ವಾಹನ ಸವಾರರೇ ಎಚ್ಚರ: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸರು!

ವಾಹನ ಸವಾರರೇ ಎಚ್ಚರ: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸರು!


ಬೆಂಗಳೂರು, ಡಿಸೆಂಬರ್ 27: ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಬೆಂಗಳೂರು ನಗರದಾದ್ಯಂತ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ತೀವ್ರಗೊಳಿಸಿದ್ದಾರೆ. ನಗರದ ಪ್ರಮುಖ ಜಂಕ್ಷನ್‌ಗಳು ಮತ್ತು ವೃತ್ತಗಳಲ್ಲಿ, ವಿಶೇಷವಾಗಿ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಮೆಜೆಸ್ಟಿಕ್ ಸಂಪರ್ಕಿಸುವ ಜಂಕ್ಷನ್‌ಗಳಲ್ಲಿ ಈ ಚೆಕ್‌ಗಳನ್ನು ನಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದಲೂ ನಿರಂತರವಾಗಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆಗಳು ನಡೆಯುತ್ತಿವೆ, ಪ್ರತಿದಿನ ಸರಾಸರಿ 500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕುಡಿದು ವಾಹನ ಚಲಾಯಿಸುತ್ತಿರುವಾಗ ವಾಹನವನ್ನು ಜಪ್ತಿ ಮಾಡುವುದರ ಜೊತೆಗೆ 10,000 ರೂಪಾಯಿ ದಂಡ ವಿಧಿಸಲಾಗುತ್ತಿದೆ. ಹೊಸ ವರ್ಷಾಚರಣೆ ಮುಗಿಯುವವರೆಗೂ ಈ ತಪಾಸಣೆಗಳು ಪ್ರತಿದಿನವೂ ಮುಂದುವರಿಯಲಿವೆ ಎಂದು ನಡೆಯಲಿದೆ. ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *