೊಟ್ಟು ಕಾದು ಕುಳಿತಿದ್ದರು ಎಂಬುದು ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ. ಪ್ರಕರಣ ಸಂಬಂಧ ಸದ್ಯ ಝೇವಿಯರ್ ಮತ್ತು ಕಾನ್‌ಟೇಬಲ್ ಅಣ್ಣಪ್ಪನನ್ನ ಬಂಧಿಸಲಾಗಿದೆ, ವಿಚಾರಣೆ ಮುಂದುವರಿದಿದೆ. ಉಳಿದ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. ಹಣ ದೋಚಿದವರು ಎಲ್ಲಿಗೆ ಹೋಗಿದ್ದಾರೆ? ಹಣ ಎಲ್ಲಿದೆ ಬಗ್ಗೆಯೂ ನಾಲ್ವರು ಜಂಟಿ ಪೊಲೀಸ್ ಆಯುಕ್ತರು, 18 ಡಿಸಿಪಿಗಳ ನೇತೃತ್ವದಲ್ಲಿ ಹುಟುಕಾಟ ನಡೆಸಲಾಗುತ್ತಿದೆ.
ವರದಿ- ವಿಕಾಸ್, ಟಿವಿ9 ಬೆಂಗಳೂರು
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.