ಬೆಂಗಳೂರು, ನವೆಂಬರ್ 23: ಸಮಸ್ಯೆಗೆ ಪರಿಹಾರ ನೀಡುವುದಾಗಿ ಟೆಕ್ಕಿಯೊಬ್ಬರಿಗೆ ಬರೋಬ್ಬರಿ 48 ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ಆಯುರ್ವೇದ ಚಿಕಿತ್ಸೆಯಿಂದ ಕಿಡ್ನಿ ಸಮಸ್ಯೆ ಆಗಿರುವುದು ಗೊತ್ತಾದ ಬಳಿಕ ಎಚ್ಚೆತ್ತ ಅವರು ಪೊಲೀಸರ ಮೊರೆ ಹೋಗಿದ್ದಾರೆ. ಘಟನೆ ಸಂಬಂಧ ವಿಜಯ್ ಗೂರೂಜಿ ಎಂಬವರು ಸೇರಿ ವಿಜಯಲಕ್ಷ್ಮೀ ಆಯುರ್ವೇದಿಕ್ ಶಾಪ್ ವಿರುದ್ಧ ಪ್ರಕರಣ ದಾಖಲಾಗಿದೆ.
1 ಗ್ರಾಂ ಔಷಧಿ6ಗೆ 1 ಲಕ್ಷದ 0 ಸಾವಿರ ರೂ.!
ಸಮಸ್ಯೆಯಿಂದ ಬಳಲುತ್ತಿದ್ದ ಟೆಕ್ಕಿ ತೇಜಸ್ ಎಂಬವರು ಕೆಂಗೇರಿ ಸನೈರಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಬರುವಾಗ ರಸ್ತೆಯ ಪಕ್ಕದ ಟೆಂಟ್ ಬಳಿ ಹಾಕಲಾಗಿದ್ದ ಸಮಸ್ಯೆಗೆ ಚಿಕಿತ್ಸೆ ಬೋರ್ಡ್ ಗಮನಿಸಿದ್ದ ತೇಜಸ್ ಅಲ್ಲಿಗೂ ಭೇಟಿ ನೀಡಿದ್ದರು. ಆ ವೇಳೆ ಅಲ್ಲಿದ್ದಾತ ವಿಜಯ್ ಗುರೂಜಿಗೆ ಹೇಳಿ ಚಿಕಿತ್ಸೆ ಕೊಡಿಸುತ್ತೇನೆ ಎಂದು ಟೆಕ್ಕಿಗೆ ಭರವಸೆ ನೀಡಿದ್ದಾನೆ. 1 ಗ್ರಾಂ ಔಷಧಿಗೆ 1,60,000 ರೂ. ಬೆಲೆ ಇರುವ ದೇವರಾಜ್ ಬೂಟಿ ಹೆಸರಿನ ಔಷಧವನ್ನು ಯಶವಂತಪುರದ ವಿಜಯಲಕ್ಷ್ಮೀ ಆಯುರ್ವೇದಿಕ್ ಶಾಪ್ನಲ್ಲಿ ಮಾತ್ರ ಖರೀದಿಸಲು ಒತ್ತಾಯ ಮಾಡಿದ್ದಾನೆ. ಜೊತೆಗೆ ಲೈನ್ ಪೇಮೆಂಟ್ ಬೇಡ, ಜೊತೆಗೆ ಬರಬಾರದೆಂದು ಷರತ್ತು ವಿಧಿಸಿದೆ ಯಾರಿಗಿದೆ.
ಇದನ್ನೂ ಓದಿ: ಖಾಕಿ ತನಿಖೆ ವೇಳೆ ಬಯಲಾಯ್ತು 7.11 ಕೋಟಿ ಹಣ ದರೋಡೆಯ ಗುಟ್ಟು!
ಕಿಡ್ನಿಗೆ ಹಾನಿ
ಅವರು ನೀಡಿದ್ದ ಸಲಹೆಯಂತೆ ತೇಜಸ್ ಹಲವು ಬಾರಿ ದೇವರಾಜ್ ಬೂಟಿ ಮತ್ತು ಭವನ ಬೂಟಿ ತೈಲ ಖರೀದಿಸಿದ್ದರು. ಒಟ್ಟು 17 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗಿತ್ತು. ಆ ಬಳಿಕ ಹಣದ ಕೊರತೆಯಿಂದ HDFC ಬ್ಯಾಂಕ್ ಖಾತೆಯಲ್ಲಿ 20 ಲಕ್ಷ ರೂ. ಲೋನ್ ಪಡೆದು ಒಟ್ಟು 18 ಗ್ರಾಂ ಔಷಧಿಗಳನ್ನು ಖರೀದಿಸಿದ್ದರು. ಸಮಸ್ಯೆ ಇದ್ದಾಗ ಬರದಿದ್ದರೆ ಮತ್ತಷ್ಟು ಸಮಸ್ಯೆ ಆಗುವುದಾಗಿ ಆರೋಪಿಗಳು ತೇಜಸ್ ಗೆ ಬೆದರಿಕೆ ಹಾಕಿದ್ದಾರೆ, ಕೊನೆಗೆ ಆರೋಗ್ಯ ಸಮಸ್ಯೆಯಿಂದ ರಕ್ತ ಪರೀಕ್ಷೆ ಮಾಡಿಸಿದಾಗ ಕಿಡ್ನಿ ಸಮಸ್ಯೆ ಆಗಿರುವುದು. ಆ ಬಳಿಕ ಎಚ್ಚೆತ್ತ ತೇಜಸ್ ಆಯುರ್ವೇದ ಚಿಕಿತ್ಸೆ ಹೆಸರಲ್ಲಿ ತನಗೆ ವಂಚನೆ ಮಾಡಿದ ವಿಜಯ್ ಗೂರೂಜಿ, ವಿಜಯಲಕ್ಷ್ಮೀ ಆಯುರ್ವೇದಿಕ್ ವಿರುದ್ಧ ಬೆಂಗಳೂರಿನ ಭಾರತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.