ರಾಜ್ಯದಲ್ಲಿ ಶೀತದಲೆಯ ಅಬ್ಬರ; 3 ಜಿಲ್ಲೆಗಳಿಗೆ ಎಲ್ಲೋ ಎಚ್ಚರಿಕೆ
ಬೆಂಗಳೂರು, ಜನವರಿ 10: ರಾಜ್ಯದಲ್ಲಿ ನಿನ್ನೆಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ನಿನ್ನೆ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಇಂದೂ ಸಹ ತಾಪಮಾನದಲ್ಲಿ ಸುಧಾರಣೆಯಾಗದ ಕಾರಣ ಹಲವೆಡೆ ಮಂಜು ಹಾಗೂ ಒಣ ಹವೆಯ (ಹವಾಮಾನ ಮುನ್ಸೂಚನೆ) ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಪರಿಣಾಮವಾಗಿ ಹವಾಮಾನ ಇಲಾಖೆ ರಾಜ್ಯದ 3 ಜಿಲ್ಲೆಗಳಿಗೆ ಎಲ್ಲಾ ಎಚ್ಚರಿಕೆ ಸೂಚಿಸಲಾಗಿದೆ.
ಎಲ್ಲೆಲ್ಲಿ ಒಣಹವೆ?
ಬೀದರ್, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಲ್ಲೋ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರುತ್ತದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ಹೊಂದಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿಯಲ್ಲಿ ಚಳಿ
ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇದೆ. ಇಂದು ನಗರದ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಳಿ ಹೆಚ್ಚುತ್ತಿರುವ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ, ಬೆಚ್ಚಗಿನ ಉಡುಪು ಧರಿಸುವುದು ಹಾಗೂ ಬಿಸಿ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.