ಬೆಂಗಳೂರು, ಡಿಸೆಂಬರ್ 26: ರಾಜ್ಯದಲ್ಲಿ ಇಂದು ಹಲವೆಡೆ ಚಳಿಯ ವಾತಾವರಣವಿತ್ತು (ಹವಾಮಾನ ಮುನ್ಸೂಚನೆ) ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣವೂ ಇರಲಿದೆ ಎಂದು ಹವಾಮಾನ ಇಲಾಖೆ. ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯ ದಟ್ಟ ಮಂಜು ಕಾಣಿಸಿಕೊಳ್ಳುವ ಸಾಧ್ಯತೆಯಿದೆ, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಲು ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಮಂಜು
ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣದಲ್ಲಿ ಸಾಕಷ್ಟು ಏರು ಪೇರಾಗುತ್ತಿದೆ, ಚಳಿಯ ಪ್ರಮಾಣ ಹೆಚ್ಚುತ್ತಿದೆ. ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿರುವಾಗ, ಬಟ್ಟೆ ಧರಿಸಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣದಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಲಾಗಿದೆ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಲಾಗಿದೆ.
ಎಲ್ಲೆಲ್ಲಿ ಒಣ ಹವೆ
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ಹೊಂದಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರುತ್ತದೆ.
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 7:29 am, ಶುಕ್ರ, 26 ಡಿಸೆಂಬರ್ 25