
ಬೆಂಗಳೂರು, ಮಾರ್ಚ್ 10: ಜಕ್ಕೂರು ವಿಲ್ಲಾದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಅಮೃತಹಳ್ಳಿ ಪೊಲೀಸರು ಹಲವು ಸ್ಫೋಟಕ ಮಾಹಿತಿಗಳನ್ನು ಬಯಲು ಮಾಡಿದ್ದಾರೆ. ಆರೋಪಿಗಳಾದ ಡಿಕ್ಸನ್ ಮತ್ತು ನಿಖಿಲ್ ಕಾಲೇಜು ಯುವತಿಯರನ್ನೇ ತಮ್ಮ ಗುರಿಯಾಗಿಸಿಕೊಂಡಿದ್ದರು. ಐಷಾರಾಮಿ ಹೋಟೆಲ್‌ಗಳಲ್ಲಿ ಸಭೆ ನಡೆಸಿ, ಯುವತಿಯರನ್ನು ಬಲೆಗೆ ಬೀಳಿಸಲು ಸಂಚು ರೂಪಿಸಿದ್ದರು. ಯುವತಿಯರನ್ನು ಗ್ರಾಮಕ್ಕೆ ಕರೆತಂದು ಡ್ರಗ್ಸ್ ಪಾರ್ಟಿ. ಗೋವಾದಿಂದ ಎಕ್ಸ್‌ಟೆಸಿ ಮಾತ್ರೆಗಳನ್ನು ತರಿಸಿಕೊಂಡು, ಅವರಿಗೆ ಯುವತಿಯರಿಗೆ ನೀಡಿ ಮತ್ತು ಬರುವಂತೆ ಮಾಡಿ. ಅರೆ ಪ್ರಜ್ಞಾ ಸ್ಥಿತಿಯಲ್ಲಿದ್ದ ಯುವತಿಯರ ಮೇಲೆ ಈ ಗ್ಯಾಂಗ್ ಅತ್ಯಾಚಾರ ಎಸಗಿದೆ ಎಂದು ತನಿಖೆಯಲ್ಲಿ ಸೂಚಿಸಲಾಗಿದೆ. ನಿಖಿಲ್ ಗ್ಯಾಂಗ್‌ನ ಮಾಸ್ಟರ್ ಮೈಂಡ್ ಆಗಿದ್ದು, ಈ ಜಾಲದ ಹಿಂದೆ ಈ ವ್ಯಕ್ತಿಗಳ ಶಂಕೆ ವ್ಯಕ್ತವಾಗಿದೆ. ಡ್ರಗ್ಸ್ ಪೂರೈಕೆದಾರರ ಪತ್ತೆಗಾಗಿ ಪೊಲೀಸರ ತಂಡ ಗೋವಾಕ್ಕೆ ತೆರಳಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.