ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಶುಷ್ಕ ವಾತಾವರಣ
ಬೆಂಗಳೂರು, ಜನವರಿ 18: ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (ಹವಾಮಾನ ಮುನ್ಸೂಚನೆ) ಎಂದು ಹವಾಮಾನ ಇಲಾಖೆ ಹೇಳಿದೆ. ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದೆ, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರ ಸಲಹೆ.
ಎಲ್ಲೆಲ್ಲಿ ಒಣಹವೆ?
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ಹೊಂದಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ರಾಮ ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರುತ್ತದೆ.
ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ
ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 29°C ಇರಲಿದೆ ಎಂದು ಇಲಾಖೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿರುವಾಗ, ಬಟ್ಟೆ ಧರಿಸಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದ ಸಲಹೆ ನೀಡಲಾಗಿದೆ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.