ಬೆಂಗಳೂರು, ಅಕ್ಟೋಬರ್ 22: ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ (ದೈಹಿಕವಾಗಿ ಹಲ್ಲೆ) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರಿಂದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕಾರ್ತಿಕ್, ಗ್ಲೆನ್, ಸಿಯೋಗ್ ಬಂಧಿತರು (ಬಂಧನ). ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳನ್ನು ಪತ್ತೆ ಮಾಡಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಆರೋಪಿಗಳು ಕೃತ್ಯವೆಸಗಿದ್ದರು.
ಎಸ್ಪಿ ಸಿಕೆ ಬಾಬಾ ಹೇಳಿದ್ದಿಷ್ಟು
ಕೇಸ್ ಕುರಿತಾಗಿ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಹೇಳಿಕೆ ನೀಡಿದ್ದು, ಮಂಗಳವಾರ ರಾತ್ರಿ ಮಾದನಾಯಕನ ಹಳ್ಳಿ ಠಾಣಾ ಘಟನೆ ನಡೆದಿದೆ. ಒಟ್ಟು ಐವರು ಆರೋಪಿಗಳು ಮೂರು ಮನೆಯಲ್ಲಿ ವಾಸವಾಗಿದ್ದಾರೆ ಪಶ್ಚಿಮ ಬಂಗಾಳದ ಮಹಿಳೆ ಮನೆಗೆ ನುಗ್ಗಿದ್ದಾರೆ. ಇಬ್ಬರು ಗಂಡಸರನ್ನ ಕಟ್ಟಿ ಹಾಕಿ, ಬಳಿಕ ಹಲ್ಲೆ ಮಾಡಿ ಅತ್ಯಾಚಾರ ಮಾಡಿದ್ದಾರೆ. ಘಟನೆ ಬೆಳಕಿಗೆ ಬಂದ ನಂತರ ಸ್ಥಳಕ್ಕೆ ಹೋಗಿ ಪರಿಶೀಲಿಸಿದ್ದೇವೆ. ಗ್ಯಾಂಗ್ ರೇಪ್ ಮತ್ತು ರಾಬರಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಘಟನೆಯಲ್ಲಿ ಹಲ್ಲೆಗೊಳಗಾದ ಇಬ್ಬರು ಪುರುಷರಿಗೆ ನಿಮಾನ್ಸ್ ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಿಳೆಯ ಬಳಿ ಇರುವ ಮೊಬೈಲ್ ಹಾಗೂ 50 ಸಾವಿರ ರೂ. ನಗದು ದೋಚಿಕೊಂಡು ಹೋಗಿದ್ದಾರೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತಿಬ್ಬರಿಗಾಗಿ ಮೂರು ತಂಡಗಳನ್ನು ಮಾಡಿ ಹುಡುಕುತ್ತಿದ್ದೇನೆ ಎಂದು ಹೇಳಿದರು.
ಪ್ರಕರಣ ಗಂಭೀರವಾಗಿರುವುದರಿಂದ ಡಿವೈಎಸ್ ನೆಲಮಂಗಲದ ಅಧಿಕಾರಿಯಿಂದ ತನಿಖೆ ನಡೆಸಲಾಗುತ್ತಿದೆ. ಕೆಲವರ ಫೋಟೋ ತೋರಿಸಿದಾಗ ಹೆಸರು ಸಮೇತವಾಗಿ ಹೇಳುತ್ತಿದ್ದಾರೆ. ಅವರಿಗೆ ಪರಿಚಯ ಇದ್ದಾರಾ, ಇಲ್ಲವಾ ಎನ್ನುವುದನ್ನು ನೋಡಬೇಕು ಎಂದು ಎಸ್ ಪಿ ಹೇಳಿದ್ದಾರೆ.
ಘಟನೆ ಹಿನ್ನೆಲೆ
ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆ ಮನೆಗೆ ರಾತ್ರೋರಾತ್ರಿ ಐವರು ಆರೋಪಿಗಳು ನುಗ್ಗಿದ್ದಾರೆ. ಪೀಣ್ಯ ಪೊಲೀಸ್ ಇನ್ಫರ್ಮರ್ಸ್ ಎಂದು ಮನೆಗೆ ನುಗ್ಗಿದ ಆರೋಪಿಗಳು, ನಿಮ್ಮ ಮನೆಯಲ್ಲಿ ಗಾಂಜಾ ಮಾರಾಟ, ವೇಶ್ಯಾವಾಟಿಕೆ ನಡೆಸುತ್ತಿದ್ದರೆಂದು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡ ಇನ್ಸ್ ಪೆಕ್ಟರ್: ಪೊಲೀಸಪ್ಪನ ಕಾಮ ಪುರಾಣ ಬಟಾಬಯಲು
ಸಂತ್ರಸ್ತ ಮಹಿಳೆಯ 14 ವರ್ಷದ ಮಗ ಸಂತ್ರಸ್ತೆ ಸ್ನೇಹಿತೆ ಮೇಲೂ ಹಲ್ಲೆ ಮಾಡಿದ್ದಾರೆ. ಹಲ್ಲೆ ಬಳಿಕ ಪಕ್ಕದ ಮನೆಯ ರೂಂಗೆ ಎಳೆದೊಯ್ದು ರೇಪ್ ಮಾಡಿತ್ತು. ಘಟನೆಯ ವೇಳೆ ಸಂತ್ರಸ್ತ ಮಹಿಳೆಯ ಪುತ್ರ 112ಕ್ಕೆ ಕರೆ ಮಾಡಿದ್ದ. ಸ್ಥಳಕ್ಕೆ ಆಗಮಿಸಿದ ಆರೋಪಿಗಳು ಎಸ್ಕೇಪ್ ಆಗಿದ್ದರು. ಇಬ್ಬರ ಗುರುತು ಹಿಡಿದು ಪೊಲೀಸರಿಗೆ ಸಂತ್ರಸ್ತ ಕುಟುಂಬ ಮಾಹಿತಿ ನೀಡಿದ್ದು ಸದ್ಯ ಮೂವರನ್ನು ಬಂಧಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.