Headlines

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ


ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

ಬೆಂಗಳೂರು, ಫೆಬ್ರವರಿ 24: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (ಹವಾಮಾನ ಮುನ್ಸೂಚನೆ) ಆವರಿಸಿದ್ದು, ಇನ್ನು ಕೆಲವು ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಗೆ ತತ್ತರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ ಇಂದು ರಾಜ್ಯದ ಹಲವೆಡೆ ಗುಡುಗು, ಸಿಡಿಲು ಕಾಣಿಸಿಕೊಳ್ಳುವ ಸಂಭವವಿದ್ದು, 5 ಜಿಲ್ಲೆಗಳಿಗೆ ಎಲ್ಲೋ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಇಲಾಖೆ3 ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 8 ರಿಂದ 39 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಎಚ್ಚರಿಕೆ ನೀಡಿದೆ.

ಬೀದರ್, ಕಲಬುರ್ಗಿ, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಅಬ್ಬರಿಸಲಿದೆ, ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಮಾರ್ಚ್ ಎರಡನೇ ವಾರದ ನಂತರ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಮತ್ತು ಹೈಡ್ರೇಶನ್ ಅಪಾಯದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಮತ್ತು ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನವನ್ನು ನಿಯಂತ್ರಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಎದುರಾಗುವ ಸೂಚನೆಗಳಿವೆ.

ಎಲ್ಲೆಲ್ಲಿ ಒಣ ಹವೆ?

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ಹೊಂದಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರುತ್ತದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *