
ಬೆಂಗಳೂರು, ಮಾರ್ಚ್ 29: ರೌಡಿಶೀಟರ್ ಮಚ್ಚು ಹಿಡಿದು ಡ್ಯಾನ್ಸ್ ಮಾಡಿದ ವಿಡಿಯೋ ವೈರಲ್ ಆದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರೌಡಿಶೀಟರ್ ರಂಜಿತ್ ಅಲಿಯಾಸ್ ರಂಜು ಮತ್ತು ನಂದೀಶ್ ಬಂಧಿತರು. ಕರಗದ ವೇಳೆ ಬಳಸುವ ದೇವಿಯ ಹಾಡಿಗೆ ಎಣ್ಣೆ ಪಾರ್ಟಿಯಲ್ಲಿ ಮಚ್ಚು ಹಿಡಿದು ಸ್ಟೆಪ್ಸ್ ಹಾಕಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ರಂಜಿತ್ ವಿರುದ್ಧ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳಿದ್ದು, ಕೊಲೆ ಪ್ರಕರಣವೂ ಸೇರಿದೆ. ಆರೋಪಿಗಳ ವೀಡಿಯೋ ಹಳೆಯದು ಎಂದು ಹೇಳಿದ್ದರೂ, ಪೊಲೀಸರು ವಿಚಾರಣೆಗೆ ಒಳಪಡಿಸಿ ಇಬ್ಬರನ್ನೂ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.