Headlines

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ


ರಾಜ್ಯದಲ್ಲಿ ಶುಷ್ಕ ವಾತಾವರಣ

ಬೆಂಗಳೂರು, ಜನವರಿ 05: ಕಳೆದ ಕೆಲ ದಿನಗಳಿಂದ ರಾಜ್ಯದ ಕೆಲವೆಡೆ ತುಂತುರು ಮಳೆ, ಇನ್ನೂ ಕೆಲವೆಡೆ ಒಣಹವೆಯ (ಹವಾಮಾನ ಮುನ್ಸೂಚನೆ) ವಾತಾವರಣ ಮನೆಮಾಡಿದೆ. ಬೆಂಗಳೂರಿನಲ್ಲಿ ಹಲವು ದಿನಗಳಿಂದ ಮಂಜು ಮುಸುಕಿದ ವಾತಾವರಣವಿದೆ. ದಕ್ಷಿಣ ಒಳನಾಡು ಸೇರಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ನಿನ್ನೆಯಂತೆಯೇ ಇಂದೂ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಒಣಹವೆ?

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರುತ್ತದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ಹೊಂದಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮಂಜು

ಬೆಂಗಳೂರಿನಲ್ಲಿ ಇಂದು ಮಂಜು ಕವಿದ ವಾತಾವರಣವಿದ್ದು, ತಾಪಮಾನ ಕನಿಷ್ಠ 16°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ಇದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿರುವಾಗ, ಬಟ್ಟೆ ಧರಿಸಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *