ಬೆಂಗಳೂರು, ಜನವರಿ 14: ಇತ್ತೀಚೆಗೆ ಮೈಸೂರಿನಲ್ಲಿ ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರು ಗಿರವಿ ಇಟ್ಟಿದ್ದ ಚಿನ್ನದಲ್ಲಿ ಮೋಸವೆಸಗಿದ್ದ ಆರೋಪ ಕೇಳಿಬಂದಿತ್ತು. ಈಗ ಅಂತಹದ್ದೇ ಒಂದು ಘಟನೆ ಬೆಂಗಳೂರಿನಲ್ಲಿ (ಬೆಂಗಳೂರು) ನಡೆದಿದೆ. ಅಡವಿಟ್ಟು ಬಿಡಿಸಿಕೊಂಡಿದ್ದ ಚಿನ್ನದ ಚೈನ್ ಅನ್ನು ಪರಿಶೀಲಿಸಿದಾಗ ನಕಲಿ ಎಂಬುವುದು ಪತ್ತೆಯಾಗಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಎಸ್ಬಿಐ (ಎಸ್‌ಬಿಐ) ಶಾಖೆಯಲ್ಲಿ ಘಟನೆ ನಡೆದಿದ್ದು, ದಂಪತಿ ಮೋಸ ಹೋಗಿದ್ದಾರೆ. ಸದ್ಯ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ದೂರು.
ನಡೆದದ್ದೇನು?
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಎಸ್‌ಬಿಐ ಶಾಖೆಯಲ್ಲಿ 1 ವರ್ಷದ ಹಿಂದೆ ಮುಕೇಶ್ ಮತ್ತು ಪೂರ್ಣಿಮಾ ದಂಪತಿ ಚಿನ್ನದ ಚೈನ್ ಬ್ಯಾಂಕ್‌ನಲ್ಲಿ ಅಡವಿಟ್ಟು 2 ಲಕ್ಷ ರೂ ಪಡೆದಿದ್ದರು. ಅಸಲು, ಬಡ್ಡಿ ಸೇರಿ ಪ್ರತಿ ತಿಂಗಳು 11,700 ರೂ. ಪಡೆದಿದ್ದಾರೆ. ನಿನ್ನೆ ಸಾಲದ ಮೊತ್ತ ಸಂಪೂರ್ಣ ಪಾವತಿಸಿ ಚೈನ್ ಬಿಡಿಸಿಕೊಂಡಿದ್ದರು.
ಇದನ್ನೂ ಓದಿ: ಹುಣಸೂರು ಚಿನ್ನದಂಗಡಿ ಕಳ್ಳತನ: ಪೊಲೀಸ್ರು ಚಾಪೆ ಕೆಳಗೆ ನುಗ್ಗಿದ್ರೆ, ರಂಗೋಲಿ ಕೆಳಗಡೆ ತೂರಿದ ದರೋಡೆಕೋರರು
ದುಡ್ಡಿನ ಅಗತ್ಯ ಹಿನ್ನೆಲೆ ದಂಪತಿ ಮಾರ್ವಾಡಿ ಅಂಗಡಿಗೆ ತೆರಳಿದ್ದಾರೆ. ಅಲ್ಲಿ ಪರಿಶೀಲನೆ ಮಾಡಿ ನೋಡಿದಾಗ ನಕಲಿ ಚಿನ್ನ ಎಂಬುವುದು ಪತ್ತೆಯಾಗಿದೆ. ಒಂದು ಕ್ಷಣ ಆತಂಕಕ್ಕೆ ಒಳಗಾದ ದಂಪತಿ, ಕೂಡಲೇ ಮಹಾಲಕ್ಷ್ಮೀ ಲೇಔಟ್ನ ಎಸ್ ಬಿಐ ಶಾಖೆಗೆ ತೆರಳಿದ್ದಾರೆ. ಈ ಬ್ಯಾಂಕ್ ಬಗ್ಗೆ ಪ್ರಶ್ನಿಸಿದಾಗ ಸಿಬ್ಬಂದಿ ದಂಪತಿ ಆರೋಪ ನಿರಾಕರಿಸಿದ್ದು, ಬೇಜವಾಬ್ದಾರಿ ಉತ್ತರ ನೀಡಿದೆ. ಹೀಗಾಗಿ ಸದ್ಯ ದಂಪತಿ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಬಸ್ ನಲ್ಲಿ 22 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳಿಯ ಬಂಧನ
ಕೆಎಸ್ ಆರ್ ಟಿಸಿ ಬಸ್ ನಲ್ಲಿ 22 ಲಕ್ಷ ರೂ. ಮೌಲ್ಯದ 240 ಗ್ರಾಂ ಚಿನ್ನಾಭರಣ ಕಳವು ಮಾಡಿದ ಮಹಿಳೆಯನ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಬಂಧಿಸಿರುವ ಘಟನೆ ಇತ್ತೀಚೆಗೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ತಳಗವಾರ ಗ್ರಾಮದ ಮಹಿಳೆ ವನಜಾಕ್ಷಿ ಎಂಬುವರು ದೇವಸ್ಥಾನಕ್ಕೆ ಹೋಗುವ ಸಲುವಾಗಿ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಕ್ರಾಸ್ ನಿಂದ ಸೂಲಿಬೆಲೆಗೆ ತೆರಳಲು ಬಸ್ ಹತ್ತುತ್ತಿದ್ದ ವೇಳೆ ಚಿನ್ನಾಭರಣ ಕಳವು ನಡೆದಿದೆ.
ಇದನ್ನೂ ಓದಿ: ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್: ಅದು ನಮ್ಮ ಬಂಗಾರ ವಾಪಸ್ ನೀಡಿ
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು, ಆಂಧ್ರ ಪ್ರದೇಶದ ಕುಪ್ಪಂ ಮೂಲದ ಮೀನಾಕ್ಷಿಯನ್ನ ಬಂಧಿಸಿದ್ದರು. ಬಂಧಿತ ಮಹಿಳೆಯಿಂದ 22 ಲಕ್ಷ ರೂ ಮೌಲ್ಯದ 240 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ.
ವರದಿ: ನಟರಾಜ್
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 4:09 pm, ಬುಧವಾರ, 14 ಜನವರಿ 26